spot_img
Saturday, March 21, 2026
spot_img

ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಹಗರಣ : ತನಿಖೆಯ ಭರವಸೆ ನೀಡಿ, ಧರಣಿ ಹಿಂಪಡೆಯುವಂತೆ ರೈತ ಸಂಘಕ್ಕೆ ಸಚಿವ ಪಾಟೀಲ್‌ ಮನವಿ

ವಿಧಾನ‌ ಪರಿಷತ್ ಅಧಿವೇಶನದ ಚರ್ಚೆಯಲ್ಲಿ ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಬಹುಕೋಟಿ ಹಗರಣದ ಬಗ್ಗೆ ಗಮನ ಸೆಳೆದ ಮಂಜುನಾಥ ಭಂಡಾರಿ

ಜನಪ್ರತಿನಿಧಿ (ಬೆಂಗಳೂರು) : ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ದಕ್ಷಿಣ ಕನ್ನಡ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಬಹುಕೋಟಿ ಹಗರಣ ನಡೆದಿದೆ ಎಂಬ ವಿಚಾರ ಮತ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ತನಿಖೆ ವಿಳಂಬವಾಗುತ್ತಿರುವುದರ  ವಿರುದ್ಧ ಉಡುಪಿ ಜಿಲ್ಲಾ ರೈತ ಸಂಘ ಅಹೋರಾತ್ರಿ ಧರಣಿ ಸತ್ಯಾಗ್ರಹ ಮಾಡುತ್ತಿರುವುದರ ಬಗ್ಗೆ ಇಂದು(ಗುರುವಾರ) ವಿಧಾನಪರಿಷತ್‌ ಸದಸ್ಯ ಮಂಜುನಾಥ ಭಂಡಾರಿ ಸಚಿವರ ಅಧಿವೇಶನದಲ್ಲಿ ಪ್ರಸ್ತಾಪಿಸುವುದರ ಮೂಲಕ ಸಚಿವರ ಗಮನ ಸೆಳೆದರು.

ಈ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವ ಶಿವಾನಂದ ಎಸ್. ಪಾಟೀಲ್, ಬಹುಕೋಟಿ ಹಗರಣದಲ್ಲಿ ಭಾಗಿಯಾಗಿದ್ದರೆನ್ನಲಾದ 11 ಮಂದಿ ಆರೋಪಿಗಳ ಪೈಕಿ ಆರೋಪಿ 1 ಸ್ಥಾನದಲ್ಲಿರುವ ಸಹಕಾರಿ ಸಂಘಗಳ ಜಂಟಿ ನಿಬಂಧಕರ ವಿರುದ್ದ ಮಾನ್ಯ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಸಲ್ಲಿಸಲು ಸಹಕಾರ ಇಲಾಖೆಯಿಂದ ಅಭಿಯೋಜನಾ ಮಂಜೂರಾತಿ ನೀಡಲಾಗಿದೆ. ಉಳಿದ 10 ಆರೋಪಿಗಳು ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಸಕ್ಕರೆ ಕಾರ್ಖಾನೆಯ ನಿರ್ದೇಶಕರಾಗಿದ್ದು, ಅವರ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಲು ಅಭಿಯೋಜನಾ ಮಂಜೂರಾತಿ ನೀಡುವ ಬಗ್ಗೆ ಸಕ್ಷಮ ಪ್ರಾಧಿಕಾರವಾದ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯಿಂದ ಮುಂದಿನ ಕ್ರಮ ಕೈಗೊಳ್ಳಲು ಫೆ.28ರಂದು ಪ್ರಸ್ತಾವನೆಯನ್ನು ಸಹಕಾರ ಇಲಾಖೆಯಿಂದ ವರ್ಗಾಯಿಸಲಾಗಿದೆ. ಅವರ ವಿರುದ್ಧ ಭ್ರಷ್ಟಾಚಾರ ಪ್ರತಿಬಂಧ ನಿಯಮ 1988 ರನ್ವಯ ಇಲಾಖೆಯಿಂದ ಅಭಿಯೋಜನಾ ಮಂಜೂರಾತಿ ನೀಡಲು ಇರುವ ಅವಕಾಶಗಳ ಬಗ್ಗೆ ಕಾನೂನು ಇಲಾಖೆಯ ಅಭಿಪ್ರಾಯ ಕೋರಲಾಗಿದ್ದು ಸದ್ರಿ ಅಭಿಪ್ರಾಯದನ್ವಯ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

ಕಾರ್ಖಾನೆಯ ಹಳೆಯ ಯಂತ್ರೋಪಕರಣಗಳ ಟೆಂಡರ್‌ನಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಆರೋಪಗಳ ಬಗ್ಗೆ ತನಿಖೆಯನ್ನು ನಡೆಸಲು ನಿವೃತ್ತ ಜಿಲ್ಲಾ ನ್ಯಾಯಾಧೀಶರಾದ ರಾಧಾಕೃಷ್ಣ ಹೊಳ್ಳ ಅವರನ್ನು  ವಿಚಾರಣಾಧಿಕಾರಿಯನ್ನಾಗಿ ನೇಮಿಸಿ ಆದೇಶಿಸಲಾಗಿತ್ತು. ಪ್ರಸ್ತುತ ವಿಚಾರಣೆ ಪ್ರಗತಿಯಲ್ಲಿದೆ ಎಂದು ಅವರು ಉತ್ತರಿಸಿದ್ದಾರೆ. ತಪ್ಪತಸ್ಥರಿಗೆ ಯಾವುದೇ ಕಾರಣಕ್ಕೂ ಕ್ರಮ ವಹಿಸದೇ ಬಿಡುವುದಿಲ್ಲ ಎಂದು ಭರವಸೆ ನೀಡಿರುವುದಲ್ಲದೇ, ಇದೇ ಸಂದರ್ಭದಲ್ಲಿ ಸಚಿವರು ಉಡುಪಿ ಜಿಲ್ಲಾ ರೈತ ಸಂಘಕ್ಕೆ ಧರಣಿಯನ್ನು ಹಿಂಪಡೆಯುವಂತೆ ವಿನಂತಿ ಮಾಡಿಕೊಂಡರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!