spot_img
Monday, March 16, 2026
spot_img

ಬ್ರಹ್ಮಾವರ: ಅನ್ನದಾತರ ಅಹೋರಾತ್ರಿ ಸತ್ಯಾಗ್ರಹ ಏಳನೇ ದಿನಕ್ಕೆ

ಜನಪ್ರತಿನಿಧಿ ವಾರ್ತೆ] ಬ್ರಹ್ಮಾವರ: ಉಡುಪಿ ಜಿಲ್ಲಾ ರೈತ ಸಂಘದ ನೇತೃತ್ವದಲ್ಲಿ ಸಕ್ಕರೆ ಕಾರ್ಖಾನೆಯ ಬಳಿ ನಡೆಯುತ್ತಿರುವ ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ ಬಹುಕೋಟಿ ವಂಚನೆಯ ಮತ್ತು ಅದರ ತನಿಖೆಯಲ್ಲಿ ವಿಳಂಬವಾಗುತ್ತಿರುವುದರ ವಿರುದ್ಧ ‘ಅನ್ನದಾತರ ನ್ಯಾಯಾಗ್ರಹ’ ಇಂದು (ಶುಕ್ರವಾರ) ಏಳನೇ ದಿನದ ಸತ್ಯಾಗ್ರಹ ಉಡುಪಿ ಜಿಲ್ಲಾ ರೈತ ಸಂಘ ಬೈಂದೂರು ವಲಯದ ನೇತೃತ್ವದಲ್ಲಿ ನಡೆಯಿತು.
ಉಡುಪಿ ಜಿಲ್ಲಾ ರೈತ ಸಂಘದ ಬೈಂದೂರು ವಲಯದ ಅಧ್ಯಕ್ಷ ವಸಂತ ರಾಜ ಹೆಗ್ಡೆ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಎಸ್.ರಾಜು ಪೂಜಾರಿ, ಭಾರತೀಯ ಕಿಸಾನ್ ಸಂಘದ ಅಧ್ಯಕ್ಷ ಸೀತಾರಾಮ ಗಾಣಿಗ ಹಾಲಾಡಿ, ಕರ್ನಾಟಕ ಪ್ರಾಂತ ರೈತ ಸಂಘದ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ಸತ್ಯಾಗ್ರಹವನ್ನು ಉದ್ದೇಶಿಸಿ ಮಾತನಾಡಿದರು.
ಉಡುಪಿ ಜಿಲ್ಲಾ ರೈತ ಸಂಘದ ಅಧ್ಯಕ್ಷರಾದ ಕೆ.ಪ್ರತಾಪಚಂದ್ರ ಶೆಟ್ಟಿ, ನೋಟರಿ ವಕೀಲರಾದ ಪ್ರಸನ್ನ ಕುಮಾರ್ ಶೆಟ್ಟಿ, ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ರೈತ ಸಂಘದ ಮುಖಂಡರಾದ ಕೆದೂರು ಸದಾನಂದ ಶೆಟ್ಟಿ, ಉದಯ ಕುಮಾರ ಶೆಟ್ಟಿ ಅಡಿಕೆಕೊಡ್ಲು, ಶರತ ಕುಮಾರ್ ಶೆಟ್ಟಿ ಬಾಳಿಕೆರೆ, ಭುಜಂಗ ಶೆಟ್ಟಿ, ಜಯರಾಮ ಶೆಟ್ಟಿ ಸುರ್‍ಗೊಳ್ಳಿ, ಚಂದ್ರಶೇಖರ ಶೆಟ್ಟಿ ಮೊಳಹಳ್ಳಿ, ಲವಕರ ಶೆಟ್ಟಿ ಮೊಳಹಳ್ಳಿ, ಕೆಂಚನೂರು ಸೋಮಶೇಖರ ಶೆಟ್ಟಿ, ಕೃಷ್ಣ ಪೂಜಾರಿ ಅಮಾಸೆಬೈಲು, ಶಾಡಿಗುಂಡಿ ರಾಜೀವ ಶೆಟ್ಟಿ, ಜಿ.ಪಂ.ಮಾಜಿ ಸದಸ್ಯ ಸುಧಾಕರ ಶೆಟ್ಟಿ, ರಮೇಶ ಶೆಟ್ಟಿ ವಕ್ವಾಡಿ ಮುಂತಾದವರು ಉಪಸ್ಥಿತರಿದ್ದರು.
ಬೈಂದೂರು ವಲಯದ ನೂರಾರು ರೈತರು ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!