spot_img
Tuesday, March 17, 2026
spot_img

ಸಕ್ಕರೆ ಕಾರ್ಖಾನೆ ಹಗರಣ | ತಪ್ಪಿತಸ್ಥರನ್ನು ಬಚಾವ್‌ ಮಾಡುವ ಯಾವ ಉದ್ದೇಶವೂ ಕಾಂಗ್ರೆಸ್‌ ಸರ್ಕಾರಕ್ಕೆ ಇಲ್ಲ : ಸೊರಕೆ

ಪ್ರಾಸಿಕ್ಯೂಶನ್‌ಗೆ ಕೆಲವೇ ದಿನಗಳಲ್ಲಿ ಅಧಿಕೃತ ಆದೇಶ : ಸೊರಕೆ 

ಜನಪ್ರತಿನಿಧಿ (ಬ್ರಹ್ಮಾವರ) :  ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ ನಡೆದಿರುವ ಹಗರಣದ ಬಗ್ಗೆ ನಡೆಯುತ್ತಿರುವ ತನಿಖೆ ವಿಳಂಬವಾಗುತ್ತಿರುವುದಕ್ಕೆ ಸರ್ಕಾರದ ಪಾತ್ರವಿಲ್ಲ. ಕೆಲವು ತಾಂತ್ರಿಕ ಕಾರಣಗಳಿಂದ ತನಿಖೆ ವಿಳಂಬವಾಗಿದೆಯೇ ಹೊರತು, ತಪ್ಪಿತಸ್ಥರನ್ನು ಬಚಾವ್‌ ಮಾಡುವ ಯಾವ ಉದ್ದೇಶವೂ ಕಾಂಗ್ರೆಸ್‌ ಸರ್ಕಾರಕ್ಕೆ ಇಲ್ಲ ಎಂದು ಮಾಜಿ ಸಚಿವ ವಿನಯ್‌ ಕುಮಾರ್‌ ಸೊರಕೆ ಹೇಳಿದ್ದಾರೆ.

ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಪ್ರವೇಶ ರಸ್ತೆಯ ಬಳಿ ʼಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ ಬಹುಕೋಟಿ ವಂಚನೆಯ ಮತ್ತು ಅದರ ತನಿಖೆಯಲ್ಲಿ ವಿಳಂಬ ನೀತಿಯ ವಿರುದ್ಧ ನಡೆಯುತ್ತಿರುವ ಉಡುಪಿ ಜಿಲ್ಲಾ ರೈತ ಸಂಘದ ಅನಿರ್ದಿಷ್ಟಾವಧಿ ಅಹೋರಾತ್ರಿ ಸತ್ಯಾಗ್ರಹಕ್ಕೆ ಇಂದು(ಗುರುವಾರ) ಬೆಂಬಲ ಸೂಚಿಸಿ, ಜನಪ್ರತಿನಿಧಿ ಪತ್ರಿಕೆಯೊಂದಿಗೆ ಮಾತನಾಡಿದರು.

ಈ ಜಿಲ್ಲೆಯಲ್ಲಿ ಒಬ್ಬನೇ ಒಬ್ಬ ಚುನಾಯಿತ ಪ್ರತಿನಿಧಿ ಕಾಂಗ್ರೆಸ್‌ನಿಂದ ಇಲ್ಲ. ಸಾರ್ವಜನಿಕ ಸ್ವತ್ತು ಈ ರೀತಿ ಲೂಟಿ ಆಗಿರುವುದು ಗೊತ್ತಿದ್ದರೂ ಬಿಜೆಪಿಯ ಚುನಾಯಿತ ಶಾಸಕರು, ಸಂಸದರು ಈ ಬಗ್ಗೆ ಧ್ವನಿ ಎತ್ತದೆ ಮೌನ ವಹಿಸಿದ್ದಾರೆ. ರಾಜ್ಯದಲ್ಲಿ ನಮ್ಮ ಸರ್ಕಾರ ಇದೆ. ಈಗ ನಮಗೆ ಯಾವುದೇ ಸರ್ಕಾರದ ಮಟ್ಟದಲ್ಲಿ ಅಧಿಕೃತ ಜವಾಬ್ದಾರಿ ಇಲ್ಲದೇ ಇರುವಾಗಲೂ ಪ್ರಕರಣದ ಬಗ್ಗೆ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮವಹಿಸುವಂತೆ ಮುಖ್ಯಮಂತ್ರಿಗಳಿಗೆ, ಗೃಹ ಮಂತ್ರಿಗಳಿಗೆ, ಸಹಕಾರಿ ಇಲಾಖೆಯ ಸಚಿವರಿಗೆ ಮನವಿ ಸಲ್ಲಿಸಿದ್ದೇವೆ ಎಂದು ಹೇಳಿದ್ದಾರೆ.

ಉಡುಪಿ ಜಿಲ್ಲಾ ರೈತ ಸಂಘ ಧರಣಿ ಕೂತ ಬಳಿಕ ಪ್ರಾಸಿಕ್ಯೂಶನ್‌ ಗೆ ಆದೇಶವಾಗಿದೆ. ಅಧಿಕೃತವಾಗಿ ಕೆಲವೇ ದಿನಗಳಲ್ಲಿ ಆದೇಶ ಆಗಬಹುದು ಎನ್ನುವ ನಂಬಿಕೆ ಇದೆ ಎಂದು ಅವರು ಹೇಳಿದ್ದಲ್ಲದೇ, ಕಾನೂನು ಪ್ರಕ್ರಿಯೆಯಲ್ಲಿ ವಿಳಂಬವಾಗಿದೆ ಹೊರತು, ಉದ್ದೇಶಪೂರ್ವಕವಾಗಿ ಯಾರನ್ನೂ ರಕ್ಷಿಸುವ ಯಾವುದೇ ಉದ್ದೇಶ ನಮ್ಮ ಸರ್ಕಾರಕ್ಕಿಲ್ಲ ಎಂದು ಅವರು ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!