spot_img
Thursday, April 2, 2026
spot_img

ಅಕ್ರಮ ಗೋವು ಸಾಗಾಟ ಮಾಡುತ್ತಿದ್ದ ಕಾರು ಢಿಕ್ಕಿ: ರಸ್ತೆ ಮಧ್ಯದಲ್ಲಿ ವಾಹನ ಬಿಟ್ಟು ಪರಾರಿ ಯತ್ನ, ಮೂವರ ಬಂಧನ

ಕುಂದಾಪುರ: ಬಂಟ್ವಾಡಿ ಆಲೂರು ಮುಖ್ಯರಸ್ತೆಯ ಗುಡ್ಡಮ್ಮಾಡಿ ಕ್ರಾಸ್ ಬಳಿ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಸ್ವಿಫ್ಟ್ ಕಾರು, ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದ ಕಾರಣ ರಸ್ತೆ ಮಧ್ಯದಲ್ಲಿಯೇ ಕಾರು ಬಿಟ್ಟು ನಾಲ್ವರು ಆರೋಪಿಗಳು ಪರಾರಿಯಾಗಿದ್ದಾರೆ.

ಕಾರಿನಿಂದ ತಪ್ಪಿಸಿಕೊಂಡು ಓಡಿಹೋದ ಆರೋಪಿಗಳು ಸಮೀಪದಲ್ಲಿ ಹರಿಯುತ್ತಿದ್ದ ಸೌಪರ್ಣಿಕಾ ನದಿಗೆ ಹಾರಿದ್ದಾರೆ. ಅವರನ್ನು ಹಿಂಬಾಲಿಸಿಕೊಂಡು ಬಂದ ಸ್ಥಳಿಯರು ಹಾಗೂ ಮಾಹಿತಿ ಪಡೆದು ಬಂದ ಗಂಗೊಳ್ಳಿ ಪೊಲೀಸರು ಹೊಳೆಗೆ ಹಾರಿದ ನಾಲ್ಕು ಆರೋಪಿಗಳ ಪೈಕಿ ಮೂವರನ್ನು ಹೊಳೆಯಿಂದಲೆ ಬಂಧಿಸಿದ್ದಾರೆ.

ಆಲೂರು ಕಡೆಯಿಂದ ಬಂಟ್ವಾಡಿ ಕಡೆಗೆ ಕಾರನ್ನು ಅತೀವೇಗ ಹಾಗೂ ಅಜಾಗರೂಕತೆಯಿಂದ ರಸ್ತೆಯ ತೀರಾ ಬಲಬದಿಗೆ ಚಲಾಯಿಸಿಕೊಂಡು ಬಂದು ಪಿಕಪ್ ನ ಮುಂದಿನ ಬಲಬದಿಯ ಟಯರ್ ಗೆ ಡಿಕ್ಕಿ ಹೊಡೆದು ನಂತರ ಹಿಂಬದಿಯ ಟಯರ್ ಗೆ ಹಾಗೂ ಪಿಕಪ್‌ನ ಹಿಂಬದಿಯ ಬಾಡಿಗೆ ಡಿಕ್ಕಿ ಹೊಡೆದಿದೆ.ನಂತರ ಕಾರಿನಿಂದ ಇಳಿದು ಓಡಿ ಹೋಗುತ್ತಿದ್ದ ಆರೋಪಿತರಾದ ಮೊಹಮ್ಮದ್ ಸೀನಾನ್ ಗುಲ್ವಾಡಿ, ಮೊಹಮ್ಮದ್ ಅಬೀಬ್, ಮೊಹಮ್ಮದ್ ಅಬಾನ್ ಮೂಡುಗೋಪಾಡಿ ಇವರನ್ನು ಬಂಟ್ವಾಡಿ ಹೊಳೆ ಬದಿಯಲ್ಲಿ ಸಾರ್ವಜನಿಕರು ಹಿಡಿದು ಪೋಲಿಸರಿಗೆ ಒಪ್ಪಿಸಿದ್ದು ಮತ್ತೊಬ್ಬ ಆರೋಪಿತನಾದ ತೌಹಿದ್ ಪರಾರಿಯಾಗಿದ್ದಾನೆ.

ಅಪಘಾತಪಡಿಸಿದ ಕಾರನ್ನು ಪರಿಶೀಲಿಸಲಾಗಿ ಕಾರಿನ ಹಿಂಬದಿ ಸೀಟಿನಲ್ಲಿ ಒಂದು ಕಂದು ಬಣ್ಣದ ಗಂಡು ಕರುವಿನ ಕಾಲುಗಳನ್ನು ಕಟ್ಟಿ ಹಾಕಿರುವುದು ಕಂಡು ಬಂದಿರುತ್ತದೆ. ಆರೋಪಿತರೆಲ್ಲರೂ ಗಂಡು ಕರುವನ್ನು ಎಲ್ಲಿಂದಲೋ ಕಳವು ಮಾಡಿಕೊಂಡು ಬಂದು ಅದನ್ನು ವಧೆ ಮಾಡಿ ಮಾಂಸ ಮಾಡುವ ಉದ್ದೇಶದಿಂದ ಹಿಂಸಾತ್ಮಕವಾಗಿ ಕಾರಿನಲ್ಲಿ ತುಂಬಿ ಕಾರನ್ನು ಅತೀವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ವಾಹನಕ್ಕೆ ಡಿಕ್ಕಿ ಹೊಡೆಯಲಾಗಿದೆ. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!