spot_img
Tuesday, March 17, 2026
spot_img

ಆಲೂರು: ಟ್ಯೂಷನ್ ತರಗತಿ ಸಮಾರೋಪ

ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಕುಂದಾಪುರ ತಾಲೂಕಿನ ಚಿತ್ತೂರು ವಲಯದ ಆಲೂರು ಒಕ್ಕೂಟದ ಸಿರಿ ಜ್ಞಾನ ವಿಕಾಸ ಕೇಂದ್ರದಲ್ಲಿ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಟ್ಯೂಷನ್ ಕ್ಲಾಸ್ ಸಮಾರೋಪ ಕಾರ್ಯಕ್ರಮ ಸರಕಾರಿ ಪ್ರೌಢಶಾಲೆ ಆಲೂರು ಇಲ್ಲಿ ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉದಯ್ ಕುಮಾರ್ ಶೆಟ್ಟಿ ವಹಿಸಿದ್ದರು.

ಜ್ಞಾನವಿಕಾಸ ಕಾರ್ಯಕ್ರಮದ ಸಮನ್ವಯಾದಿಕಾರಿ ರೇಣುಕಾ ಕೋಡಪದವು ಮಾತನಾಡಿ, ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಲ್ಲಿ ಜರಗುವ ಅನೇಕ ಕಾರ್ಯಕ್ರಮಗಳಲ್ಲಿ ಟ್ಯೂಷನ್ ಕ್ಲಾಸ್ ಒಂದಾಗಿದೆ. ಗ್ರಾಮೀಣ ಭಾಗದಲ್ಲಿರುವ ಮಕ್ಕಳ ಸರ್ವತೋಮುಖ ಅಭಿವೃದ್ಧಿಯಲ್ಲಿ ಶಿಕ್ಷಣವು ಪ್ರಮುಖ ಪಾತ್ರವನ್ನು ವಹಿಸುತ್ತದೆ. ಕಲಿಕೆ ಎಂಬುದು ನಿರಂತರ ಪ್ರಕ್ರಿಯೆ ಕಲಿಕೆಯಲ್ಲಿ ಉಂಟಾಗುವ ಏರುಪೇರುಗಳನ್ನು ಹೋಗಲಾಡಿಸಲು ಶಿಕ್ಷಣ ಪ್ರಮುಖ ಪಾತ್ರ ವಹಿಸುತ್ತದೆ. ಶಿಕ್ಷಣದ ಮಟ್ಟವನ್ನು ಹೆಚ್ಚು ಮಾಡಲು ಟ್ಯೂಷನ್ ಕ್ಲಾಸ್ ಅತಿ ಅಗತ್ಯವಿದೆ ಎಂದು ಹೇಳಿದರು.

ಪ್ರಭಾರ ಮುಖ್ಯೋಪಾಧ್ಯಾಯರಾದ ಉದಯ್ ಕುಮಾರ್ ಶೆಟ್ಟಿ ಮಾತನಾಡಿ, ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ಮೂಲಭೂತ ಕೌಶಲ್ಯಗಳನ್ನು ಟ್ಯೂಷನ್ ಕ್ಲಾಸ್ ಮುಖಾಂತರ ಕಲ್ಪಿಸಿಕೊಟ್ಟಿದ್ದಾರೆ. ತರಗತಿಯಲ್ಲಿ ಮಾಡುವ ಪಾಠ ಏಕಕಾಲಕ್ಕೆ ಎಲ್ಲಾ ವಿದ್ಯಾರ್ಥಿಗಳನ್ನು ತಲುಪಲು ಕಷ್ಟ. ಯಾಕೆಂದರೆ ಒಂದು ತರಗತಿಯಲ್ಲಿ ಅನೇಕ ತರಹದ ವಿದ್ಯಾರ್ಥಿಗಳು ಇರುತ್ತಾರೆ. ಇಂತಹ ಸಂದರ್ಭದಲ್ಲಿ ಟ್ಯೂಷನ್ ನಮ್ಮ ಶಾಲೆಗೆ ಸಿಕ್ಕಿದ ಅತ್ಯುತ್ತಮ ಅವಕಾಶವಾಗಿದೆ ಎಂದು ಹೇಳಿದರು.

ವೇದಿಕೆಯಲ್ಲಿ ಆಲೂರು ಒಕ್ಕೂಟದ ಉಪಾಧ್ಯಕ್ಷೆ ಚಂದ್ರಾವತಿ, ಸೇವಾಪ್ರತಿನಿಧಿ ಚಂದ್ರಮತಿ, ಟ್ಯೂಷನ್ ಕ್ಲಾಸ್ ಶಿಕ್ಷಕಿ ಪ್ರೀತಿ, ಆಲೂರು ಪ್ರೌಢಶಾಲೆಯ ಶಿಕ್ಷಕಿಯರಾದ ಅಮೃತ, ವೀಣಾ ಉಪಸ್ಥಿತರಿದ್ದರು. ಚಂದ್ರಮತಿ ಸ್ವಾಗತಿಸಿದರು. ಶಿಕ್ಷಕರಾದ ಶಶಿಧರ್ ಶೆಟ್ಟಿ ಕಾರ್ಯಕ್ರಮವನ್ನು ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!