spot_img
Sunday, March 29, 2026
spot_img

ಕುಂಭಾಸಿ ನಾಗಾಚಲ ದೇವಸ್ಥಾನದಲ್ಲಿ ನಾಗಮಂಡಲೋತ್ಸವದ ಚಪ್ಪರ ಮುಹೂರ್ತ

ಕುಂದಾಪುರ: ನಾಗಾಚಲ ಶ್ರೀ ಅಯ್ಯಪ್ಪ ಸ್ವಾಮಿ ಮತ್ತು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಆನೆಗುಡ್ಡೆಯಲ್ಲಿ ನೂತನವಾಗಿ ಶೃಂಗೇರಿ ಶಂಕರ ಮಠ ಸ್ಥಾಪಿಸುವ ನಿಮಿತ್ತ ಲೋಕಕಲ್ಯಾಣಾರ್ಥವಾಗಿ ಮಾ.28ರಂದು ಜರುಗುವ ನಾಗ ಮಂಡಲೋತ್ಸವ ಕಾರ್ಯಕ್ರಮಕ್ಕೆ ಚಪ್ಪರ ಮುಹೂರ್ತದ ಧಾರ್ಮಿಕ ವಿಧಿ ವಿಧಾನ ಮಾ.9ರಂದು ನೆಡೆಯಿತು.

ಚಪ್ಪರ ಮುಹೂರ್ತದ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿ ಮಾತನಾಡಿದ ಶೃಂಗೇರಿ ಶಾರದಾ ಪೀಠದ ಪ್ರಾಂತೀಯ ಧರ್ಮಾಧಿಕಾರಿ, ನಾಗಪಾತ್ರಿಗಳಾದ ವೇದಮೂರ್ತಿ ಲೋಕೇಶ ಅಡಿಗ ಬಡಾಕೆರೆ ಅವರು, 14 ವರ್ಷಗಳ ಹಿಂದೆ ಇಲ್ಲಿ ನಾಗಮಂಡಲೋತ್ಸವ ಕಾರ್ಯಕ್ರಮ ನಡೆದಿತ್ತು. ಪರಮಪೂಜ್ಯ ದಕ್ಷಿಣಾಮ್ನಾಯ ಶೃಂಗೇರಿ ಶಾರದಾ ಪೀಠಾಧೀಶರಾದ ಜಗದ್ಗುರು ಶ್ರೀ ಭಾರತೀ ತೀರ್ಥ ಮಹಾ ಸ್ವಾಮಿಗಳ ಪೂರ್ಣ ಆಶೀರ್ವಾದದೊಂದಿಗೆ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಮಹಾ ಸನ್ನಿದಾನಂಗಳವರ ಮಾರ್ಗದರ್ಶನದಲ್ಲಿ ಇದೇ ಮಾ.25ರಿಂದ 28ರ ತನಕ ಜಗದ್ಗುರುಗಳ ಉಪಸ್ಥಿತಿಯಲ್ಲಿ ನಾನಾ ಧಾರ್ಮಿಕ ಕಾರ್ಯಕ್ರಮದೊಂದಿಗೆ ಶೃಂಗೇರಿ ಶಂಕರ ಮಠ ಸ್ಥಾಪನೆಗೊಳ್ಳಲಿದೆ. ಮಾ.28ರಂದು ನಡೆಯುವ ನಾಗ ಮಂಡಲೋತ್ಸವಕ್ಕೂ ಭಕ್ತರು ಸಹಕರಿಸಿ ಕೈಜೋಡಿಸಬೇಕೆಂದು ಹೇಳಿದರು.

ಕಮಲಶಿಲೆ ಬ್ರಾಹಿ ದುರ್ಗಾ ಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಸಚ್ಚಿದಾನಂದ ಚಾತ್ರ ಚಪ್ಪರ ಮುಹೂರ್ತ ನೆರವೇರಿಸಿ ಶುಭ ಹಾರೈಸಿದರು.

ಕಮಲಶಿಲೆ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಸಚ್ಚಿದಾನಂದ ಚಾತ್ರ ಚಪ್ಪರ ಮುಹೂರ್ತ ನೆರವೇರಿಸಿ ಶುಭ ಹಾರೈಸಿದರು.

ಕುಂದಾಪುರ ಸಹಾಯಕ ಆಯುಕ್ತ ಮಹೇಶ್ಚಂದ್ರ, ದೇವಸ್ಥಾನದ ಸಂಸ್ಥಾಪಕರಾದ ಅಮಿತಾ ಕಲ್ಲುಜಿಕರ್ ಮತ್ತು ಅರುಣ್ ಕಲ್ಲುಜಿಕರ್, ಡಾ.ರಾಮ್ ಪ್ರಕಾಶ್, ನಾಗಮಂಡಲೋತ್ಸವ ನಾನಾ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು, ದ್ರಾವಿಡ ಬ್ರಾಹ್ಮಣ ಪರಿಷತ್‌ನ ಪದಾಧಿಕಾರಿಗಳು, ಸ್ಥಳೀಯ ಸಂಘ ಸಂಸ್ಥೆಯ ಪದಾಧಿಕಾರಿಗಳು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರು ಉಪಸ್ಥಿತರಿದ್ದರು. ದೇವಳದ ಪ್ರಧಾನರಾದ ಲಕ್ಷ್ಮೀಶ್ ಅಡಿಗ ಬಡಾಕೆರೆ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ನಾಗೇಂದ್ರ ಅಡಿಗ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!