spot_img
Tuesday, March 17, 2026
spot_img

ಬ್ರಹ್ಮಾವರ: ‘ಅನ್ನದಾತರ ಅಹೋರಾತ್ರಿ’ ಸತ್ಯಾಗ್ರಹ ಎಂಟನೇ ದಿನಕ್ಕೆ

ಜನಪ್ರತಿನಿಧಿ ವಾರ್ತೆ] ಬ್ರಹ್ಮಾವರ: ಉಡುಪಿ ಜಿಲ್ಲಾ ರೈತ ಸಂಘದ ನೇತೃತ್ವದಲ್ಲಿ ಸಕ್ಕರೆ ಕಾರ್ಖಾನೆಯ ಬಳಿ ನಡೆಯುತ್ತಿರುವ ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ ಬಹುಕೋಟಿ ವಂಚನೆಯ ಮತ್ತು ಅದರ ತನಿಖೆಯಲ್ಲಿ ವಿಳಂಬವಾಗುತ್ತಿರುವುದರ ವಿರುದ್ಧ ಅನ್ನದಾತರ ನ್ಯಾಯಾಗ್ರಹ’ ಇಂದು (ಶನಿವಾರ) ಎಂಟನೇ ದಿನಕ್ಕೆ ಕಾಲಿಟ್ಟಿದೆ. ಶನಿವಾರ ಉಡುಪಿ ಜಿಲ್ಲಾ ರೈತ ಸಂಘ ಸಿದ್ಧಾಪುರ ವಲಯದ ನೇತೃತ್ವದಲ್ಲಿ ಸತ್ಯಾಗ್ರಹ ನಡೆಯಿತು.

ಉಡುಪಿ ಜಿಲ್ಲಾ ರೈತ ಸಂಘದ ಸಿದ್ಧಾಪುರ ವಲಯದ ಅಧ್ಯಕ್ಷ ಸಂಪಿಗೇಡಿ ಸಂಜೀವ ಶೆಟ್ಟಿ, ಸತೀಶ ಶೆಟ್ಟಿ ಕಡ್ರಿ, ವಾಸುದೇವ ಪೈ, ಶ್ರೀನಿವಾಸ ಸೌಡ, ರಾಮಚಂದ್ರ ದೇವಾಡಿಗ ಶಂಕರನಾರಾಯಣ, ಸೂರ್ಯಪ್ರಕಾಶ್ ದಾಮ್ಲೆ, ರಾಜೀವ ಶೆಟ್ಟಿ ಶಾಡಿಗಂಡಿ ಮೊದಲಾದವರು ಸತ್ಯಾಗ್ರಹದಲ್ಲಿ ಭಾಗವಹಿಸಿದ್ದರು.

ಉಡುಪಿ ಜಿಲ್ಲಾ ರೈತ ಸಂಘದ ಅಧ್ಯಕ್ಷರಾದ ಕೆ.ಪ್ರತಾಪಚಂದ್ರ ಶೆಟ್ಟಿ, ಕಾಂಗ್ರೆಸ್ ಮುಖಂಡರಾದ ಎಂ.ಎ ಗಫೂರ್, ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ್ ಶೆಟ್ಟಿ ಗುಡಿಬೆಟ್ಟು, ಕೊಲ್ಲೂರು ದೇವಳದ ಮಾಜಿ ಧರ್ಮದರ್ಶಿ ವಂಡಬಳ್ಳಿ ಜಯರಾಮ ಶೆಟ್ಟಿ, ರೈತ ಸಂಘದ ಮುಖಂಡರಾದ ಕೆದೂರು ಸದಾನಂದ ಶೆಟ್ಟಿ, ಭುಜಂಗ ಶೆಟ್ಟಿ, ಕೋಣಿ ಕೃಷ್ಣದೇವ ಕಾರಂತ, ಜಿ.ಪಂ.ಮಾಜಿ ಸದಸ್ಯ ಸುಧಾಕರ ಶೆಟ್ಟಿ, ಅಶೋಕ್ ಶೆಟ್ಟಿ ಚೋರಾಡಿ ಮುಂತಾದವರು ಉಪಸ್ಥಿತರಿದ್ದರು.

ನ್ಯಾಯವಾದಿ ಉಮೇಶ ಶೆಟ್ಟಿ ಶಾನ್ಕಟ್ಟು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸತ್ಯಾಗ್ರಹದಲ್ಲಿ ಸಿದ್ಧಾಪುರ ವಲಯದ ನೂರಾರು ರೈತರು ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!