spot_img
Wednesday, April 1, 2026
spot_img

ಬ್ರಹ್ಮಾವರ: ಅನ್ನದಾತರ ಅಹೋರಾತ್ರಿ ಸತ್ಯಾಗ್ರಹ 11ನೇ ದಿನಕ್ಕೆ

ಡುಪಿ ಜಿಲ್ಲಾ ರೈತ ಸಂಘದ ನೇತೃತ್ವದಲ್ಲಿ ಸಕ್ಕರೆ ಕಾರ್ಖಾನೆಯ ಬಳಿ ನಡೆಯುತ್ತಿರುವ ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ ಬಹುಕೋಟಿ ವಂಚನೆಯ ಮತ್ತು ಅದರ ತನಿಖೆಯಲ್ಲಿ ವಿಳಂಬವಾಗುತ್ತಿರುವುದರ ವಿರುದ್ಧ ಅನ್ನದಾತರ ನ್ಯಾಯಾಗ್ರಹ’ 11ನೇ ದಿನಕ್ಕೆ ಕಾಲಿಟ್ಟಿದೆ. ಮಂಗಳವಾರ (ಮಾ.4) ಉಡುಪಿ ಜಿಲ್ಲಾ ರೈತ ಸಂಘ ಹೆಬ್ರಿ ವಲಯದ ನೇತೃತ್ವದಲ್ಲಿ ಸತ್ಯಾಗ್ರಹ ನಡೆಯಿತು.

ಉಡುಪಿ ಜಿಲ್ಲಾ ರೈತ ಸಂಘದ ಹೆಬ್ರಿ ವಲಯದ ಅಧ್ಯಕ್ಷ ಅಶೋಕ ಶೆಟ್ಟಿ ಚೋರಾಡಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಸತ್ಯಾಗ್ರಹದಲ್ಲಿ ರೈತ ಮುಖಂಡರಾದ ಜಿ.ಪಂ ಮಾಜಿ ಸದಸ್ಯ ಮಂಜುನಾಥ ಪೂಜಾರಿ, ಕಿರಣ್ ತೋಳಾರ್ ಕಚ್ಚೂರು, ಮಹೇಶ ಶೆಟ್ಟಿ ಬೇಳಂಜೆ, ಮಹೇಶ ಶೆಟ್ಟಿ ಕುಚ್ಚೂರು, ವಿಜಯ ಕುಮಾರ ಶೆಟ್ಟಿ ಬೇಳಂಜೆ, ರೋಶನ್ ಕುಮಾರ್ ಶೆಟ್ಟಿ, ಹೆಬ್ರಿ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ನವೀನ್ ಅಡ್ಯಂತಾಯ ಮೊದಲಾದವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ರೈತ ಸಂಘದ ಅಧ್ಯಕ್ಷರಾದ ಕೆ.ಪ್ರತಾಪಚಂದ್ರ ಶೆಟ್ಟಿ, ಸುರೇಶ ಶೆಟ್ಟಿ, ಭುಜಂಗ ಶೆಟ್ಟಿ, ಬೋಜ ಕುಲಾಲ್, ಶರತ್ ಕುಮಾರ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

ಹೆಬ್ರಿ ವಲಯದ ನೂರಾರು ರೈತರು ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!