spot_img
Thursday, April 2, 2026
spot_img

ಸುಮಲತಾ ಅಂಬರೀಷ್‌ ಸೇರಿ ಆಪ್ತರಿಗೆ ಇನ್‌ಸ್ಟಾದಿಂದ ಚಾಲೆಂಜಿಂಗ್‌ ಸ್ಟಾರ್ ಕೊಕ್‌

ಜನಪ್ರತಿನಿಧಿ (ಬೆಂಗಳೂರು) : ಸುಮಲತಾ ಅಂಬರೀಷ್ ಹಾಗೂ ದರ್ಶನ್ ಮಧ್ಯೆ ಒಳ್ಳೆಯ ಬಾಂಧವ್ಯ ಇತ್ತು. ದರ್ಶನ್​ನ ಮಗ ಎಂದು ಸುಮಲತಾ ಪರಿಗಣಿಸಿದ್ದರು.

ದರ್ಶನ್ ಜೈಲಿಗೆ ಹೋದಾಗ ಮೌನ ಕಾಯ್ದುಕೊಂಡಿದ್ದ ಸುಮಲತಾ, ದರ್ಶನ್ ಅವರು ಹೊರ ಬರುತ್ತಿದ್ದಂತೆ ‘ಅವನು ಯಾವಾಗಲೂ ನನ್ನ ಮಗ’ ಎಂದಿದ್ದರು. ಈಗ ಡೆವಿಲ್ ಚಿತ್ರೀಕರಣ ಆರಂಭವಾಗುವ ಹೊತ್ತಿನಲ್ಲೇ ಆಪ್ತರಿಗೆ ಇನ್‌ಸ್ಟಾದಿಂದ ದರ್ಶನ್‌ ಕೊಕ್‌ ಕೊಟ್ಟಿದ್ದಾರೆ.

ನಟ ದರ್ಶನ್ ಅವರು ಇನ್​ಸ್ಟಾಗ್ರಾಮ್​ನಲ್ಲಿ ಇಷ್ಟು ದಿನ ಕೆಲವೇ ಕೆಲವರನ್ನು ಫಾಲೋ ಮಾಡುತ್ತಾ ಇದ್ದರು. ಆ ಪೈಕಿ ಸುಮಲತಾ, ಅಭಿಷೇಕ್ ಅಂಬರೀಷ್, ಅಭಿ ಪತ್ನಿ ಅವಿವಾ, ಪುತ್ರ ವಿನೀಶ್, ಡಿ ಕಂಪನಿ ಇದ್ದವು. ಆದರೆ, ಈಗ ಅವರು ಎಲ್ಲರನ್ನೂ ಅನ್​ಫಾಲೋ ಮಾಡಿದ್ದಾರೆ. ಅವರು ಯಾರನ್ನು ಫಾಲೋ ಮಾಡದೇ ಇರೋದು ಹಲವು ಪ್ರಶ್ನೆ ಹುಟ್ಟಿ ಹಾಕಿದೆ . ಫಾಲೋ ಮಾಡುವವರ ಸಂಖ್ಯೆ ʻ0ʼ ಆಗಿದೆ. ಆದ್ರೆ ಇಂಥ ನಿರ್ಧಾರಕ್ಕೆ ಕಾರಣ ಏನು ಅಂತ ದರ್ಶನ್‌ ಫ್ಯಾನ್ಸ್‌ ತಲೆ ಕೆಡಿಸಿಕೊಂಡಿದ್ದಾರೆ.

ದರ್ಶನ್ ಜೈಲಿನಲ್ಲಿ ಇದ್ದಾಗ ಸುಮಲತಾ ಅವರನ್ನು ನೋಡಲು ಹೋಗಿಲ್ಲ. ರಾಜಕೀಯ ಕಾರಣಗಳಿಂದ ಅವರು ಹೀಗೆ ಮಾಡದೆ ಇರಬಹುದು. ಇದು ದರ್ಶನ್ ಮನಸ್ಸಿಗೆ ನಾಟಿದೆಯೇ ಎನ್ನುವ ಪ್ರಶ್ನೆ ಉಂಟುಮಾಡಿದೆ. ಸುಮಲತಾ ತಮ್ಮನ್ನು ಬೆಂಬಲಿಸಿಲ್ಲ ಎಂಬ ಕಾರಣಕ್ಕೆ ಇಬ್ಬರ ಮಧ್ಯೆ ವೈಮನಸ್ಸು ಮೂಡಿತೇ ಎನ್ನುವ ಪ್ರಶ್ನೆ ಹುಟ್ಟಿಕೊಂಡಿದೆ.

ದರ್ಶನ್ ಅನ್​ಫಾಲೋ ಮಾಡಿದ ವಿಚಾರ ಚರ್ಚೆ ಹುಟ್ಟುಹಾಕಿದ ಬೆನ್ನಲ್ಲೇ ಸುಮಲತಾ ಅವರು ಮಾರ್ಮಿಕವಾಗಿ ಪೋಸ್ಟ್ ಒಂದನ್ನು ಹಾಕಿದ್ದಾರೆ. ಇಂಗ್ಲಿಷ್ ಲೈನ್​ಗಳನ್ನು ಅವರು ಇನ್​ಸ್ಟಾಗ್ರಾಮ್​ ಸ್ಟೇಟಸ್​ಗೆ ಪೋಸ್ಟ್ ಮಾಡಿದ್ದಾರೆ. ಅತ್ಯುತ್ತಮ ನಟ ಆಸ್ಕರ್ ಅವಾರ್ಡ್ ಯಾರಿಗೆ ಹೋಗುತ್ತದೆ ಎಂದರೆ.. ಯಾರು ಸತ್ಯವನ್ನ ತಿರುಚುತ್ತಾರೆ, ಪಶ್ಚಾತಾಪ ಇಲ್ಲದೆ ಬೇರೆಯವರಿಗೆ ನೋವು ಮಾಡುತ್ತಾರೆ, ತಪ್ಪನ್ನು ಬೇರೆಯವರ ಮೇಲೆ ಹಾಕುತ್ತಾರೆ. ಆದಾಗ್ಯೂ ಅವರು ತಮ್ಮನ್ನು ತಾವು ಹೀರೋ ಎಂದುಕೊಳ್ಳುತ್ತಾರೆ’ ಎಂದು ಸುಮಲತಾ ಬರೆದುಕೊಂಡಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!