spot_img
Wednesday, April 1, 2026
spot_img

ಮೇಳದ ನಿವೃತ್ತ ಸಿಬ್ಬಂದಿ ಬಚ್ಚ ನಾಯ್ಕ ಅವರಿಗೆ ವಂಡ್ಸೆ ನಾರಾಯಣ ಗಾಣಿಗ ಪ್ರಶಸ್ತಿ ಪ್ರದಾನ

ಕುಂದಾಪುರ:ವಂಡ್ಸೆ ಶ್ರೀ ತಿರುಮಲ ಲಕ್ಷ್ಮೀವೆಂಕಟರಮಣ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ, ವಾರ್ಷಿಕ ಜಾತ್ರೆಯ ಸಂದರ್ಭದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯಕ್ಷಗಾನ ಕಲಾವಿದ ದಿ.ನಾರಾಯಣ ಗಾಣಿಗರ ಸ್ಮರಣಾರ್ಥವಾಗಿ ಅವರ ಕುಟುಂಬದ ವತಿಯಿಂದ ಕೊಡಮಾಡುವ ವಂಡ್ಸೆ ನಾರಾಯಣ ಗಾಣಿಗ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಜರಗಿತು.

ಯಕ್ಷಗಾನ ಮೇಳದಲ್ಲಿ ಸುದೀರ್ಘ ಅವಧಿಯ ತನಕ ಸಿಬ್ಬಂದಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಬಚ್ಚ ನಾಯ್ಕ ಸಾಗುವನಿ ಮಾರಣಕಟ್ಟೆ ಇವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಹಿರಿಯ ಉದ್ಯಮಿ ಎನ್.ಆನಂದ ಶೆಟ್ಟಿ ಸಬ್ಲಾಡಿ ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಶ್ರೀ ತಿರುಮಲ ಲಕ್ಷ್ಮೀವೆಂಕಟರಮಣ ದೇವಸ್ಥಾನದ ದೇವಸ್ಥಾನದ ಆಡಳಿತ ಮೊಕ್ತೇಸರ ವಿ.ಕೆ ಶಿವರಾಮ ಶೆಟ್ಟಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಜಿ.ಶ್ರೀಧರ ಶೆಟ್ಟಿ, ದಿ.ನಾರಾಯಣ ಗಾಣಿಗರ ಪುತ್ರ ಉದಯ ಗಾಣಿಗ ಹಾಗು ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.
ನಿವೃತ್ತ ಮುಖ್ಯೋಪಾಧ್ಯಾಯರಾದ ಶಶಿಧರ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!