spot_img
Wednesday, April 1, 2026
spot_img

94ಸಿ ಅಡಿ ಎಲ್ಲಾ ಅರ್ಹರಿಗೂ ಹಕ್ಕುಪತ್ರ ದೊರಕಿಸಿ ಕೊಡಲು ಬದ್ಧ-ಶಾಸಕ ಗಂಟಿಹೊಳೆ

ಕುಂದಾಪುರ, ಫೆ.27: ಕುಂದಾಪುರ ತಾಲೂಕು ಕಚೇರಿಯಲ್ಲಿ ನಡೆದ ವಂಡ್ಸೆ ಹೋಬಳಿಯ ಗ್ರಾಮಗಳಿಗೆ ಸಂಬಂಧಿಸಿದಂತೆ ಹಲವು ವರ್ಷಗಳಿಂದ ಸರಕಾರಿ ಭೂಮಿಯಲ್ಲಿ ವಾಸ್ತವ್ಯದ ಮನೆ ಕಟ್ಟಿಕೊಂಡ ಅರ್ಹ 32 ಮಂದಿ ಫಲನುಭವಿಗಳಿಗೆ 94 ಸಿ ಅಡಿ ಹಕ್ಕುಪತ್ರವನ್ನು ವಿತರಿಸಲಾಯಿತು.

ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆಯವರು ಹಕ್ಕುಪತ್ರ ವಿತರಿಸಿ ಮಾತನಾಡಿ ಸಾಕಷ್ಟು ವರ್ಷಗಳಿಂದ ವಿವಿಧ ಹಂತದ ಅಧಿಕಾರಿಗಳ ಬಳಿಯಲ್ಲಿ 94 ಸಿ ಅರ್ಜಿಗಳು ಸಮರ್ಪಕ ವಿಲೇವಾರಿ ಆಗದೇ ವಿಳಂಬವಾಗುತ್ತಿದ್ದರಿಂದ ಗ್ರಾಮೀಣ ಭಾಗದ ಬಡ ಕುಟುಂಬ ಗಳು ಸಂಕಷ್ಟ ಅನುಭವಿಸಿ ಬೇರೆ ಬೇರೆ ಸರಕಾರಿ ಯೋಜನೆ ಗಳಿಂದ ವಂಚಿತರಾಗಿದ್ದಾರೆ. ಇಂದು ಅಂತಹ 32 ಬಡ ಕುಟುಂಬಗಳಿಗೆ ಹಕ್ಕು ಪತ್ರ ನೀಡಲಾಗಿದ್ದು, ಮುಂದಿನ ದಿನಗಳಲ್ಲಿಯೂ ಕ್ಷೇತ್ರದ ವಂಡ್ಸೆ ಹೋಬಳಿಯ ಬಾಕಿ ಉಳಿದ ಎಲ್ಲಾ ಅರ್ಹ ಬಡ ಕುಟುಂಬಕ್ಕೂ 94 ಅಡಿ ಭೂಮಿಯ ಹಕ್ಕು ಪತ್ರ ಒದಗಿಸಲು ಬದ್ಧ ಎಂದು ತಿಳಿಸಿದರು.

ತಾಲೂಕಿನ ತಹಸೀಲ್ದಾರ್ ಮಲ್ಲಿಕಾರ್ಜುನ್, ಉಪ ತಹಸೀಲ್ದಾರ್ ಪ್ರಕಾಶ್, ಕಂದಾಯ ನಿರೀಕ್ಷಿಕರಾದ ರಾಘವೇಂದ್ರ, ಎಲ್ಲಾ ಗ್ರಾಮ ಆಡಳಿತ ಅಧಿಕಾರಿಗಳು ಹಾಗೂ ಫಲನುಭವಿಗಳು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!