spot_img
Thursday, April 2, 2026
spot_img

ಹೆಬ್ರಿ ಅಮೃತ ಭಾರತಿ ವಿದ್ಯಾಲಯ: ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಸಂಕಲ್ಪ ದಿವಸ

ಹೆಬ್ರಿ: ಪಿ.ಆರ್.ಎನ್. ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ವಿದ್ಯಾಲಯದ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಸಂಕಲ್ಪ ದಿವಸ ಕಾರ್ಯಕ್ರಮ ಅನ್ನಪೂರ್ಣ ಸಭಾಂಗಣದಲ್ಲಿ ಜರುಗಿತು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲರಾದ ದಿವಾಕರ ಮರಕಾಲ ಮಾತನಾಡಿ, ಬಡತನ ಶಾಪವಲ್ಲ. ಬಡತನವನ್ನು ಜಯಿಸಿ ನಮ್ಮ ಗುರಿಯ ಕಡೆಗೆ ಸಾಗಬೇಕು . ಬಡತನವನ್ನೇ ನಮ್ಮ ಅಸ್ತ್ರವನ್ನಾಗಿಸಿಕೊಳ್ಳಬೇಕು. ಸಮಾಜದಲ್ಲಿನ ಹಲವಾರು ಅನಿಷ್ಟ ಗಳಿಂದ ದೂರವಿರಬೇಕು. 10ನೇ ತರಗತಿಯ ಪಬ್ಲಿಕ್ ಪರೀಕ್ಷೆಯ ಫಲಿತಾಂಶದಲ್ಲಿ ರಾಜ್ಯಮಟ್ಟದಲ್ಲಿ ನಿಮ್ಮ ಶಾಲೆಯು ಗುರುತಿಸುವಂತೆ ಆಗಲಿ ಎಂದು ಹೇಳಿದರು.

ವೇದಿಕೆಯಲ್ಲಿ ಆಡಳಿತ ಮಂಡಳಿ ಅಮೃತ ಭಾರತಿ ವಿದ್ಯಾಲಯ ಅಧ್ಯಕ್ಷರಾದ ಶೈಲೇಶ್ ಕಿಣಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ೧೦ನೇ ತರಗತಿಯ ಪಬ್ಲಿಕ್ ಪರೀಕ್ಷೆಯಲ್ಲಿ ಯಶಸ್ಸು ನಿಮ್ಮದಾಗಲಿ, ಸಂಸ್ಥೆಯು ನಿಮ್ಮಿಂದ ಕೀರ್ತಿ ಗಳಿಸಲಿ ಎಂದು ಶುಭ ಹಾರೈಸಿದರು.
ವೇದಿಕೆಯಲ್ಲಿ ಸಂಸ್ಥೆಯ ಮುಖ್ಯೋಪಾಧ್ಯಾಯಿನಿ ಅಪರ್ಣಾ ಆಚಾರ್ ಸಂಸ್ಥೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ವಿಜಯ ಕುಮಾರ್ ಶೆಟ್ಟಿ, ಅಮೃತ ಭಾರತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಅಮರೇಶ್ ಹೆಗ್ಡೆ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ಅನನ್ಯ ನಾಯಕ್, ಸಚಿನ್ ಕುಮಾರ್ ಅನಿಸಿಕೆಗಳನ್ನು ಹೇಳಿಕೊಂಡರು. ವಿದ್ಯಾರ್ಥಿಗಳಿಗೆ ಶಾಲೆಯ ಕಡೆಯಿಂದ ಹಣತೆಯನ್ನು ಮತ್ತು ಕಾಣಿಕೆಯಾಗಿ ಲೇಖನಿ ಮತ್ತು ಸಾಂಕೇತಿಕವಾಗಿ ಪ್ರವೇಶ ಪತ್ರವನ್ನು ವಿತರಿಸಲಾಯಿತು. ಪಂಚಮಿ ಮಾತಾಜಿ ಕಾರ್ಯಕ್ರಮ ನಿರ್ವಹಿಸಿ, ಸುಮನ್ ನಾಯಕ್ ಗುರೂಜಿ ಸ್ವಾಗತಿಸಿ, ಸುಮನ ವಾಣಿ ಮಾತಾಜಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!