spot_img
Tuesday, March 17, 2026
spot_img

ಬ್ರಹ್ಮಾವರ ಸತ್ಯಾಗ್ರಹ ಚಪ್ಪರಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ | ನ್ಯಾಯ ಎಲ್ಲರಿಗೂ ಒಂದೆ, ತಪ್ಪಿತಸ್ಥರಿಗೆ ಕಾನೂನು ಪ್ರಕಾರ ಕ್ರಮ-ಡಿ.ಕೆ.ಶಿ

ಜನಪ್ರತಿನಿಧಿ ವಾರ್ತೆ] ಬ್ರಹ್ಮಾವರ: ಬ್ರಹ್ಮಾವರ ಸಕ್ಕರೆ ಗುಜರಿ ಅವ್ಯಹಾರವಾದ ಬಗ್ಗೆ ಪ್ರತಾಪಚಂದ್ರ ಶೆಟ್ಟರ ನೇತೃತ್ವದಲ್ಲಿ ರೈತರು ನಡೆಸುತ್ತಿರುವ ಸತ್ಯಾಗ್ರಹ ಸರ್ಕಾರದ ಗಮನಕ್ಕೆ ಬಂದಿದೆ. ರೈತರಿಗೆ ನ್ಯಾಯ ನೀಡಲು ಸರ್ಕಾರ ಬದ್ದವಿದೆ. ಈಗಾಗಲೇ ಮುಖ್ಯಮಂತ್ರಿಗಳು, ಗೃಹ ಸಚಿವರ ಗಮನಕ್ಕೆ ವಿಚಾರ ತರಲಾಗಿದೆ. ಈ ಪ್ರಕರಣದಲ್ಲಿ ನ್ಯಾಯ ಒದಗಿಸುವ ಬಗ್ಗೆ ಬೆಂಗಳೂರಿನಲ್ಲಿ ವಿಶೇಷ ಸಭೆ ನಡೆಸಿ ತೀರ್ಮಾನ ತಗೆದುಕೊಳ್ಳಲಾಗುವುದು. ರೈತ ಸಂಘದ ಪ್ರಮುಖರು ಈ ಸಭೆಯಲ್ಲಿ ಭಾಗವಹಿಸಬೇಕು. ನಿಮ್ಮ ಹೋರಾಟಕ್ಕೆ ಜಯವಾಗಲಿ, ನ್ಯಾಯಪೀಠದ ಸ್ಥಾನದಿಂದ ನ್ಯಾಯಯುತವಾಗಿ ತನಿಖೆ ಆಗಬೇಕು ಎನ್ನುವುದು ನಿಮ್ಮ ಬೇಡಿಕೆ ಸರಕಾರ ನಿಮ್ಮ ಬೇಡಿಕೆಗೆ ಮನ್ನಣೆ ಕೊಡುತ್ತದೆ. ನ್ಯಾಯ ಎಲ್ಲರಿಗೂ ಒಂದೇ. ಅನ್ಯಯ ಮಾಡಿದವರಿಗೆ ಕಾನೂನು ಪ್ರಕಾರ ಕ್ರಮವಾಗುತ್ತದೆ. ಎಂದು ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ಉಡುಪಿ ಜಿಲ್ಲಾ ರೈತ ಸಂಘದ ನೇತೃತ್ವದಲ್ಲಿ ಸಕ್ಕರೆ ಕಾರ್ಖಾನೆಯ ಬಳಿ ನಡೆಯುತ್ತಿರುವ ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ ಬಹುಕೋಟಿ ವಂಚನೆಯ ಮತ್ತು ಅದರ ತನಿಖೆಯಲ್ಲಿ ವಿಳಂಬವಾಗುತ್ತಿರುವುದರ ವಿರುದ್ಧ ಅನ್ನದಾತರ ನ್ಯಾಯಾಗ್ರಹ’ ಇಂದು (ರವಿವಾರ) ಒಂಭತ್ತನೆ ದಿನ ಸತ್ಯಾಗ್ರಹ ಸ್ಥಳಕ್ಕೆ ಭೇಟಿ ಅವರು ಮಾತನಾಡಿದರು.

ಬ್ರಹ್ಮಾವರ ಸಹಕಾರಿ ಸಕ್ಕರೆ ಕಾರ್ಖಾನೆಯ ಬಗ್ಗೆ ನನಗೂ ಅನುಭವವಿದೆ. ನಾನು ಸಹಕಾರ ಸಚಿವನಾಗಿದ್ದಾಗ ಆಸ್ಕರ್ ಫೆರ್ನಾಂಡೀಸ್ ಅವರು ನನ್ನ ಗಮನಕ್ಕೆ ತಂದಿದ್ದರು. 110 ಎಕ್ರೆ ವಿಶಾಲವಾದ ಸ್ಥಳವಕಾಶ ಇರುವ ಕಾರ್ಖಾನೆ ಇದು. ಕಾರ್ಖಾನೆಯ ಗುಜರಿ ಹಾಕುವ ಸಂದರ್ಭ ಅವ್ಯಹಾರವಾದ ಬಗ್ಗೆ ಸರಕಾರದ ಗಮನಕ್ಕೆ ಬಂದಿದೆ. ಸರಕಾರ ಈಗಾಗಲೇ ತನಿಖೆಗೂ ಆದೇಶ ಮಾಡಿದೆ. ನಿಮ್ಮ ಹೋರಾಟಕ್ಕೆ ಸಹಕಾರ ನೀಡುತ್ತೇವೆ. ಈ ಬಗ್ಗೆ ವಿಧಾನ ಪರಿಷತ್ ಸದಸ್ಯರು ಅಧಿವೇಶನದಲ್ಲಿ ವಿಷಯ ಪ್ರಸ್ತಾಪ ಮಾಡಲಿದ್ದಾರೆ ಎಂದರು.

ಉಡುಪಿ ಜಿಲ್ಲಾ ರೈತ ಸಂಘದ ಅಧ್ಯಕ್ಷರಾದ ಪ್ರತಾಪಚಂದ್ರ ಶೆಟ್ಟಿ ತನಿಖೆಯ ವಿಳಂಬ ನೀತಿಯನ್ನು ಉಪ ಮುಖ್ಯಮಂತ್ರಿಗಳ ಗಮನಕ್ಕೆ ತಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಐವನ್ ಡಿಸೋಜ, ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ, ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ, ವಿನಯ ಕುಮಾರ್ ಸೊರಕೆ, ಅಶೋಕ್ ಕುಮಾರ್ ಕೊಡವೂರು, ದಿನೇಶ ಹೆಗ್ಡೆ ಮೊಳಹಳ್ಳಿ, ಪ್ರಸಾದ ರಾಜ್ ಕಾಂಚನ್, ಮಲ್ಯಾಡಿ ಶಿವರಾಮ ಶೆಟ್ಟಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ, ಎಂ,ಎ ಗಫೂರ್, ಎಸ್.ರಾಜು ಪೂಜಾರಿ, ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ಉದಯಕುಮಾರ್ ಶೆಟ್ಟಿ ಅಡಿಕೆಕೊಡ್ಲು  ಮೊದಲಾದವರು ಉಪಸ್ಥಿತರಿದ್ದರು.

ಒಂಭತ್ತನೆ ದಿನದ ಸತ್ಯಾಗ್ರಹದ ನೇತೃತ್ವವನ್ನು ಉಡುಪಿ ಜಿಲ್ಲಾ ರೈತ ಸಂಘ ವಂಡ್ಸೆ ವಲಯ ವಹಿಸಿತ್ತು. ಉಡುಪಿ ಜಿಲ್ಲಾ ರೈತ ಸಂಘದ ವಂಡ್ಸೆ ವಲಯಾಧ್ಯಕ್ಷರಾದ ಉದಯಕುಮಾರ್ ಶೆಟ್ಟಿ ಅಡಿಕೆಕೊಡ್ಲು ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿ ಬ್ರಹ್ಮಾವರ ಸಹಕಾರ ಸಕ್ಕರೆ ಕಾರ್ಖಾನೆ ಗುಜರಿ ಮಾರಾಟದಲ್ಲಿ ಆದ ಅವ್ಯಹಾರ, ತನಿಖೆಯಲ್ಲಿ ಆಗುತ್ತಿರುವ ವಿಳಂಬ ನೀತಿಯನ್ನು ವಿವರಿಸಿದರು

ರೈತ ಮುಖಂಡರಾದ ಕೆದೂರು ಸದಾನಂದ ಶೆಟ್ಟಿ, ವಂಡಬಳ್ಳಿ ಜಯರಾಮ ಶೆಟ್ಟಿ, ಕುಂದಾಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿನೋದ್ ಕ್ರಾಸ್ಟೋ, ವೆಲೇರಿಯನ್ ಮಿನೇಜಸ್ ಮೊದಲಾದವರು ಸತ್ಯಾಗ್ರಹನಿರತರನ್ನು ಉದ್ದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ  ಜಿ.ಪಂ ಮಾಜಿ ಸದಸ್ಯೆ ಜ್ಯೋತಿ ನಾಯಕ್, ಜ್ಯೋತಿ ಪುತ್ರನ್, ಸುಧಾಕರ ಶೆಟ್ಟಿ, ಚೋರಾಡಿ ಅಶೋಕ್ ಶೆಟ್ಟಿ, ಶರತ್ ಕುಮಾರ್ ಶೆಟ್ಟಿ ಬಾಳಿಕೆರೆ, ಕೆಡಿಪಿ ಸದಸ್ಯ ಪ್ರಸನ್ನಕುಮಾರ್ ಶೆಟ್ಟಿ, ತಾ.ಪಂ.ಮಾಜಿ ಸದಸ್ಯ ಉದಯ ಪೂಜಾರಿ, ಶಾಡಿಗುಂಡಿ ರಾಜೀವ ಶೆಟ್ಟಿ, ವಿಜಯ ಪುತ್ರನ್, ಚಂದ್ರಶೇಖರ ಶೆಟ್ಟಿ ಮೊಳಹಳ್ಳಿ, ಕೃಷ್ಣರಾಜ ಶೆಟ್ಟಿ, ಶರತ್ ಚಂದ್ರ ಶೆಟ್ಟಿ ಕಾವ್ರಾಡಿ, ನ್ಯಾಯವಾದಿ ಉಮೇಶ ಶೆಟ್ಟಿ ಶಾನ್ಕಟ್ಟು, ವಂಡ್ಸೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಗೋವರ್ದನ್ ಜೋಗಿ, ರೈತ ಸಂಘದ ಸೇನಾಪುರ ಮಂಡಲದ ಅಧ್ಯಕ್ಷ ಸತೀಶ್ ಶೆಟ್ಟಿ ಯಳೂರು, ನ್ಯಾಯವಾದಿ ಸರ್ವೋತ್ತಮ ಶೆಟ್ಟಿ ಇಡೂರು, ಶಶಿಧರ ಆಚಾರ್ಯ ಆತ್ರಾಡಿ, ಸುಭಾಶ್ ಶೆಟ್ಟಿ, ಕೃಷ್ಣದೇವ ಕಾರಂತ ಮೊದಲಾದವರು ಉಪಸ್ಥಿತರಿದ್ದರು.

ಸತ್ಯಾಗ್ರಹದಲ್ಲಿ ವಂಡ್ಸೆ ವಲಯದ ನೂರಾರು ರೈತರು, ಬೇರೆ ಬೇರೆ ಭಾಗದ ರೈತರು, ವಿವಿಧ ಸಂಘಟನೆಯ ಪ್ರಮುಖರು ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!