spot_img
Tuesday, March 17, 2026
spot_img

ಕೋಟ ಶಮಂತ ಕುಮಾರ್ ಕೆ.ಎಸ್ ಅವರಿಗೆ ಪಿ‌ಎಚ್.ಡಿ ಪದವಿ

ಕೋಟ: ಹವ್ಯಾಸಿ ಯಕ್ಷಗಾನ ಕಲಾವಿದ, ರಂಗನಟ, ರಂಗನಿರ್ದೇಶಕ, ಕೆ.ಎಲ್.ಇ ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಪದವಿ ಮಹಾವಿದ್ಯಾಲಯ ಹಾವೇರಿ ಇಲ್ಲಿಯ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕ ಕೋಟ ಶಮಂತ ಕುಮಾರ ಕೆ.ಎಸ್ ಅವರು, ಉಡುಪಿಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಮೂಲಕ ಸಲ್ಲಿಸಿದ ಕನ್ನಡದಲ್ಲಿ ಠಾಕೂರ ನಾಟಕಗಳು ಬಿಡುಗಡೆಯ ಕಥನಗಳು ಸಂಶೋಧನ ಮಹಾಪ್ರಬಂಧಕ್ಕೆ ಹಂಪಿಯ ಕನ್ನಡ ವಿಶ್ವವಿದ್ಯಾಲಯವು ಪಿ‌ಎಚ್.ಡಿ ಪದವಿ ನೀಡಿದೆ.

ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಇದರ ಅಧ್ಯಕ್ಷ ಡಾ.ಗಣನಾಥ ಶೆಟ್ಟಿ ಎಕ್ಕಾರು ಮಾರ್ಗದರ್ಶನದಲ್ಲಿ ಮಹಾಪ್ರಬಂಧ ಮಂಡಿಸಿರುವ ಇವರು ಮಂಗಳೂರು ವಿ.ವಿ. ಯಿಂದ ಕನ್ನಡ ಎಂ.ಎ. ಪದವಿ ಪಡೆದಿದ್ದು, ಎನ್.ಇ.ಟಿ., ಕೆ.ಎಸ್.ಇಟಿ. ಪರೀಕ್ಷೆಗಳಲ್ಲೂ ಉತ್ತೀರ್ಣರಾಗಿದ್ದಾರೆ. ಇವರು ಉಡುಪಿ ಜಿಲ್ಲೆಯ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ.ಕೋಟ ಶಿವರಾಮ ಕಾರಂತ ಹುಟ್ಟೂರು ಕೋಟತಟ್ಟು ಗ್ರಾಮದ ಶ್ರೀಧರ ಗಾಣಿಗ ಮತ್ತು ಭಾಗಿರಥಿ ದಂಪತಿಯ ಪುತ್ರ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!