spot_img
Tuesday, March 17, 2026
spot_img

ಮೂಡ್ಲಕಟ್ಟೆ ಐ‌ಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯಲ್ಲಿ ವಾರ್ಷಿಕ ಕ್ರೀಡೋತ್ಸವ ಉದ್ಘಾಟನೆ

ಕುಂದಾಪುರ: ಕ್ರೀಡೆಗೆ ಕಾಲೇಜು ಉತ್ತಮ ರೀತಿಯಲ್ಲಿ ಉತ್ತೇಜನ ನೀಡುತ್ತಿದ್ದು, ಇಲ್ಲಿ ಅತ್ಯುತ್ತಮ ಕ್ರೀಡಾ ಪ್ರತಿಭೆಗಳು ಬೆಳಕಿಗೆ ಬರುತ್ತಿದ್ದಾರೆ. ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರೀಯ ಮತ್ತು ವಿಶ್ವವಿದ್ಯಾಲಯದ ಮಟ್ಟದ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲಿ. ಶಿಕ್ಷಣದ ಜೊತೆಗೆ ಕ್ರೀಡೆಗೂ ಕೂಡ ಮಹತ್ವ ನೀಡಿ ಎಂದು ಜನತಾ ಪಿ ಯು ಕಾಲೇಜು ಹೆಮ್ಮಾಡಿ ಇದರ ದೈಹಿಕ ಶಿಕ್ಷಣ ನಿರ್ದೇಶಕ ಕೃಷ್ಣ ಮೊಗವೀರ ತಿಳಿಸಿದರು.

ಮೂಡ್ಲಕಟ್ಟೆ ಐ‌ಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯಲ್ಲಿ ೨೪ ಫೆಬ್ರವರಿ ೨೦೨೫ರ ಕ್ರೀಡೋತ್ಸವನ್ನು ಉದ್ಘಾಟಿಸಿ ಮಾತನಾಡಿದರು.
ಕ್ರೀಡಾಕೂಟದ ಪ್ರಮುಖ ಆಕರ್ಷಣೆಯಾಗಿ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಪಥಸಂಚಲನದಲ್ಲಿ ಪಾಲ್ಗೊಂಡರು. ೬ ತಂಡಗಳಾಗಿ ವಿಂಗಡಿಸಲಾದ ವಿದ್ಯಾರ್ಥಿಗಳ ಗುಂಪು ಅದ್ಬುತ ಪಥಸಂಚಲನವನ್ನು ಪ್ರದರ್ಶಿಸಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರತಿಭಾ ಎಂ ಪಾಟೀಲ್ ಅವರು ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಿ, ಪರಸ್ಪರ ಸಹಕಾರ ಹಾಗೂ ಸ್ಪರ್ಧಾ ಮನೋಭಾವನೆಯನ್ನು ಹೊಂದಿ ಕ್ರೀಡಾಕೂಟವನ್ನು ಯಶಸ್ವಿಗೊಳಿಸಿ ಎಂದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಂಸ್ಥೆಯ ಬ್ರ್ಯಾಂಡ್ ಬಿಲ್ಡಿಂಗ್ ನಿರ್ದೇಶಕರಾದ ಡಾ. ರಾಮಕೃಷ್ಣ ಹೆಗ್ಡೆ, ’ಕಾಲೇಜಿನ ಆಡಳಿತ ಮಂಡಳಿ ಕ್ರೀಡೆಗೆ ಮಹತ್ವ ನೀಡುತ್ತದೆ. ಅದಕ್ಕಾಗಿ ಹೊಸತಾಗಿ 400 ಮೀಟರ್ ಟ್ರ್ಯಾಕ್ ಅನ್ನು ನಿರ್ಮಿಸಿ ಕ್ರೀಡಾಪಟುಗಳಿಗೆ ಉತ್ತಮ ಅವಕಾಶ ನೀಡುತ್ತಿದೆ, ವಿದ್ಯಾರ್ಥಿಗಳು ಅದನ್ನು ಸದುಪಯೋಗಪಡಿಸಿಕೊಳ್ಳಿ’ ಎಂದರು.

ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಪ್ರವೀಣ್ ಖಾರ್ವಿ, ವಾರ್ಷಿಕ ಕ್ರೀಡಾ ವರದಿ ವಾಚಿಸಿದರು. ಶ್ರೀರಕ್ಷ ಸ್ವಾಗತಿಸಿ, ವಂದಿಸಿದರು. ಕಾಲೇಜಿನ ಉಪನ್ಯಾಸಕ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸಂತೃಪ್ತಿ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!