spot_img
Saturday, February 14, 2026
spot_img

ಬ್ರಹ್ಮಾವರ: ಅಹೋರಾತ್ರಿ ಸತ್ಯಾಗ್ರಹದಲ್ಲಿ ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಅಂಶುಮಂತ್ ಗೌಡ ಭಾಗಿ

ಜನಪ್ರತಿನಿಧಿ ವಾರ್ತೆ] ಬ್ರಹ್ಮಾವರ, ಫೆ.27: ಎಲ್ಲಾ ರೈತ ಹೋರಾಟಗಳು ಕೂಡಾ ರೈತ ಕಾಳಜಿಯನ್ನೇ ಹೊಂದಿವೆ. ಬ್ರಹ್ಮಾವರ ಸಹಕಾರಿ ಸಕ್ಕರೆ ಕಾರ್ಖಾನೆಯ ವಿಚಾರದಲ್ಲಿ ರೈತ ಮುಖಂಡರಾದ ಕೆ.ಪ್ರತಾಪಚಂದ್ರ ಶೆಟ್ಟಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಅಹೋರಾತ್ರಿ ಸತ್ಯಾಗ್ರಹ ನ್ಯಾಯೋಚಿತವಾಗಿದೆ. ರೈತರಿಗಾಗಿ ಈ ಸತ್ಯಾಗ್ರಹ ನಡೆಯುತ್ತಿದೆ. ರೈತರಿಗೆ ನ್ಯಾಯ ಸಿಗಬೇಕು, ಕಾರ್ಖಾನೆಯಲ್ಲಿ ನಡೆದ ಅವ್ಯವಹಾರದ ಸಮಗ್ರ ತನಿಖೆಯಾಗಬೇಕು, ಸರ್ಕಾರ ರೈತರ ಸತ್ಯಾಗ್ರಹವನ್ನು ಗಂಭೀರವಾಗಿ ಸ್ವೀಕರಿಸಬೇಕು ಎಂದು ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಂಶುಮಂತ್ ಗೌಡ ಹೇಳಿದರು.
ಉಡುಪಿ ಜಿಲ್ಲಾ ರೈತ ಸಂಘದ ನೇತೃತ್ವದಲ್ಲಿ ಸಕ್ಕರೆ ಕಾರ್ಖಾನೆಯ ಬಳಿ ನಡೆಯುತ್ತಿರುವ ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ ಬಹುಕೋಟಿ ವಂಚನೆಯ ಮತ್ತು ಅದರ ತನಿಖೆಯಲ್ಲಿ ವಿಳಂಬವಾಗುತ್ತಿರುವುದರ ವಿರುದ್ಧ ಅನ್ನದಾತರ ನ್ಯಾಯಾಗ್ರಹ’ ಇಂದು (ಗುರುವಾರ) ಆರನೇ ದಿನದ ಸತ್ಯಾಗ್ರಹದಲ್ಲಿ ಭಾಗವಹಿಸಿ ಮಾತನಾಡಿದರು.
ಉಡುಪಿ ಜಿಲ್ಲಾ ರೈತ ಸಂಘದ ಅಧ್ಯಕ್ಷರಾದ ಕೆ.ಪ್ರತಾಪಚಂದ್ರ ಶೆಟ್ಟಿ, ಕಾಂಗ್ರೆಸ್ ಕಾರ್ಯಧ್ಯಕ್ಷರಾದ ಕಿಶನ್ ಹೆಗ್ಡೆ ಕೊಳ್ಕೆಬೈಲು, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎಸ್.ರಾಜು ಪೂಜಾರಿ, ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ಕೋಟೇಶ್ವರ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷ ಕೆದೂರು ಸದಾನಂದ ಶೆಟ್ಟಿ, ರೈತ ಮುಖಂಡರಾದ ಕೋಣಿ ಕೃಷ್ಣದೇವ ಕಾರಂತ್, ಚೋರಾಡಿ ಅಶೋಕ್ ಶೆಟ್ಟಿ,  ರೈತ ಸಂಘದ ಕಾವ್ರಾಡಿ ವಲಯಾಧ್ಯಕ್ಷ ಶರತ್ ಚಂದ್ರ ಶೆಟ್ಟಿ, ಕುಂದಾಪುರ ನಗರ ಪ್ರಾಧಿಕಾರದ ಅಧ್ಯಕ್ಷ ವಿನೋದ್ ಕ್ರಾಸ್ಟೋ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ದೇವಕಿ ಸಣ್ಣಯ್ಯ, ಚಂದ್ರಶೇಖರ ಶೆಟ್ಟಿ, ಭುಜಂಗ ಶೆಟ್ಟಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಸುಮನಾ ಬಿದ್ಕಲ್‌ಕಟ್ಟೆ, ಕಿಸಾನ್ ಘಟಕದ ಉದಯ ಕೊಂಬದ, ಕೆಂಚನೂರು ಸೋಮಶೇಖರ ಶೆಟ್ಟಿ, ಮುಸ್ತಾಕ್ ಆಹಮ್ಮದ್ ಬೆಳ್ವೆ, ಶಂಕರನಾರಾಯಣ ವ್ಯವಸಾಯ ಸೇವಾ ಸಹಕಾರ ಸಂಘದ ನಿರ್ದೇಶಕ ಶಾಡಿಗುಂಡಿ ರಾಜೀವ ಶೆಟ್ಟಿ, ಜಿ,.ಪಂ ಮಾಜಿ ಸದಸ್ಯ ಸುಧಾಕರ ಶೆಟ್ಟಿ, ರೈತ ಮುಖಂಡ ಸುರೇಶ ಹೆಗ್ಡೆ, ಅಂಪಾರು ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕ ಅಂಪಾರು ಕಿರಣ್ ಹೆಗ್ಡೆ, ಮೊದಲಾದವರು ಉಪಸ್ಥಿತರಿದ್ದರು.
ವಕೀಲರಾದ ಉಮೇಶ ಶೆಟ್ಟಿ ಶಾನ್ಕಟ್ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನಾಡಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!