spot_img
Monday, March 16, 2026
spot_img

ಮಾಜಿ ಸಿಎಂ ಬಿಎಸ್‌ವೈ ವಿರುದ್ಧ ಪೋಕ್ಸೋ ಪ್ರಕರಣ : ಸಮನ್ಸ್ ಜಾರಿಗೊಳಿಸಿದ ಕೋರ್ಟ್‌

ಜನಪ್ರತಿನಿಧಿ (ಬೆಂಗಳೂರು) : ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಮುಂದೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರಿನ 1 ನೇ ತ್ವರಿತಗತಿ ನ್ಯಾಯಾಲಯ ಸೂಚಿಸಿ ಸಮನ್ಸ್ ಜಾರಿ ಮಾಡಿದೆ.

ಬಿಎಸ್‌ವೈ ಅವರ ಜೊತೆ ಸಹ-ಆರೋಪಿಗಳಾದ ವೈ.ಎಂ. ಅರುಣಾ, ರುದ್ರೇಶ ಮತ್ತು ಮರುಳಸಿದ್ಧಯ್ಯ ಜಿ. ಮರಿಸ್ವಾಮಿ ಅವರಿಗೆ ಸಹ ಸಮನ್ಸ್ ಜಾರಿ ಮಾಡಿ ಮಾರ್ಚ್ 15ರಂದು ವಿಚಾರಣೆ ನಿಗದಿಪಡಿಸಿದೆ.

ಪೋಕ್ಸೋ ಪ್ರಕರಣದಲ್ಲಿ ಇತ್ತೀಚೆಗೆ ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಿತ್ತು. ಬಿ.ಎಸ್. ಯಡಿಯೂರಪ್ಪ ಅವರಿಗೆ ದೊಡ್ಡ ರಿಲೀಫ್ ನೀಡಿದ ಹೈಕೋರ್ಟ್, ಯಡಿಯೂರಪ್ಪ ಅವರನ್ನು ಬಂಧಿಸದಂತೆ ಸೂಚಿಸಿತ್ತು. ವಿಚಾರಣೆಗೆ ಮೊದಲು ಹಾಜರಾತಿಯಿಂದ ವಿನಾಯಿತಿ ನೀಡಲಾಗಿತ್ತು.

ಪ್ರಕರಣ ರದ್ದತಿ ಕೋರಿ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್ ಧಾರವಾಡ ಪೀಠ, ನಿರೀಕ್ಷಣಾ ಜಾಮೀನು ನೀಡಿತ್ತು. ಆದರೆ, ಪ್ರಕರಣ ರದ್ದು ಮಾಡಲು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ನಿರಾಕರಿಸಿತ್ತು. ಹೀಗಾಗಿ ಯಡಿಯೂರಪ್ಪ ಬಂಧನದಿಂದ ಪಾರಾದರೂ ವಿಚಾರಣೆ ಎದುರಿಸಲೇಬೇಕಾಗಿದೆ. ಆದ್ದರಿಂದ ಇದೀಗ ಬೆಂಗಳೂರಿನ ನ್ಯಾಯಾಲಯ ವಿಚಾರಣೆಗೆ ದಿನ ನಿಗದಿಪಡಿಸಿದೆ.

ಏನಿದು ಪ್ರಕರಣ

ಬಿ ಎಸ್ ಯಡಿಯೂರಪ್ಪ ಅವರ ಬಳಿ ಸಹಾಯ ಕೋರಿ ತಾಯಿ ಮತ್ತು ಅವರ ಅಪ್ರಾಪ್ತ ವಯಸ್ಸಿನ ಮಗಳು ಬೆಂಗಳೂರಿನ ಡಾಲರ್ಸ್ ಕಾಲೊನಿಯಲ್ಲಿರುವ ಅವರ ನಿವಾಸಕ್ಕೆ ಬಂದಿದ್ದಾದ ಬಾಲಕಿಯನ್ನು ಕೋಣೆಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ನಡೆಸಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಸಂಬಂಧ ಬಾಲಕಿಯ ತಾಯಿ ಸದಾಶಿವನಗರ ಠಾಣೆಗೆ ದೂರು ನೀಡಿದ್ದರು. ಬಳಿಕ ಯಡಿಯೂರಪ್ಪ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (POCSO) ಕಾಯ್ದೆಯಡಿ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!