spot_img
Tuesday, March 31, 2026
spot_img

ಫ್ಯಾಮಿಲಿ ಪ್ಲ್ಯಾನಿಂಗ್‌ ಬಿಡಿ, ಹೆಚ್ಚೆಚ್ಚು ಮಕ್ಕಳನ್ನು ಮಾಡಿಕೊಳ್ಳಿ : ಕೇಂದ್ರದ ಗಡಿ ನಿರ್ಣಯ ಯೋಜನೆಗೆ ವ್ಯಂಗ್ಯವಾಗಿ ಟೀಕಿಸಿದ ಸ್ಟಾಲಿನ್‌

ಜನಪ್ರತಿನಿಧಿ (ತಮಿಳುನಾಡು) : “ಹೊಸದಾಗಿ ಮದುವೆಯಾದವರು ಫ್ಯಾಮಿಲಿ ಪ್ಲಾನಿಂಗ್ ಎಲ್ಲ ಬದಿಗಿಟ್ಟು ಆದಷ್ಟು ಬೇಗ ಹೆಚ್ಚೆಚ್ಚು ಮಕ್ಕಳನ್ನು ಹೆರುವತ್ತ ಯೋಚಿಸಿ” ಎಂದು ತಮಿಳುನಾಡಿನ ಸಿಎಂ ಎಂ ಕೆ ಸ್ಟಾಲಿನ್‌ ಅವರೇ ಮನವಿ ಮಾಡಿದ್ದಾರೆ.

ಕೇಂದ್ರದ ಗಡಿ ನಿರ್ಣಯ ಯೋಜನೆಗಳನ್ನು ವ್ಯಂಗ್ಯವಾಗಿ ಟೀಕಿಸಿದ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್, “ಜನಸಂಖ್ಯೆಯ ಆಧಾರದ ಮೇಲೆ ಕೇಂದ್ರ ಸರ್ಕಾರ ಲೋಕಸಭಾ ಕ್ಷೇತ್ರಗಳನ್ನು ಮರುವಿಂಗಡಣೆ ಮಾಡಲು ಹೊರಡಿದೆ. ಹೀಗಾಗಿ, ಫ್ಯಾಮಿಲಿ ಪ್ಲಾನಿಂಗ್ ಬಿಟ್ಟು ನವವಿವಾಹಿತ ದಂಪತಿ ಆದಷ್ಟು ಬೇಗ ಮಕ್ಕಳನ್ನು ಮಾಡಿಕೊಳ್ಳುವ ಮೂಲಕ ತಮಿಳುನಾಡಿನ ಜನಸಂಖ್ಯೆಯನ್ನು ಹೆಚ್ಚಿಸಬೇಕು. ಈ ಮೂಲಕ ತಮಿಳುನಾಡಿಗೆ ರಾಜಕೀಯವಾಗಿ ಆಗುವ ತಾರತಮ್ಯವನ್ನು ತಡೆಯಬೇಕು” ಎಂದು ಒತ್ತಾಯಿಸಿದ್ದಾರೆ.

ತಮಿಳುನಾಡಿನ ನಾಗಪಟ್ಟಣಂನಲ್ಲಿ ಡಿಎಂಕೆ ಜಿಲ್ಲಾ ಕಾರ್ಯದರ್ಶಿಯ ವಿವಾಹ ಸಮಾರಂಭದಲ್ಲಿ ಮಾತನಾಡಿದ ಸಿಎಂ ಸ್ಟಾಲಿನ್, “ಮೊದಲೆಲ್ಲ ನಾನು ಕೂಡ ಮದುವೆಯಾದ ಕೂಡಲೆ ಮಕ್ಕಳನ್ನು ಮಾಡಿಕೊಳ್ಳಬೇಡಿ, ಇಬ್ಬರಿಗೂ ಅರ್ಥ ಮಾಡಿಕೊಳ್ಳಲು ಸ್ವಲ್ಪ ಸಮಯಾವಕಾಶ ಕೊಡಿ ಎಂದು ಹೇಳುತ್ತಿದ್ದೆ. ಆದರೆ, ಈಗ ಪರಿಸ್ಥಿತಿ ಬದಲಾಗಿದೆ. ನಮ್ಮಲ್ಲಿ ಹೆಚ್ಚಿನ ಜನಸಂಖ್ಯೆ ಇದ್ದರೆ ಮಾತ್ರ ನಮಗೆ ಹೆಚ್ಚಿನ ಸಂಸದರು ಸಿಗುವ ಪರಿಸ್ಥಿತಿ ಇದೆ. ಪರಿಣಾಮಕಾರಿ ಜನಸಂಖ್ಯಾ ನಿಯಂತ್ರಣದಲ್ಲಿ ನಾವು ಯಶಸ್ವಿಯಾಗಿದ್ದರಿಂದ ಈ ಪರಿಸ್ಥಿತಿ ಉದ್ಭವಿಸಿದೆ. ಹೀಗಾಗಿ, ಆದಷ್ಟು ಬೇಗ ಮಕ್ಕಳನ್ನು ಪಡೆಯಿರಿ. ಅವರಿಗೆ ಸುಂದರವಾದ ತಮಿಳು ಹೆಸರುಗಳನ್ನು ನೀಡಿ” ಎಂದು ಮನವಿ ಮಾಡಿದ್ದಾರೆ.

“ತಮಿಳುನಾಡು ರಾಜ್ಯದ ಯಶಸ್ವಿ ಕುಟುಂಬ ಯೋಜನಾ ಕ್ರಮಗಳು ಈಗ ನಮ್ಮನ್ನು ಅನಾನುಕೂಲಕ್ಕೆ ದೂಡಿವೆ. ಜನಸಂಖ್ಯೆ ಆಧಾರಿತ ಗಡಿ ನಿರ್ಣಯವು ಸಂಸತ್ತಿನಲ್ಲಿ ತಮಿಳುನಾಡಿನ ರಾಜಕೀಯ ಪ್ರಾತಿನಿಧ್ಯದ ಮೇಲೆ ಪರಿಣಾಮ ಬೀರಬಹುದು” ಎಂದು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಎಚ್ಚರಿಸಿದರು. ಹಾಗೇ, ಜನಗಣತಿ ಅಂಕಿ-ಅಂಶಗಳ ಆಧಾರದ ಮೇಲೆ ಗಡಿ ನಿರ್ಣಯವನ್ನು ಜಾರಿಗೆ ತರುವ ಸಾಧ್ಯತೆಯ ಬಗ್ಗೆ ತಮ್ಮ ಕಳವಳಗಳನ್ನು ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರವು ರಾಷ್ಟ್ರೀಯ ಶಿಕ್ಷಣ ನೀತಿಯ ಹೆಸರಿನಲ್ಲಿ ಹಿಂದಿಯನ್ನು ಹೇರಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ ಸ್ಟಾಲಿನ್, ಗಡಿ ನಿರ್ಣಯ ವಿಷಯದ ಕುರಿತು ಚರ್ಚಿಸಲು ಕರೆಯಲಾದ ಸರ್ವಪಕ್ಷ ಸಭೆಯನ್ನು ಬಹಿಷ್ಕರಿಸದಂತೆ ರಾಜ್ಯ ಬಿಜೆಪಿಗೆ ಮನವಿ ಮಾಡಿದರು. “ಕೇಂದ್ರ ಸರ್ಕಾರ ತಮಿಳುನಾಡಿಗೆ ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು ಕಡಿಮೆ ಮಾಡುವ ಗಡಿ ನಿರ್ಣಯವನ್ನು ಜಾರಿಗೆ ತರಲು ಪ್ರಯತ್ನಿಸುತ್ತಿದೆ. ಗಡಿ ನಿರ್ಣಯದ ಕುರಿತು ನಮ್ಮ ನಿಲುವನ್ನು ಚರ್ಚಿಸಲು ಮಾರ್ಚ್ 5ರಂದು ನಾನು ಸರ್ವಪಕ್ಷ ಸಭೆಯನ್ನು ಕರೆದಿದ್ದೇನೆ. ಚುನಾವಣಾ ಆಯೋಗದಲ್ಲಿ ನೋಂದಾಯಿಸಲಾದ 40 ಜನರನ್ನು ಆಹ್ವಾನಿಸಲಾಗಿದೆ. ಅವರಲ್ಲಿ ಹೆಚ್ಚಿನವರು ಸಭೆಗೆ ಬರುತ್ತೇವೆ ಎಂದು ಹೇಳಿದ್ದಾರೆ. ಆದರೆ, ಕೆಲವರು ಅದನ್ನು ನಿರ್ಲಕ್ಷಿಸುತ್ತಿದ್ದಾರೆ. ಇದು ಡಿಎಂಕೆಯ ಸಮಸ್ಯೆಯಲ್ಲ, ಇಡೀ ರಾಜ್ಯದ ಸಮಸ್ಯೆ ಎಂದು ಅವರು ಅರ್ಥಮಾಡಿಕೊಳ್ಳಬೇಕು. ಆದ್ದರಿಂದ ಈ ರಾಜ್ಯದ ಕಲ್ಯಾಣ ಮತ್ತು ಅದರ ಹಕ್ಕುಗಳಿಗಾಗಿ ಎಲ್ಲರೂ ಒಟ್ಟಾಗಿ ನಿಲ್ಲಬೇಕೆಂದು ನಾನು ಮತ್ತೊಮ್ಮೆ ಒತ್ತಾಯಿಸುತ್ತೇನೆ” ಎಂದು ಸ್ಟಾಲಿನ್ ಹೇಳಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!