spot_img
Tuesday, March 17, 2026
spot_img

ಕರ್ನಾಟಕ ರಾಜ್ಯ ಬಜೆಟ್‌ : ಮುಖ್ಯಾಂಶಗಳು ಇಲ್ಲಿವೆ

ಜನಪ್ರತಿನಿಧಿ (ಬೆಂಗಳೂರು) : 2025-26ನೇ ಸಾಲಿನ ಕರ್ನಾಟಕ ಬಜೆಟ್‌ನ ಪ್ರಮುಖ ಅಂಶಗಳು ಇಲ್ಲಿವೆ.

* ಗ್ಯಾರಂಟಿ ಯೋಜನೆಗಳಿಗಾಗಿ ₹ 51,034 ಕೋಟಿ ರೂ. ಮೀಸಲು

* ರಾಜ್ಯದ ರಸ್ತೆ ಮತ್ತು ಮೂಲಸೌಕರ್ಯದ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಕ್ರಮ ಎಂಬ ಹೊಸ ಯೋಜನೆ

* ಈ ಯೋಜನೆಯ ಮೂಲಕ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೂ ರಸ್ತೆ, ಸಣ್ಣ ನೀರಾವರಿ ಹಾಗೂ ಮೂಲಸೌಕರ್ಯ ಒದಗಿಸಲು ₹ 8,000 ಕೋಟಿ

* ಬೆಂಗಳೂರು ಮಹಾನಗರದ ಮೂಲಸೌಕರ್ಯ, ಸೇವಾಪೂರೈಕೆ ಹಾಗೂ ಸಂಚಾರ ಸುವ್ಯವಸ್ಥೆಗಳಿಗಾಗಿ ‘ಬ್ರಾಂಡ್ ಬೆಂಗಳೂರು’ ಎಂಬ ಪರಿಕಲ್ಪನೆಯಡಿ ಮಹತ್ವಾಕಾಂಕ್ಷಿ ಯೋಜನೆಗಳ ಜಾರಿ

* ಅತಿಹೆಚ್ಚು ಉದ್ಯೋಗ ಸೃಜನೆಯಾಗುವ ಎಂ.ಎಸ್.ಎಂ.ಇ, ಪ್ರವಾಸೋದ್ಯಮ, ಐಟಿಬಿಟಿ ವಲಯಗಳಲ್ಲಿ ಹೊಸ ನೀತಿ

* ನಾಗರೀಕ ಸೇವಾ ಪೂರೈಕೆ ಪ್ರಕ್ರಿಯೆಗಳನ್ನು ಸರಳೀಕರಣಗೊಳಿಸಿ, ಕೌನ್ಸೆಲಿಂಗ್‌ ಮುಖಾಂತರ ವರ್ಗಾವಣೆ

* ಪ್ರಾದೇಶಿಕ ಅಸಮಾನತೆಯ ನಿವಾರಣೆ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳ ಬಲವರ್ಧನೆ, ಸಾರಿಗೆಯ ಸುಗಮ ವ್ಯವಸ್ಥೆ, ಕಾನೂನು ಮತ್ತು ಸುವ್ಯವಸ್ಥೆ ನಿಭಾವಣೆಗೆ ಹೊಸ ಕಾರ್ಯತಂತ್ರಗಳಿಗೆ ಹೆಚ್ಚು ಆದ್ಯತೆ

* ರೈತರ ಕಲ್ಯಾಣ ಉದ್ದೇಶಿತ ಯೋಜನೆಗಳಿಗೆ ವಿವಿಧ ಇಲಾಖೆಗಳಿಗೆ ಕಳೆದ ಒಟ್ಟು $51,339 ಕೋಟಿ ಅನುದಾನ

* 2030 ರ ವೇಳೆಗೆ ಉತ್ಪಾದನಾ ವಲಯದಲ್ಲಿ ಶೇ.12ರಷ್ಟು ವಾರ್ಷಿಕ ಬೆಳವಣಿಗೆಯನ್ನು ಸಾಧಿಸುವುದರೊಂದಿಗೆ 20 ಲಕ್ಷ ಉದ್ಯೋಗಗಳನ್ನು ಸೃಜಿಸುವ ಗುರಿ

* ಹೂಡಿಕೆಗಳನ್ನು ಉತ್ತೇಜನಕ್ಕೆ 13,500 ಕೋಟಿ ಸಹಾಯಧನ ಮತ್ತು ಆರ್ಥಿಕ ನೆರವು

  • 2024-25ನೇ ಸಾಲಿಗೆ ರಾಜಸ್ವ ಸ್ವೀಕೃತಿಗಳು ವಾರ್ಷಿಕ ಶೇ 10.3 ರಷ್ಟು ಬೆಳವಣಿಗೆಯನ್ನು ದಾಖಲಿಸುವ ನಿರೀಕ್ಷೆ.

* 2024-25ನೇ ಸಾಲಿಗೆ ತೆರಿಗೆಯೇತರ ರಾಜಸ್ವದಲ್ಲಿ ₹14,500 ಕೋಟಿ ಗಳು ಸಂಗ್ರಹವಾಗುವ ನಿರೀಕ್ಷೆ.

* ತೆರಿಗೆಯೇತರ ರಾಜಸ್ವವು ವರ್ಷವಾರು ಶೇ10.5ರಷ್ಟು ಬೆಳವಣಿಗೆ ಸಾಧಿಸುವ ನಿರೀಕ್ಷೆ.

* ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೂ ರಸ್ತೆ, ಸಣ್ಣ ನೀರಾವರಿ ಹಾಗೂ ಮೂಲಸೌಕರ್ಯ ಒದಗಿಸಲು ₹8,000 ಕೋಟಿ

* ವಾಣಿಜ್ಯ ತೆರಿಗೆ, ಅಬಕಾರಿ, ನೋಂದಣಿ ಮತ್ತು ಮುದ್ರಾಂಕ, ಸಾರಿಗೆ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗಳ ‘ಬಿ’ ಮತ್ತು ‘ಸಿ’ ವೃಂದಗಳಲ್ಲಿ ಕೌನ್ಸೆಲಿಂಗ್‌ ಮೂಲಕ ವರ್ಗಾವಣೆ ಪ್ರಕ್ರಿಯೆ

ಕೃಷಿಗೆ ಸಿಕ್ಕಿದ್ದೇನು?

* ಕೃಷಿ ಯಾಂತ್ರೀಕರಣ ಕಾರ್ಯಕ್ರಮದಡಿ 50 ಸಾವಿರ ರೈತರಿಗೆ ಸಹಾಯಧನ ಒದಗಿಸಲು ₹428 ಕೋಟಿ ಅನುದಾನ

* 1.81 ಲಕ್ಷ ರೈತರಿಗೆ ಹನಿ ಮತ್ತು ತುಂತುರು ನೀರಾವರಿ ಘಟಕಗಳ ಅಳವಡಿಕೆಗೆ ₹440 ಕೋಟಿ ಸಹಾಯಧನ

* ರೈತರ ಆದಾಯ ಮತ್ತು ಪೌಷ್ಟಿಕ ಭದ್ರತೆಯನ್ನು ಸುಧಾರಿಸಲು * 88 ಕೋಟಿ

* 5,000 ಕಿರು ಸಂಸ್ಕರಣಾ ಘಟಕಗಳನ್ನು ಸ್ಥಾಪನೆ

* 12,000 ಕೃಷಿ ಹೊಂಡಗಳ ಸ್ಥಾಪನೆ

* ಹವಾಮಾನ ವಲಯಗಳನ್ನು ಮರುವ್ಯಾಖ್ಯಾನಗೊಳಿಸಲು ತಜ್ಞರ ಸಮಿತಿ ರಚನೆ

* ರೈತರ ಜೀವನೋಪಾಯವನ್ನು ಸುಧಾರಿಸಲು ‘ಸಮಗ್ರ ಮಳೆಯಾಶ್ರಿತ ಕೃಷಿ ನೀತಿ’ಯನ್ನು ಅನುಷ್ಠಾನ

* ಸುಸ್ಥಿರ ಸಾವಯವ ಕೃಷಿಯನ್ನು ಉತ್ತೇಜಿಸಲು ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲ್ಲೂಕನ್ನು ರಾಜ್ಯದ ಪ್ರಥಮ ಸಾವಯವ ತಾಲ್ಲೂಕನ್ನಾಗಿ ಪರಿವರ್ತಿನೆ.

* ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಒಟ್ಟಾರೆ 3,000 ಹೆಕ್ಟೇರ್ ಪ್ರದೇಶದಲ್ಲಿ ಸಮಗ್ರ ಮಣ್ಣು ಮತ್ತು ನೀರಿನ ನಿರ್ವಹಣೆ, ಸಮರ್ಪಕ ತ್ಯಾಜ್ಯ ನಿರ್ವಹಣೆ, ನೀರಿನ ಬಳಕೆ ಮತ್ತು ಸಮತೋಲನ ಪೋಷಕಾಂಶ ನಿರ್ವಹಣೆಯನ್ನು ಸಕ್ಕರೆ ಕಾರ್ಖಾನೆಗಳ ಸಹಯೋಗದೊಂದಿಗೆ ಜಾರಿ

* ಮಂಡ್ಯ ಕೃಷಿ ವಿಶ್ವವಿದ್ಯಾಲಯಕ್ಕೆ ₹25 ಕೋಟಿ

* ₹ 20 ಕೋಟಿ ಮೊತ್ತದಲ್ಲಿ ‘ಸಾವಯವ ಮತ್ತು ಸಿರಿಧಾನ್ಯಗಳ ಹಬ್’ ಅನ್ನು ಸ್ಥಾಪನೆ

* ವಿಜಯಪುರದ ಮುದ್ದೇಬಿಹಾಳ ತಾಲ್ಲೂಕಿನಲ್ಲಿ ಕೃಷಿ ಸಂಶೋಧನಾ ಕೇಂದ್ರ ಸ್ಥಾಪನೆತೋಟಗಾರಿಕೆ

* ತೋಟಗಾರಿಕಾ ಅಭಿವೃದ್ಧಿ ಯೋಜನೆ-2 ಗೆ ₹95 ಕೋಟಿ ಅನುದಾನ

* ತೋಟಗಾರಿಕಾ ಬೆಳೆಗಳ ಹನಿ ನೀರಾವರಿ ಕಾರ್ಯಕ್ರಮದಡಿ ಸುಮಾರು 52,000 ಫಲಾನುಭವಿಗಳಿಗೆ ₹426 ಕೋಟಿ. ಸಹಾಯ ಧನ

* ಅಡಿಕೆಯ ಎಲೆ ಚುಕ್ಕೆ ರೋಗದ ಬಾಧೆ ನಿಯಂತ್ರಣ ಕ್ರಮಗಳಿಗೆ ₹62 ಕೋಟಿ

* ಮೈಸೂರಿನಲ್ಲಿ NABARD ಸಹಯೋಗದಲ್ಲಿ ರೇಷ್ಮೆಗೂಡಿನ ಮಾರುಕಟ್ಟೆ ಸ್ಥಾಪನೆ

ಪ್ರಾಥಮಿಕ ಶಿಕ್ಷಣ ಕ್ಷೇತ್ರಕ್ಕೆ ಸಿಕ್ಕಿದ್ದೇನು?

* ಏಷಿಯನ್ ಡೆವಲಪ್‌ಮೆಂಟ್ ಬ್ಯಾಂಕ್ ನೆರವಿನೊಂದಿಗೆ ₹2,500 ಕೋಟಿ ವೆಚ್ಚದಲ್ಲಿ 500 ಹೊಸ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾರಂಭ

* ಶಾಲಾ ಮಕ್ಕಳಿಗೆ ಶ್ರೀ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್ ವತಿಯಿಂದ ಪ್ರಸ್ತುತ ವಾರದಲ್ಲಿ ಮೂರು ದಿನ ಸಾಯಿ ಶೂರ್ ರಾಗಿ ಹೆಲ್ತ್ ಮಿಕ್ಸ್ ಪುಡಿಯನ್ನು ಬಿಸಿ ಹಾಲಿನೊಂದಿಗೆ ಮಿಶ್ರಣ ಮಾಡಿ ವಿತರಿಸಲಾಗುತ್ತಿದ್ದು, ಇದನ್ನು ವಾರದ ಐದು ದಿನಗಳಿಗೆ ವಿಸ್ತರಿಸಲಾಗುವುದು. ₹100 ಕೋಟಿ ವೆಚ್ಚದ ಈ ಯೋಜನೆಯ ಶೇ 25 ರಷ್ಟು ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ.

* ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಅತಿಥಿ ಶಿಕ್ಷಕರು ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕ ಮಾಸಿಕ ಗೌರವಧನವನ್ನು ₹ 2,000 ಹೆಚ್ಚಳ

  • ಬಿಸಿಯೂಟ ತಯಾರಿಸುವ ಸಿಬ್ಬಂದಿಗೆ ನೀಡುತ್ತಿರುವ ಮಾಸಿಕ ಗೌರವಧನ ₹ 1,000ಗೆ

* ರಾಜ್ಯದ ಅರ್ಹ 100 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳನ್ನಾಗಿ ಹಾಗೂ 50 ಪ್ರೌಢಶಾಲೆಗಳನ್ನು ಪದವಿ ಪೂರ್ವ ಕಾಲೇಜುಗಳನ್ನಾಗಿ ಉನ್ನತೀಕರಣ

* 5000 ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳ ವಿಸ್ತರಣೆ ಇದಕ್ಕಾಗಿ ₹70 ಕೋಟಿ ವೆಚ್ಚ.

* ‘ಕಲಿಕಾ ಚಿಲುಮೆ’ ಕಾರ್ಯಕ್ರಮದಡಿ ಒಂದರಿಂದ ಐದನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಸಂತಸದಾಯಕ ಕಲಿಕಾ ಅನುಭವ ಒದಗಿಸುವುದು.

* ‘ಗಣಿತ ಗಣಕ’ ಕಾರ್ಯಕ್ರಮದಡಿ 3 ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ ಫೋನ್ ಮೂಲಕ ವೈಯಕ್ತಿಕ ಬೋಧನೆಯೊಂದಿಗೆ ಬುನಾದಿ ಗಣಿತ ಕೌಶಲ್ಯವನ್ನು ಅಭಿವೃದ್ಧಿಪಡಿಸಿ ರಾಜ್ಯಾದ್ಯಂತ ವಿಸ್ತರಣೆ

‘ಓದು ಕರ್ನಾಟಕ’ ಯೋಜನೆಯಡಿ 4 ಮತ್ತು 5ನೇ ತರಗತಿ ವಿದ್ಯಾರ್ಥಿಗಳಿಗೆ ಬುನಾದಿ ಸಾಕ್ಷರತೆ ಹಾಗೂ ಸಂಖ್ಯಾಜ್ಞಾನದ ಕೌಶಲ್ಯಗಳನ್ನು ಅಭಿವೃದ್ಧಿ

ಸರ್ಕಾರಿ ಶಾಲೆಗಳಲ್ಲಿ ಅತೀ ಕಡಿಮೆ ಕಲಿಕಾ ಸ್ತರದಲ್ಲಿರುವ 6 ರಿಂದ 10ನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯ ಹೆಚ್ಚಿಸುವ ‘ಮರುಸಿಂಚನ’ ಕಾರ್ಯಕ್ರಮವನ್ನು ರಾಜ್ಯಾದ್ಯಂತ ವಿಸ್ತರಿಸುವುದು.

‘ನಿರಂತರ’ ಕಾರ್ಯಕ್ರಮದಡಿ Face Recognition ತಂತ್ರಜ್ಞಾನದ ಮೂಲಕ ಮಕ್ಕಳ ಹಾಜರಾತಿಯನ್ನು ಖಚಿತಪಡಿಸುವ ವ್ಯವಸ್ಥೆಯನ್ನು ಜಾರಿ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ

* ಗೃಹಲಕ್ಷ್ಮಿ ಯೋಜನೆಗೆ ₹28,608 ಕೋಟಿ ಅನುದಾನ

* ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ₹1,000 ಹಾಗೂ ಸಹಾಯಕಿಯರ ಗೌರವಧನವನ್ನು ₹750ಗೆ ಹೆಚ್ಚಳ

* ಮಹಿಳಾ ಉದ್ದೇಶಿತ ಕಾರ್ಯಕ್ರಮಗಳಿಗಾಗಿ ₹ 94,084 ಕೋಟಿ

* ಮಕ್ಕಳ ಉದ್ದೇಶಿತ ಕಾರ್ಯಕ್ರಮಗಳಿಗಾಗಿ ₹62,033 ಕೋಟಿ

* ರಾಜ್ಯ ಅನುದಾನದಡಿಯಲ್ಲಿ ನಡೆಯುತ್ತಿರುವ ವಸತಿಯುತ ವಿಶೇಷ ಶಾಲೆಗಳ ಮಕ್ಕಳ ಪಥ್ಯಾಹಾರ ಭತ್ಯೆಯನ್ನು ಮಾಸಿಕ ₹1,750ಗೆ ಹೆಚ್ಚಳ

* ಸಕ್ಷಮ ಅಂಗನವಾಡಿ ಯೋಜನೆಯಡಿ ರಾಜ್ಯದ 17,454 ಅಂಗನವಾಡಿ ಕೇಂದ್ರಗಳಿಗೆ ಹೆಚ್ಚುವರಿ ಸೌಲಭ್ಯಗಳನ್ನು ಕಲ್ಪಿಸಲು ತಲಾ ₹1 ಲಕ್ಷದಂತೆ ಒಟ್ಟು ₹175 ಕೋಟಿ ಅನುದಾನ

* ಬಳ್ಳಾರಿಯ ಸರ್ಕಾರಿ ಶ್ರವಣದೋಷವುಳ್ಳ ಮಕ್ಕಳ ಶಾಲೆ ಹಾಗೂ ಹುಬ್ಬಳ್ಳಿಯ ದೃಷ್ಟಿದೋಷವುಳ್ಳ ಮಕ್ಕಳ ಶಾಲೆಗಳನ್ನು ಪ್ರಾಥಮಿಕ ಶಾಲಾ ಹಂತದಿಂದ ಪ್ರೌಢಶಾಲಾ ಹಂತಕ್ಕೆ ಮೇಲ್ದರ್ಜೆಗೆ

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!