spot_img
Tuesday, March 17, 2026
spot_img

ವಿಧಾನಸೌಧದಲ್ಲಿ ಓದುಗರ, ಸಾಹಿತ್ಯಾಸಕ್ತರ ಹಬ್ಬ: ಸದುಪಯೋಗ ಪಡಿಸಿಕೊಳ್ಳಲು ಸಿಎಂ ಕರೆ

ಜನಪ್ರತಿನಿಧಿ (ಬೆಂಗಳೂರು) : ಪುಸ್ತಕ ಮತ್ತು ಸಾಹಿತ್ಯದ ಓದು ಮನುಷ್ಯನನ್ನು ಹೆಚ್ಚೆಚ್ಚು ಮಾನವೀಯಗೊಳಿಸುತ್ತದೆ. ಆದ್ದರಿಂದ ಓದುವ ಅಭ್ಯಾಸ ಹೆಚ್ಚಿಸಿಕೊಳ್ಳಿ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ವಿಧಾನಸೌಧದಲ್ಲಿ ಪ್ರಪ್ರಥಮ ಬಾರಿಗೆ ಆಯೋಜಿಸಲಾಗಿರುವ ಪುಸ್ತಕ ಮೇಳವನ್ನು ಉದ್ಘಾಟಿಸಿ ಮಾತನಾಡಿದರು.

ವಿಧಾನಸೌಧದಲ್ಲಿ ಓದುಗರ, ಸಾಹಿತ್ಯಾಸಕ್ತರ ಹಬ್ಬ. ಇದನ್ನು ಸಾಹಿತ್ಯಾಸಕ್ತರು ಸದುಪಯೋಗ ಪಡಿಸಿಕೊಳ್ಳಬೇಕು.

ಇನ್ನು ಮುಂದೆ ಪ್ರತೀ ವರ್ಷ ವಿಧಾನಸೌಧದಲ್ಲಿ ಸಾಹಿತ್ಯ, ಪುಸ್ತಕ ಹಬ್ಬ ನಡೆಸಲಾಗುವುದು‌ ಎಂದು ಇದೇ ಸಂದರ್ಭದಲ್ಲಿ ಘೋಷಿಸಿದರು.

ಸಾಹಿತ್ಯದ ಓದು ಮನುಷ್ಯನನ್ನು ಹೆಚ್ಚೆಚ್ಚು ಮಾನವೀಯಗೊಳಿಸುತ್ತದೆ. ಪುಸ್ತಕಗಳನ್ನು ಖರೀದಿಸಿ, ಮನೆ ಮನೆಯಲ್ಲಿ ಗ್ರಂಥಾಲಯ ಮಾಡಿಕೊಳ್ಳಿ. ಮಕ್ಕಳು ಮೊಬೈಲ್ ಮತ್ತು ಡಿಜಿಟಲ್ ಚಟದಿಂದ ಹೊರಗೆ ಬಂದು ಪುಸ್ತಕಗಳನ್ನು ಓದುವ ಹವ್ಯಾಸ, ಅಭ್ಯಾಸ ಬೆಳೆಸಿಕೊಳ್ಳಬೇಕು ಎಂದು ಇದೇ ಸಂದರ್ಭದಲ್ಲಿ ಕರೆ ನೀಡಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!