spot_img
Wednesday, April 1, 2026
spot_img

ದಂಡಿ ಸತ್ಯಾಗ್ರಹ ಸ್ವಾತಂತ್ರ್ಯ ಹೋರಾಟದ ನಿರ್ಣಾಯಕ ಅಧ್ಯಾಯ : ನಮೋ ಬಣ್ಣನೆ

ಜನಪ್ರತಿನಿಧಿ (ನವ ದೆಹಲಿ) : ದಂಡಿ ಯಾತ್ರೆಗೆ (ಉಪ್ಪಿನ ಸತ್ಯಾಗ್ರಹ) ಇಂದಿಗೆ ೯೫ ವರ್ಷ. ದಂಡಿ ಸತ್ಯಾಗ್ರಹವನ್ನು ಭಾರತದ ಸ್ವಾತಂತ್ರ್ಯ ಹೋರಾಟದ ನಿರ್ಣಾಯಕ ಅಧ್ಯಾಯ ಎಂದು ಪ್ರಧಾನಿ ನರೇಂದ್ರ ಮೋದಿ ಇಂದು(ಬುಧವಾರ) ವರ್ಣಿಸಿದ್ದಾರೆ.

ಈ ಸಂಬಂಧಿಸಿದಂತೆ ತಮ್ಮ ಅಧಿಕೃತ ಮೈಕ್ರೋಬ್ಲಾಗಿಂಗ್‌ ಖಾತೆ ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿರುವ ನಮೋ, ಮಹಾತ್ಮ ಗಾಂಧಿಯವರ ನೇತೃತ್ವದಲ್ಲಿ ನಡೆದ ಸತ್ಯಾಗ್ರಹದಲ್ಲಿ ಭಾಗವಹಸಿದ ಎಲ್ಲರಿಗೂ ನನ್ನ ನಮನಗಳು ಎಂದು ತಿಳಿಸಿದ್ದಾರೆ.

ಈ ಯಾತ್ರೆ ದೇಶದಾದ್ಯಂತ ಸ್ವಾವಲಂಬನೆ ಹಾಗೂ ಸ್ವಾತಂತ್ರ್ಯದ ಚಳುವಳಿಯನ್ನು ಹುಟ್ಟು ಹಾಕಿತು. ದಂಡಿ ಮೆರವಣಿಗೆಯಲ್ಲಿ ಭಾಗವಹಿಸಿದ ಎಲ್ಲರ ಧೈರ್ಯ, ತ್ಯಾಗ, ಸತ್ಯ ಹಾಗೂ ಅಹಿಂಸೆ ತತ್ವಗಳ ಬಗೆಗಿನ ಅಚಲ ಬದ್ಧತೆ ಮುಂದಿನ ಪೀಳಿಗೆಗೆ ಸ್ಪೂರ್ತಿದಾಯಕವಾದದ್ದು ಎಂದು ತಮ್ಮ ಪೋಸ್ಟ್‌ ನಲ್ಲಿ ಅವರು ಬರೆದುಕೊಂಡಿದ್ದಾರೆ.

ದಂಡಿ ಯಾತ್ರೆಗೆ ಭಾರಿ ಜನ ಬೆಂಬಲ ವ್ಯಕ್ತವಾಗಿತ್ತು. ಇದನ್ನು ಭಾರತದ ಸ್ವಾತಂತ್ರ್ಯ ಚಳುವಳಿಯಲ್ಲಿ ಒಂದು ಮಹತ್ವದ ತಿರುವು ಎಂದು ಪರಿಗಣಿಸಲಾಗಿದೆ ಎಂದು ಮೋದಿ ಹೇಳಿದ್ದಾರೆ.

ಬ್ರಿಟಿಷರು ಹೇರಿದ್ದ ಉಪ್ಪಿನ ಮೇಲಿನ ತೆರಿಗೆ ವಿರುದ್ಧ ಗಾಂಧೀಜಿ ನೇತೃತ್ವದಲ್ಲಿ ಪ್ರತಿಭಟನೆ ಆರಂಭಿಸಲಾಗಿತ್ತು. ಈ ದಿನದಂದು ಸಬರಮತಿ ಆಶ್ರಮದಿಂದ ದಂಡಿಗೆ ಪಾದಯಾತ್ರೆಯನ್ನು ಪ್ರಾರಂಭಿಸಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!