spot_img
Wednesday, April 1, 2026
spot_img

ಶಂಕರನಾರಾಯಣ ಕಾಲೇಜಿಗೆ ಎಂಕಾಂ ಪದವಿಯಲ್ಲಿ ದ್ವಿತೀಯ ರ್‍ಯಾಂಕ್

ಕುಂದಾಪುರ: ಶಂಕರನಾರಾಯಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಇಲ್ಲಿನ ವಿದ್ಯಾರ್ಥಿನಿ ಪ್ರತೀಕ್ಷಾ ಪಿ. ಶೆಟ್ಟಿ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ 2023-24ನೇ ಸಾಲಿನಲ್ಲಿ ನಡೆಸಿದ ಎಂಕಾಂ ಪರೀಕ್ಷೆಯಲ್ಲಿ ದ್ವಿತೀಯ ರ್‍ಯಾಂಕ್ ಲಭಿಸಿದೆ.

ಪ್ರತೀಕ್ಷಾ ಪಿ. ಶೆಟ್ಟಿ  ಸಿದ್ದಾಪುರದ ಪ್ರಭಾಕರ್ ಶೆಟ್ಟಿ ಮತ್ತು ಶ್ರೀಮತಿ ಜಯಲಕ್ಷ್ಮಿ ಪಿ ಶೆಟ್ಟಿ ಇವರ ಪುತ್ರಿ. ತಂದೆ ಅಮಾಸೆಬೈಲು ಸಮೂಹ ಸಂಪನ್ಮೂಲ ಕೇಂದ್ರದ ಸಂಪನ್ಮೂಲ ವ್ಯಕ್ತಿಯಾಗಿದ್ದಾರೆ.

ಈ ಮಹತ್ತರ ಸಾಧನೆಯ ಸಂದರ್ಭದಲ್ಲಿ ಕಾಲೇಜಿನ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಬೈಂದೂರು ಶಾಸಕ ಗುರುರಾಜ ಶೆಟ್ಟಿ ಗಂಟೆಹೊಳೆ ಅಪಾರ ಮೆಚ್ಚುಗೆ ವ್ಯಕ್ತಪಡಿಸಿರುತ್ತಾರೆ. ಇವರ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರಾದ ಡಾ.ವೆಂಕಟರಾಮ್ ಭಟ್, ಬೋಧಕ, ಬೋಧಕೇತರ ಸಿಬ್ಬಂದಿ, ಹಳೆ ವಿದ್ಯಾರ್ಥಿ ಸಂಘ ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!