spot_img
Tuesday, March 17, 2026
spot_img

ಕೋಟ ಪಡುಕರೆ :ರಾಷ್ಟ್ರೀಯ ಸೇವಾ ಯೋಜನಾ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಕುಂದಾಪುರ: ನನಗಲ್ಲ, ನಿನಗೇ, ಎನ್ನುವ ದ್ಯೇಯ ವಾಕ್ಯದೊಂದಿಗೆ ಸೇವೆಯಲ್ಲಿ ನಿರತರಾಗಿರುವ ಸ್ವಯಂಸೇವಕರು ಎಲ್ಲಾ ಜಾತಿ ಮತ ಭೇದಗಳನ್ನು ಮರೆತು ಸಹಬಾಳ್ವೆ, ಸಹಜೀವನದಿಂದ ನಡೆಯುವ ಈ ಪರಿಕಲ್ಪನೆ ಬಹಳ ಅದ್ಬುತ. ಸಣ್ಣ ಸಂಘಟೆನೆಯಾಗಿ ಪ್ರಾರಂಭಗೊಂಡ ರಾಷ್ಟ್ರೀಯ ಸೇವಾ ಯೋಜನೆ ಇಂದು ಲಕ್ಷಾಂತರ ಯುವ ಜನತೆಯನ್ನು ತನ್ನ ತಕ್ಕೆಯಲ್ಲಿಸಿಕೊಂಡು ಅವರ ಸರ್ವಾಂಗೀಣ ಅಭಿವೃದ್ಧಿಯಲ್ಲಿ ವಹಿಸುತ್ತಿರುವ ಪಾತ್ರ ಅಪಾರ. ಆದುದರಿಂದ ಶಿಬಿರಾರ್ಥಿಗಳು ತಮ್ಮನ್ನು ಈ ಶಿಬಿರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು, ಶಿಬಿರ ಯಶಸ್ವಿಗೊಳಿಸುವುದರೊಂದಿಗೆ ತಮ್ಮ ವ್ಯಕ್ತಿತ್ವವನ್ನು ವಿಕಸಿತಗೊಳಿಸಿಕೊಳ್ಳಬೇಕು ಎಂದು ಗೀತಾನಂದ ಪೌಂಡೇಶನ್ ಮಣೂರು ಪಡುಕರೆ ಇದರ ಪ್ರವರ್ತಕರಾದ ಆನಂದ ಸಿ ಕುಂದರ್ ತಿಳಿಸಿದರು.

ಇವರು ಲಕ್ಷ್ಮೀ ಸೋಮ ಬಂಗೇರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕೋಟ ಪಡುಕರೆ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ವಿಶೇಷ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಜೇಂದ್ರ ಎಸ್. ನಾಯಕ ವಹಿಸಿ, ವಿದ್ಯಾರ್ಥಿಗಳು ಈ ಶಿಬಿರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಇದರ ಪ್ರಯೋಜನವನ್ನು ಪಡೆಯಬೇಕೆಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಮಂದಾರ್ತಿ ಇದರ ಅಧ್ಯಕ್ಷರು ಹಾಗು ಅನುವಂಶಿಕ ಮೊಕೇಸರರಾದ ಧನಂಜಯ ಶೆಟ್ಟಿ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಜಯಮ್ಮ ಪಿ, ಕಾರ್ಯನಿರ್ವಾಹಣಾಧಿಕಾರಿ, ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಮಂದಾರ್ತಿ, ರಾಮಕೃಷ್ಣ, ಅಧ್ಯಕ್ಷರು, ಗ್ರಾಮಪಂಚಾಯತ್ ಹೆಗ್ಗುಂಜೆ, ಶ್ರೀಪತಿ ಅಡಿಗ, ಪ್ರಧಾನ ಅರ್ಚಕರು, ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಮಂದಾರ್ತಿ, ಗಂಗಾಧರ ಶೆಟ್ಟಿ, ಅಧ್ಯಕ್ಷರು, ಮಂದಾರ್ತಿ ಸೇವಾ ಸಹಕಾರಿ ಸಂಘ, ಮಂದಾರ್ತಿ, ಸುರೇಶ ಪೂಜಾರಿ, ಅಧ್ಯಕ್ಷರು, ರಕ್ಷಕ ಶಿಕ್ಷಕ ಸಂಘ, ಲಕ್ಷ್ಮೀ ಸೋಮ ಬಂಗೇರ ಸರ್ಕಾರಿ ಪ್ರಥಮದರ್ಜೆ ಕಾಲೇಜು, ಕೋಟ ಪಡುಕರೆ, ಸುದಿನ, ಅಧ್ಯಕ್ಷರು, ಹಳೆ ವಿದ್ಯಾರ್ಥಿ ಸಂಘ, ಲಕ್ಷ್ಮೀ ಸೋಮ ಬಂಗೇರ ಸರ್ಕಾರಿ ಪ್ರಥಮದರ್ಜೆ ಕಾಲೇಜು, ಕೋಟ ಪಡುಕರೆ, ಸಾಗರ, ವಿದ್ಯಾರ್ಥಿ ನಾಯಕ, ರಾಷ್ಟ್ರೀಯ ಸೇವಾ ಯೋಜನೆ, ಉಪಸ್ಥಿತರಿದ್ದರು.
ಶಿಬಿರದಲ್ಲಿ ಶಿಬಿರಾರ್ಥಿಗಳ ವ್ಯಕ್ತಿತ್ವ ವಿಕಸನದೊಂದಿಗೆ, ದೇವಸ್ಥಾನದ ಪರಿಸರ ಸ್ವಚ್ಚತೆ, ಪ್ಲಾಸ್ಟಿಕ್ ವಿರುದ್ಧ ಆದೋಂಲನ, ಸ್ವಚ್ಚ ಭಾರತ್ ಮಿಷ್‌ನ್ ಅಡಿಯಲ್ಲಿ ಅರಿವು ಕಾರ್ಯಕ್ರಮ ಮತ್ತು ಸ್ವಚ್ಚತಾ ಕಾರ್ಯಕ್ರಮದೊಂದಿಗೆ, ಸ್ಥಳೀಯ ಜನರ ಸಾಮಾಜಿಕ ಬದುಕನ್ನು ತಿಳಿಯುವ ಉದ್ದೇಶಗಳನ್ನು ಹೊಂದಲಾಗಿದೆ.

ಸ್ತುತಿ ಮತ್ತು ತಂಡದವರು ಪ್ರಾರ್ಥಿಸಿದರು, ಸಂತೋಷ ನಾಯ್ಕ ಹೆಚ್, ಸಹಶಿಬಿರಾಧಿಕಾರಿ, ಸ್ವಾಗತಿಸಿದರು, ಡಾ. ಪ್ರಕಾಶ ಕೆ, ಕಾರ್ಯಕ್ರಮಾಧಿಕಾರಿ, ವಂದಿಸಿದರು, ತ್ರಿಷಾ ಮತ್ತು ಆಶ್ಲೇಷ ಕಾರ್ಯಕ್ರಮ ನಿರ್ವಹಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!