spot_img
Tuesday, March 17, 2026
spot_img

ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಬಹುಕೋಟಿ ಹಗರಣ : ತನಿಖೆಗೆ ಸಹಕಾರ -ಕೃಷಿ ಮಾರುಕಟ್ಟೆ ಸಚಿವರಿಂದ ಭರವಸೆ

ಜನಪ್ರತಿನಿಧಿ(ಬೆಂಗಳೂರು/ಬ್ರಹ್ಮಾವರ)  : ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಆರೋಪಿತ ಆಡಳಿತ ಮಂಡಳಿ ಮತ್ತು ಇಬ್ಬರು ಸಹಕಾರಿ ಇಲಾಖೆಯ ಅಧಿಕಾರಿಗಳ ವಿರುದ್ಧ ತನಿಖೆ ಒತ್ತಾಯಿಸಿ ಉಡುಪಿ ಜಿಲ್ಲಾ ರೈತ ಸಂಘದ ನೇತೃತ್ವದಲ್ಲಿ ನಡೆಯುತ್ತಿರುವ ಆಹೋರಾತ್ರಿ ಸತ್ಯಾಗ್ರಹದ ಬಗ್ಗೆ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅಧಿವೇಶನದಲ್ಲಿ ಶೂನ್ಯ ವೇಳೆಯಲ್ಲಿ ಎತ್ತಿರುವ ಪ್ರಶ್ನೆಗೆ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್. ಪಾಟೀಲ್ ಪ್ರತಿಕ್ರಿಯಿಸಿದ್ದಾರೆ.

ಬಹುಕೋಟಿ ಹಗರಣದಲ್ಲಿ ಭಾಗಿಯಾಗಿದ್ದರೆನ್ನಲಾದ 11 ಮಂದಿ ಆರೋಪಿಗಳ ಪೈಕಿ ಆರೋಪಿ 1 ಸ್ಥಾನದಲ್ಲಿರುವ ಸಹಕಾರಿ ಸಂಘಗಳ ಜಂಟಿ ನಿಬಂಧಕರ ವಿರುದ್ದ ಮಾನ್ಯ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಸಲ್ಲಿಸಲು ಸಹಕಾರ ಇಲಾಖೆಯಿಂದ ಅಭಿಯೋಜನಾ ಮಂಜೂರಾತಿ ನೀಡ ಲಾಗಿದೆ. ಉಳಿದ 10 ಆರೋಪಿಗಳು ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಸಕ್ಕರೆ ಕಾರ್ಖಾನೆಯ ನಿರ್ದೇಶಕರಾಗಿದ್ದು, ಅವರ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಲು ಅಭಿಯೋಜನಾ ಮಂಜೂರಾತಿ ನೀಡುವ ಬಗ್ಗೆ ಸಕ್ಷಮ ಪ್ರಾಧಿಕಾರವಾದ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯಿಂದ ಮುಂದಿನ ಕ್ರಮ ಕೈಗೊಳ್ಳಲು ಫೆ.28ರಂದು ಪ್ರಸ್ತಾವನೆಯನ್ನು ಸಹಕಾರ ಇಲಾಖೆಯಿಂದ ವರ್ಗಾಯಿಸಲಾಗಿದೆ. ಅವರ ವಿರುದ್ಧ ಭ್ರಷ್ಟಾಚಾರ ಪ್ರತಿಬಂಧ ನಿಯಮ 1988 ರನ್ವಯ ಇಲಾಖೆಯಿಂದ ಅಭಿಯೋಜನಾ ಮಂಜೂರಾತಿ ನೀಡಲು ಇರುವ ಅವಕಾಶಗಳ ಬಗ್ಗೆ ಕಾನೂನು ಇಲಾಖೆಯ ಅಭಿಪ್ರಾಯ ಕೋರಲಾಗಿದ್ದು ಸದ್ರಿ ಅಭಿಪ್ರಾಯದನ್ವಯ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

ಸಕ್ಕರೆ ಕಾರ್ಖಾನೆಯಲ್ಲಿ ಗುಜರಿ ಮಾರಾಟ ಪ್ರಕ್ರಿಯೆಯಲ್ಲಿ 14ಕೋಟಿ ರೂ.ಗೂ ಮೀರಿ ವಂಚಿಸಲಾಗಿದೆ. ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ 2023ರ ಅ.25ರಂದು ಪ್ರಕರಣ ದಾಖಲಾಗಿದ್ದು ತನಿಖೆಗೆ ಪೊಲೀಸರು ಸಹಕಾರದ ಪೂರ್ವಾನುಮತಿ ಕೋರಿದ್ದರು ಈವರೆಗೆ ಅನುಮತಿ ನೀಡಿಲ್ಲ, ಇದನ್ನು ಖಂಡಿಸಿ ಉಡುಪಿ ಜಿಲ್ಲಾ ರೈತ ಸಂಘದ ಅಧ್ಯಕ್ಷ, ವಿಧಾನ ಪರಿಷತ್ ಮಾಜಿ ಸಭಾಪತಿ ಕೆ. ಪ್ರತಾಪಚಂದ್ರ ಶೆಟ್ಟಿ ಅವರ ನೇತೃತ್ವದಲ್ಲಿ ಕಳೆದ ಕೆಲವು ದಿನಗಳಿಂದ ಆಹೋರಾತ್ರಿ ಪ್ರತಿಭಟನೆ ನಡೆಯುತ್ತಿದ್ದು, ಹೋರಾಟ ನಿರತ ರೈತರಿಗೆ ನ್ಯಾಯ ಒದಗಿಸಬೇಕು ಎಂದು ಐವನ್ ಡಿಸೋಜ ಅಧಿವೇಶನದಲ್ಲಿ ಒತ್ತಾಯಿಸಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!