spot_img
Sunday, February 15, 2026
spot_img

ಕಾನೂನಿನನ್ವಯ ಮೈಕ್ರೋ ಫೈನಾನ್ಸ್‌ ಕಪ್ಪು ಹಣ ಕಡಿವಾಣಕ್ಕೆ ರಾಜ್ಯ ಸರ್ಕಾರ ಸಿದ್ಧತೆ !

ಜನಪ್ರತಿನಿಧಿ (ಬೆಂಗಳೂರು) : ಸಾಲ ನೀಡುವ ಸಂಸ್ಥೆಗಳು, ಕಿರುಬಂಡವಾಳ ಸಂಸ್ಥೆಗಳು ಕಪ್ಪು ಹಣವನ್ನು ಬಿಳಿ ಹಣವಾಗಿ ಪರಿವರ್ತಿಸುವ ಸಾಧನಗಳಾಗಿ ಮಾರ್ಪಟ್ಟಿದ್ದು, ಇದಕ್ಕೆ ಕಡಿವಾಣ ಹಾಕುವ ಅಗತ್ಯವಿದೆ ಎಂದು ಕಾನೂನು ಸಚಿವ ಎಚ್‌ಕೆ ಪಾಟೀಲ್ ಹೇಳಿದರು.

ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ (ಮೈಕ್ರೋ ಫೈನಾನ್ಸ್‌) ಮಸೂದೆಗೆ ವಿಧಾನಸಭೆಯಲ್ಲಿ ಅಂಗೀಕಾರ ದೊರೆಯಿತು.

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪರವಾಗಿ ವಿಧೇಯಕದ ಕುರಿತು ಮಾತನಾಡಿದ ಎಚ್‌ಕೆ ಪಾಟೀಲ್ ಅವರು, ನೋಂದಾಯಿತವಲ್ಲದ ಲೇವಾದೇವಿದಾರರನ್ನು ನಿಯಂತ್ರಿಸುವುದು, ಮೂಲಭೂತ ಹಕ್ಕುಗಳ ರಕ್ಷಣೆಯನ್ನು ಖಚಿತಪಡಿಸುವುದು ಮೊದಲಾದ ಅಂಶಗಳನ್ನು ಒಳಗೊಂಡಿದೆ. ಕಾನೂನು ಬದ್ಧ ಲೇವಾದೇವಿಯನ್ನು ನಿಷೇಧಿಸುವುದಿಲ್ಲ ಆದರೆ ಬಲವಂತವಾದ ಸಾಲ ವಸೂಲಾತಿಯನ್ನು ನಿರ್ಬಂಧಿಸಲಿದೆ. ಅಧಿಕ ಬಡ್ಡಿ ವಿಧಿಸಿ ತೊಂದರೆ ಕೊಡುವುದರಿಂದ ಸಾಲಗಾರರು ಬೀದಿಗೆ ಬರುವಂತಹ ಮತ್ತು ಆತಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿಗೆ ದೂಡುವುದನ್ನು ತಡೆಯಲು ಹಾಗೂ ತಪ್ಪಿತಸ್ಥರಿಗೆ 10 ವರ್ಷ ಶಿಕ್ಷೆ ಹಾಗೂ 5 ಲಕ್ಷ ರೂ. ದಂಡ ವಿಧಿಸಲು ಅವಕಾಶ ಕಲ್ಪಿಸಲು ಈ ವಿಧೇಯಕವನ್ನು ಮಂಡಿಸಲಾಗಿದೆ ಎಂದು ಹೇಳಿದರು.

ಕಿರು ಸಾಲ ಮತ್ತು ಸಣ್ಣ ಸಾಲ, ಖಾಸಗಿ ಹಣಕಾಸು ಮತ್ತು ಇತರೆ ಅನಿಯಂತ್ರಿತ ಲೇವಾದೇವಿ ಮಾಫಿಯಾಗಳು ಬಡ ಗ್ರಾಮೀಣ ನಿರ್ಗತಿಕರು, ನಗರ ಕಾರ್ಮಿಕರು, ಸಮಾಜದ ಅಶಕ್ತ ಮತ್ತು ದುರ್ಬಲದವರನ್ನು ಪೀಡಿಸುತ್ತಿದೆ ಮತ್ತು ಉಸಿರುಗಟ್ಟಿಸುವಂತಹ ಪ್ರಕರಣಗಳು ವರದಿಯಾಗಿವೆ. ದುಪ್ಪಟ್ಟು ಬಡ್ಡಿ ವಿಧಿಸಿ ತೊಂದರೆಗೆ ಸಾಲಗಾರರನ್ನು ಸಿಲುಕಿಸುವುದನ್ನು ತಡೆಯಲು ಈ ವಿಧೇಯಕ ತರಲಾಗಿದೆ. ಕಪ್ಪು ಹಣಕ್ಕೆ ಕಡಿವಾಣ ಹಾಕುವುದು, ಲೇವಾದೇವಿ ಮಾಫಿಯಾಗಳಿಂದ ಸಾಲ ಪಡೆದವರಿಗೆ ಕಿರುಕುಳ ತಪ್ಪಿಸುವ ಉದ್ದೇಶವಿದೆ ಎಂದು ಹೇಳಿದರು.

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ ವ್ಯವಹಾರದಲ್ಲಿ ಸುಮಾರು 40 ಸಾವಿರ ಕೋಟಿ ರೂ. ಚಲಾವಣೆಯಲ್ಲಿದೆ. ಇದು ಯಾರ ಹಣ? ಸರಕಾರದ ಅನುದಾನವಿಲ್ಲದೆ, ಆರ್‌ಬಿಐ ಸಹಾಯ ಇಲ್ಲದೆ ಇಷ್ಟು ದೊಡ್ಡ ಪ್ರಮಾಣದಲ್ಲಿ ವಹಿವಾಟು ನಡೆಯುತ್ತಿರುವುದರ ಅರ್ಥವೇನು? ಇದೆಲ್ಲವೂ ಕಪ್ಪು ಹಣ ಎಂಬುದರಲ್ಲಿ ಅನುಮಾನ ಬೇಡ. ಬೇರೆ ಯಾವುದೇ ಪ್ರಾಮಾಣಿಕ ವ್ಯವಹಾರವು ಈ ರೀತಿಯ ಲಾಭವನ್ನು ಗಳಿಸಲು ಸಾಧ್ಯವಿಲ್ಲ. ಒಬ್ಬ ವ್ಯಕ್ತಿ ಕಪ್ಪು ಹಣವನ್ನು ಹೂಡಿಕೆ ಮಾಡುತ್ತಾನೆ. ಇದಕ್ಕೆ ಪ್ರತಿಯಾಗಿ ಶೇ.40-50ರಷ್ಟು ಲಾಭವನ್ನು ಪಡೆಯುತ್ತಾನೆ. ಹಣ ಸಾಲ ನೀಡುವವರು ಶ್ರೀಮಂತರಷ್ಟೇ ಅಲ್ಲ, ನಿಮ್ಮ ಪ್ರತಿಸ್ಪರ್ಧಿಗಳಾಗುತ್ತಿದ್ದಾರೆ ಎಂದು ಶಾಸಕರಿಗೆ ತಿಳಿಸಿದರು.

ಕಪ್ಪು ಹಣ, ದೊಡ್ಡ ಲಾಭ ಮತ್ತು ರಾಜಕೀಯ ಶಕ್ತಿಯು ಸಮಾಜದ ಸ್ವಾಸ್ಥ್ಯವನ್ನು ಹಾನಿಗೊಳಿಸುತ್ತದೆ ಎಂದು ಅವರು ಹೇಳಿದರು.

ಹೊಸ ಕಾನೂನು ಶಿಕ್ಷೆಯನ್ನು ಹೆಚ್ಚಿಸಲಿದ್ದು, ಕ್ರಮ ಕೈಗೊಳ್ಳಲು ವಿಫಲರಾದ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡುತ್ತದೆ ಎಂದು ಮಾಹಿತಿ ನೀಡಿದರು.

ನಮ್ಮಲ್ಲಿ ಈಗಾಗಲೇ ಅನಿಯಂತ್ರಿತ ಠೇವಣಿ ಯೋಜನೆಗಳ ಕಾಯ್ದೆ 2019, ಕರ್ನಾಟಕ ಠೇವಣಿದಾರರ ಹಿತಾಸಕ್ತಿ ಸಂರಕ್ಷಣಾ ಕಾಯ್ದೆ, ಕರ್ನಾಟಕ ಅತಿಯಾದ ಬಡ್ಡಿ ವಿಧಿಸುವುದನ್ನು ನಿಷೇಧಿಸುವ ಕಾಯ್ದೆ ಮತ್ತು ಕರ್ನಾಟಕ ಪಾನ್ ಬ್ರೋಕರ್ಸ್ ಕಾಯ್ದೆ ಇವೆ. ಆದರೆ, ನಮಗೆ ಸಮಗ್ರ ಕಾನೂನು ಬೇಕಿತ್ತು. ಅಸ್ತಿತ್ವದಲ್ಲಿರುವ ಕಾನೂನುಗಳು ರೂ. 1,000 ರಿಂದ ರೂ. 10,000 ವರೆಗಿನ ದಂಡ ಮತ್ತು ಒಂದು ದಿನದಿಂದ ಆರು ತಿಂಗಳವರೆಗೆ ಜೈಲು ಶಿಕ್ಷೆಯನ್ನು ನೀಡುತ್ತದೆ. ಅಪರಾಧದ ಗಂಭೀರತೆಯನ್ನು ಲೆಕ್ಕಿಸದೆ ವ್ಯಕ್ತಿ ಪೊಲೀಸ್ ಠಾಣೆಯಲ್ಲಿ ಜಾಮೀನು ಪಡೆದು, ಹೊರಬರಬಹುದಾಗಿದೆ. ಈ ಕಾನೂನುಗಳು ಕಠಿಣವಾಗಿಲ್ಲ. ಅದಕ್ಕಾಗಿಯೇ ರಾಜ್ಯ ಸರ್ಕಾರ ದಂಡವನ್ನು 5 ಲಕ್ಷ ರೂ.ಗಳಿಗೆ ಮತ್ತು ಜೈಲು ಶಿಕ್ಷೆಯನ್ನು 10 ವರ್ಷಗಳಿಗೆ ಹೆಚ್ಚಿಸಿದೆ ಎಂದು ಹೇಳಿದರು.

ಇದಕ್ಕೂ ಮುನ್ನ ವಿಧೇಯಕ ಕುರಿತು ಪಕ್ಷ ಬೇಧ ಮರೆತು ಶಾಸಕರು ಕೆಲವು ಉಪಯುಕ್ತ ಸಲಹೆಗಳನ್ನು ನೀಡಿದರು. ತುರುವೇಕೆರೆ ಶಾಸಕ ಟಿ. ಕೃಷ್ಣಪ್ಪ ಅವರು ಇದನ್ನು ಆದಾಯ ತೆರಿಗೆ ವ್ಯಾಪ್ತಿಗೆ ತರಬೇಕು ಎಂದು ಹೇಳಿದರು. ಅನೇಕ ಅಧಿಕಾರಿಗಳು ಇಂತಹ ಮೈಕ್ರೋ ಫೈನಾನ್ಸಿಂಗ್ ಕಂಪನಿಗಳನ್ನು ಹೊಂದಿದ್ದಾರೆಂದು ಆರೋಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!