spot_img
Tuesday, March 17, 2026
spot_img

ಕೋಳಿ ಅಂಕಕ್ಕೆ ಅನುಮತಿ ಕೇಳುವ ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರಿಗೆ ಸಕ್ಕರೆ ಕಾರ್ಖಾನೆ ಕಾಣಿಸಲೇ ಇಲ್ಲ : ವಿಕಾಸ್‌ ಹೆಗ್ಡೆ ಆರೋಪ

ಜನಪ್ರತಿನಿಧಿ (ಕುಂದಾಪುರ/ಉಡುಪಿ) : ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ಬಜೆಟ್ ರಾಜ್ಯದ ಸಮಗ್ರ ಅಭಿವೃದ್ಧಿಗೆ ಪೂರಕವಾಗಿದೆ. ಇವತ್ತು ಅಲ್ಪಸಂಖ್ಯಾತರ ತುಷ್ಠಿಕರಣದ ಬಜೆಟ್ ಎನ್ನುವ ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರುಗಳು ತಮ್ಮ, ತಮ್ಮ ಕ್ಷೇತ್ರಕ್ಕೆ ತಂದ ಯೋಜನೆಗಳನ್ನು ಸಾರ್ವಜನಿಕವಾಗಿ ತಿಳಿಸಲಿ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್‌ ವಕ್ತಾರ ಕೆ. ವಿಕಾಸ್‌ ಹೆಗ್ಡೆ ಹೇಳಿದ್ದಾರೆ.

ಕೋಳಿ ಅಂಕಕ್ಕೆ ಅನುಮತಿ ಕೇಳುವ ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರಿಗೆ ಸಕ್ಕರೆ ಕಾರ್ಖಾನೆ, ವರಾಹಿ ಯೋಜನೆ, ಸರ್ಕಾರಿ ವೈದ್ಯಕೀಯ ಕಾಲೇಜು, ಪ್ರವಾಸೋದ್ಯಮ ಅಭಿವೃದ್ಧಿ, ಕಿಂಡಿ ಅಣೆಕಟ್ಟುಗಳು, ಬ್ರಹ್ಮಾವರದಲ್ಲಿ ಕೃಷಿ ವಿಜ್ಞಾನ ಕಾಲೇಜು, ಪಶು ಆಹಾರ ಘಟಕ ಸ್ಥಾಪನೆ, ಉದ್ಯೋಗವಕಾಶ ಕಲ್ಪಿಸುವ ಉದ್ಯಮ ಹಾಗೂ ಉದ್ದಿಮೆಗಳು, ಉಪ ಸಾರಿಗೆ ಆಯುಕ್ತರ ಕಚೇರಿ  ಇದು ಯಾವುದು ನೆನಪು ಬಾರದೇ ಇದ್ದದ್ದು ನಿಮ್ಮನ್ನು ಆಯ್ಕೆ ಮಾಡಿದ ಜನತೆಗೆ ನೀವು ಮಾಡಿದ ದ್ರೋಹ ಎಂದು ಅವರು ಆಕ್ರೋಶ ಹೋರ ಹಾಕಿದ್ದಾರೆ.

ಕೇವಲ ಟೀಕೆ ಮಾತ್ರ ರಾಜಕಾರಣ ಎಂದು ತಿಳಿದಿರುವ ಜಿಲ್ಲೆಯ ಬಿಜೆಪಿ ಶಾಸಕರುಗಳು ಮುಖ್ಯಮಂತ್ರಿಗಳ ಬಳಿ ಹೋಗಿ ಬಜೆಟ್ ಮೇಲಿನ ಚರ್ಚೆಯಲ್ಲಿ ಜಿಲ್ಲೆಯ ಬೇಡಿಕೆಗಳ ಪಟ್ಟಿ ಇಡಬೇಕು ಹಾಗೂ ಬಜೆಟ್ ನಲ್ಲಿ ಇನ್ನೂ ಸೇರ್ಪಡೆಗೆ ಅವಕಾಶ ಇರುವುದು ಇವರ ಗಮನದಲ್ಲಿ ಇಟ್ಟುಕೊಂಡು ಮುಖ್ಯಮಂತ್ರಿಗಳು ಬಜೆಟ್ ಚರ್ಚೆಗೆ ಕೊನೆಗೆ ಉತ್ತರಿಸುವಾಗ ಉಡುಪಿ ಜಿಲ್ಲೆಯ ಜನತೆಯ ಬೇಡಿಕೆಗಳನ್ನು ಪೂರೈಸುವ ಕೆಲಸವಾದರೂ ಆಗಲಿ ಎಂದು ಅವರು ಆಗ್ರಹಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!