spot_img
Saturday, February 14, 2026
spot_img

ವಂಡ್ಸೆ: ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಜ್ಞಾನ, ಕಲಾ ಮೇಳ

ಕುಂದಾಪುರ: ವಿದ್ಯಾರ್ಥಿಗಳಲ್ಲಿ ಕಲಿಕೆಯ ಜೊತೆಯಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವಲ್ಲಿ ವಿಜ್ಞಾನ ಮೇಳಗಳು ಸಹಕಾರಿಯಾಗುತ್ತವೆ. ವಿದ್ಯಾರ್ಥಿಗಳು ಬಾಲ್ಯದಿಂದಲೇ ವಿಜ್ಞಾನ, ಕಲೆಯ ಬಗ್ಗೆ ಆಸಕ್ತಿ ಬೆಳೆಸಿಕೊಳ್ಳಬೇಕು, ಜೊತೆಯಲ್ಲಿ ಸಂಹವನ ಮಾಡುವ ಸಾಮಾರ್ಥ್ಯವೂ ಬರುತ್ತದೆ. ವಂಡ್ಸೆಯ ಸರಕಾರಿ ಶಾಲೆಯಲ್ಲಿ ವರ್ಷದಿಂದ ವರ್ಷಕ್ಕೆ ವಿಜ್ಞಾನ ಮತ್ತು ಕಲಾ ಮೇಳ ಅತ್ಯಂತ ಯಶಸ್ವಿಯಾಗಿ ನಡೆಯುತ್ತದೆ. ಇದು ನಿರಂತರವಾಗಿ ನಡೆಯಲಿ ಎಂದು ಮೂಕಾಂಬಿಕಾ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷರು, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉದ್ಯಮಿ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರು ಅಭಿಪ್ರಾಯ ಪಟ್ಟರು.

ಅವರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಂಡ್ಸೆಯಲ್ಲಿ ಸೋಮವಾರ ನಡೆದ ವಿಜ್ಞಾನ ಹಾಗೂ ಕಲಾ ಮೇಳವನ್ನು ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಎಸ್.ಡಿ.ಎಂ.ಸಿ ಅಧ್ಯಕ್ಷೆ ಡಾ.ಪೂರ್ಣಿಮಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಪ್ರಕೃತಿಯ ರಹಸ್ಯಗಳನ್ನು ತಿಳಿಸುತ್ತಾ ಹೋಗುವುದೇ ವಿಜ್ಞಾನ. ಕಳೆದ ಮೂರು ವರ್ಷಗಳಿಂದ ಇಲ್ಲಿ ವಿಜ್ಞಾನ ಮತ್ತು ಕಲಾ ಮೇಳವನ್ನು ಆಯೋಜಿಸಲಾಗುತ್ತಿದೆ. ವಿಜ್ಞಾನ ವಿಷಯದ ಬಗ್ಗೆ ವಿದ್ಯಾರ್ಥಿಗಳಲ್ಲಿ ಕುತೂಹಲ ಮೂಡಿಸಿ ಮಾದರಿಗಳನ್ನು ತಯಾರಿಸುವಲ್ಲಿ ಶಿಕ್ಷಕರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿದ್ದಾರೆ. ಈ ವಿಜ್ಞಾನ ಮೇಳ ಯಶಸ್ಸಿನಲ್ಲಿ ವಿದ್ಯಾರ್ಥಿಗಳೊಂದಿಗೆ ಶಿಕ್ಷಕರು ತುಂಬಾ ಪರಿಶ್ರಮ ಪಟ್ಟಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್, ವಂಡ್ಸೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ ಅವಿನಾಶ್, ನಿವೃತ್ತ ಸರಕಾರಿ ಅಧಿಕಾರಿ ಬಿ,ಎನ್.ಶೆಟ್ಟಿ ಬಗ್ವಾಡಿ, ಬಗ್ವಾಡಿ, ಮೂಕಾಂಬಿಕಾ ಚಾರಿಟೆಬಲ್ ಟ್ರಸ್ಟ್ ಕಾರ್ಯದರ್ಶಿ, ಗ್ರಾ.ಪಂ. ಸದಸ್ಯ ಉದಯಕುಮಾರ್ ಶೆಟ್ಟಿ, ಗ್ರಾಮ ಪಂಚಾಯತ್ ಉಪಾಧ್ಯಕ್ಷ ಗೋವರ್ದನ್ ಜೋಗಿ, ಗ್ರಾಮ ಪಂಚಾಯತ್ ಸದಸ್ಯೆ ಶಶಿಕಲಾ ಎಸ್ ವಂಡ್ಸೆ, ಮೂಕಾಂಬಿಕಾ ಚಾರಿಟೇಬಲ್ ಟ್ರಸ್ಟ್ ಕೋಶಾಧಿಕಾರಿ ಜಿ.ಶ್ರೀದರ ಶೆಟ್ಟಿ, ಟ್ರಸ್ಟಿ ಅನಂದ ಶೆಟ್ಟಿ ಸಬ್ಲಾಡಿ, ಉದ್ಯಮಿ ಸೀತಾರಾಮ ಶೆಟ್ಟಿ ತೊಂಭತ್ತು, ಶಿಕ್ಷಣ ಸಂಯೋಜಕರಾದ ಸತ್ಯನಾ ಕೊಡೇರಿ, ವಂಡ್ಸೆ ಕ್ಲಸ್ಟರ್ ಸಿ.ಆರ್.ಪಿ ನಾಗರಾಜ ಶೆಟ್ಟಿ, ಕರ್ಕುಂಜೆ ಕ್ಲಸ್ಟರ್ ಸಿ.ಆರ್.ಪಿ ರವಿಚಂದ್ರ, ನಿವೃತ್ತ ಶಿಕ್ಷಕರಾದ ಸಂತೋಷ್, ನಮ್ಮ ಭೂಮಿ ಸಂಸ್ಥೆಯ ಶ್ರೀನಿವಾಸ ಗಾಣಿಗ, ಎಸ್.ಡಿ.ಎಂ.ಸಿ ಉಪಾಧ್ಯಕ್ಷ ರಾಜೀವ ಮೊದಲಾದವರು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳು ವಿಜ್ಞಾನಗೀತೆ ಹಾಡಿದರು. ದೈಹಿಕ ಶಿಕ್ಷಣ ಶಿಕ್ಷಕ ರಾಜು ಎನ್ ಸ್ವಾಗತಿಸಿದರು. ಶಿಕ್ಷಕ ಸುಧಾಕರ ಮರಕಾಲ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಿಕ್ಷಕಿ ವಾಣಿಶ್ರೀ ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕಿ ನಾಗವೇಣಿ ವಂದಿಸಿದರು. ಶಿಕ್ಷಕರ ವೃಂದದವರು ಕಾರ್ಯಕ್ರಮಕ್ಕೆ ಸಹಕರಿಸಿದರು. ಶಿಕ್ಷಕ ಸೋಮರಾಯ ಜನ್ನು ಕಾರ್ಯಕ್ರಮ ವಿವರಣೆ ನೀಡಿದರು.

ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರು ಎಲ್ಲಾ ವಿದ್ಯಾರ್ಥಿಗಳು ಸಿದ್ಧಪಡಿಸಿದ ಮಾದರಿಗಳನ್ನು ವೀಕ್ಷಿಸಿ ವಿವರಣೆ ಪಡೆದುಕೊಂಡು ವಿದ್ಯಾರ್ಥಿಗಳ ಬೆನ್ನುತಟ್ಟಿ ಪ್ರೋತ್ಸಾಹಿಸಿದರು. ಅತ್ಯಂತ ತಾಳ್ಮೆಯಿಂದ ವಿಜ್ಞಾನ ಮಾದರಿಗಳು, ಅದರ ಪರಿಣಾಮವನ್ನು ಕೇಳಿ ತಿಳಿದುಕೊಂಡರು. ವಿದ್ಯಾರ್ಥಿಗಳು ಉತ್ಸಾಹದಿಂದ ವಿವರಣೆ ನೀಡಿದರು.

ವಿಜ್ಞಾನ ಮೇಳದಲ್ಲಿ ಸುಮಾರು 150ಕ್ಕೂ ಹೆಚ್ಚು ಮಾದರಿಗಳನ್ನು ವಿದ್ಯಾರ್ಥಿಗಳು ಪ್ರದರ್ಶನ ಮಾಡಿದರು. ರಕ್ತ ವರ್ಗೀಕರಣ, ಜಲಜಾಗೃತಿ, ರಾಸಾಯನಿಕ ಪ್ರಕ್ರಿಯೆ, ಸರಳ ವಿಜ್ಞಾನದ ಮಾದರಿಗಳು, ತಳವಿಲ್ಲದ ಬಾವಿ, ಉಪಗ್ರಹ ಉಡಾವಣೆ, ರಾಕೇಟ್, ಪೈಪ್ ಕೋವಿ, ಗೃಹ ಬಳಕೆಗೆ ಅಗತ್ಯವಿರುವ ಹೊಸ ಹೊಸ ಪ್ರಯೋಗ, ತುಂತುರು ನೀರಾವರಿ ವಿಧಾನ, ಜಲಶಕ್ತಿ, ಪವನ ಶಕ್ತಿ, ಶೋಧನೆಗಳನ್ನು ವಿದ್ಯಾರ್ಥಿಗಳು ಆವಿಸ್ಕರಿಸಿದ್ದರು. ಮರವಾಯಿ (ಕಪ್ಪೆಚಿಪ್ಪು) ಬಳಸಿ ಕಾರ್ಯಕ್ರಮದ ಫಲಕ ನಿರ್ಮಾಣ ಮಾಡಿದ್ದು ಗಮನ ಸಳೆಯಿತು. ಕಲಾ ಮೇಳದಲ್ಲಿ ಸುಮಾರು ೩೦೦ಕ್ಕೂ ಹೆಚ್ಚು ಕಲಾಕೃತಿಗಳನ್ನು ವಿದ್ಯಾರ್ಥಿಗಳು ಸಿದ್ಧ ಪಡಿಸಿ ಪ್ರದರ್ಶನಕ್ಕಿಟ್ಟಿದ್ದರು. ಪೇಪರ್ ಕಟ್ಟಿಂಗ್ ಮೂಲಕ ಹೂವು, ಗೊಂಬೆ, ವಿವಿಧ ಆಕರ್ಷಕ ಆಕೃತಿಗಳು, ರಟ್ಟು, ಥರ್ಮೋಕೋಲ್ ಬಳಸಿ ಐಶಾರಾಮಿ ಮನೆ ಇತ್ಯಾದಿ ಮಾದರಿಗಳು, ತೆಂಗಿನ ತೆರಟೆ, ನಿರುಪಯೂಕ್ತ ವಸ್ತುಗಳಿಂದ ವಿವಿಧ ಆಕರ್ಷಕ ಅಲಂಕಾರಿಕ ವಸ್ತುಗಳನ್ನು ವಿದ್ಯಾರ್ಥಿಗಳು ಶಿಕ್ಷಕರ ಮಾರ್ಗದರ್ಶನದಲ್ಲಿ ತಯಾರಿಸಿ ಪ್ರದರ್ಶನಕ್ಕಿಟ್ಟಿದ್ದರು.

ಇಂಗ್ಲೀಷ್ ಭಾಷೆಯಲ್ಲಿ ವಿವರಣೆ:
ಪ್ರತಿಯೊಂದು ಮಾದರಿಯನ್ನು ವಿದ್ಯಾರ್ಥಿಗಳು ಇಂಗ್ಲೀಷ್ ಭಾಷೆಯಲ್ಲಿ ವಿವರಣೆ ಮಾಡಿದರು. ವಂಡ್ಸೆ ಶಾಲೆಯಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣದಿಂದ 7ನೇ ತರಗತಿ ತನಕ ಆಂಗ್ಲ ಮಾಧ್ಯಮ ಮತ್ತು ಕನ್ನಡ ಮಾಧ್ಯಮ ಶಿಕ್ಷಣ ನೀಡಲಾಗುತ್ತಿದೆ. ಗುಣಮಟ್ಟದ ಶಿಕ್ಷಣಕ್ಕೆ ಈ ಶಾಲೆ ಹೆಸರಾಗಿದೆ. ಇಂಗ್ಲೀಷ್ ಭಾಷೆಯಲ್ಲಿಯೂ ಮಕ್ಕಳು ಪ್ರಬುದ್ಧತೆ ಪಡೆದುಕೊಳ್ಳುತ್ತಿರುವುದು ವಿದ್ಯಾರ್ಥಿಗಳು ತಾವು ಸಿದ್ಧ ಪಡಿಸಿದ ಮಾದರಿಗಳ ವಿವರಣೆ ನೀಡಿದಾಗ ತಿಳಿಯುತ್ತದೆ.

ಬೇರೆ ಬೇರೆ ಶಾಲೆಗಳಿಂದ ವಿದ್ಯಾರ್ಥಿಗಳು:
ವಿಜ್ಞಾನ ಮತ್ತು ಕಲಾಮೇಳಕ್ಕೆ ಬೇರೆ ಬೇರೆ ಶಾಲೆಯ ವಿದ್ಯಾರ್ಥಿಗಳು ಆಗಮಿಸಿದರು. ಶಿಕ್ಷಕರುಗಳು ಭಾಗವಹಿಸಿದ್ದರು. ಸಾರ್ವಜನಿಕರು, ವಿದ್ಯಾರ್ಥಿ ಪೋಷಕರು ಆಗಮಿಸಿ ಮರಿ ವಿಜ್ಞಾನಿಗಳ ಆವಿಷ್ಕಾರಗಳನ್ನು ವೀಕ್ಷಿಸಿದರು. ಬೆಳಿಗ್ಗೆಯಿಂದ ಸಂಜೆಯ ತನಕ ವಿದ್ಯಾರ್ಥಿಗಳು ತಮ್ಮ ಮಾದರಿಗಳನ್ನು ಪ್ರದರ್ಶಿಸಿ ವಿವರಣೆ ನೀಡಿದರು. ವಿದ್ಯಾರ್ಥಿಗಳು ವಿಜ್ಞಾನ ಮಾದರಿಗಳ ಸಿದ್ಧ ಪಡಿಸುವುದರ ಜೊತೆಯಲ್ಲಿ ಅದನ್ನು ವೀಕ್ಷಕರ ಮುಂದೆ ವಿವರಿಸುವ ಕಲೆಯನ್ನು ತಿಳಿದುಕೊಂಡರು. ಇಂಥಹ ಮೇಳಗಳ ಆಶಯವೂ ಕೂಡಾ ಬಹುಮುಖಿಯಾಗಿದ್ದು ಪರಸ್ಪರ ಸಂವಹನಕ್ಕೆ ಹೆಚ್ಚು ಅವಕಾಶ ಸಿಗುತ್ತದೆ. ವಿದ್ಯಾರ್ಥಿಗಳಿಗೆ ಸಂಹವನ ಬದುಕಿನುದ್ದಕ್ಕೂ ಸಹಕಾರಿಯಾಗುತ್ತದೆ.

 

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!