spot_img
Tuesday, May 19, 2026
spot_img

ಕೆಪಿಎಸ್‌ಸಿ : ಲೋಪದೋಷಗಳಿಗೆ ಕಾರಣರಾದ ವಿಷಯ ತಜ್ಞರನ್ನು ಕಪ್ಪುಪಟ್ಟಿಗೆ : ಸಿಎಂ ಸಿದ್ದರಾಮಯ್ಯ

ಜನಪ್ರತಿನಿಧಿ (ಬೆಂಗಳೂರು) : ಕರ್ನಾಟಕ ಲೋಕಸೇವಾ ಆಯೋಗವು ನಡೆಸುವ ನೇಮಕಾತಿ ಪ್ರಕ್ರಿಯೆ ಸಂಬಂಧಿಸಿದಂತೆ, ಸುಧಾರಣೆಗಳನ್ನು ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ.

ಈ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆ.ಎ.ಎಸ್‌ ಪೂರ್ವಭಾವಿ ಪರೀಕ್ಷೆ ಹಾಗೂ ಮರು ಪರೀಕ್ಷೆಯ ಪ್ರಶ್ನೆಪತ್ರಿಕೆಯಲ್ಲಿನ ಪ್ರಶ್ನೆಗಳಲ್ಲಿನ ಕನ್ನಡ ಭಾಷಾಂತರದಲ್ಲಿ ಉಂಟಾಗಿರುವ ಲೋಪದೋಷಗಳನ್ನು ಸರ್ಕಾರ ಗಂಭಿರವಾಗಿ ಪರಿಗಣಿಸಿದೆ ಎಂದು ತಿಳಿಸದ್ದಾರೆ.

ಪರೀಕ್ಷೆಗಳಲ್ಲಿನ ಪ್ರಶ್ನೆಪತ್ರಿಕೆಯಲ್ಲಿನ ಕನ್ನಡ ಭಾಷಾ೦ತರವನ್ನು ಸಮರ್ಪಕವಾಗಿ ನಿರ್ವಹಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಲೋಕಸೇವಾ ಆಯೋಗಗಳ ಸಹಯೋಗದೊಂದಿಗೆ ಒಂದು ಕನ್ನಡ ಭಾಷಾ ತಜ್ಞರ ತಂಡವನ್ನು ರಚಿಸಲು ಸಿಎಂ ಪ್ರಸ್ತಾಪಿಸಿದ್ದಾರೆ.

ಕೇಂದ್ರ ಲೋಕಸೇವಾ ಆಯೋಗವು ನಡೆಸುವ ನೇಮಕಾತಿ ವಿಧಾನಗಳನ್ನು ಪರಿಶೀಲಿಸಿ, ಕರ್ನಾಟಕ ಲೋಕಸೇವಾ ಆಯೋಗದಲ್ಲಿಯೂ ಅಳವಡಿಸಿಕೊಳ್ಳಲು ಸೂಚನೆಗಳನ್ನು ನೀಡಲಾಗಿದೆ. ಕೆ.ಎ.ಎಸ್. ಪೂರ್ವಭಾವಿ ಪರೀಕ್ಷೆ ಹಾಗೂ ಮರು ಪರೀಕ್ಷೆಯ ಪ್ರಶ್ನೆಪತ್ರಿಕೆಯಲ್ಲಿನ ಪ್ರಶ್ನೆಗಳಲ್ಲಿನ ಕನ್ನಡ ಭಾಷಾಂತರದಲ್ಲಿ ಲೋಪದೋಷಗಳಿಗೆ ಕಾರಣರಾದ ವಿಷಯ ತಜ್ಞರನ್ನು ಕಪ್ಪುಪಟ್ಟಿಗೆ ಸೇರಿಸಬೇಕು. ಅವರ ಮೇಲೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ.

ಭಾಷಾಂತರಕಾರರ ಲೋಪವಿದ್ದರೆ ಅವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಬೇಕು. ಆಯೋಗವು ನಡೆಸುವ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳನ್ನು ಮೊದಲು ಕನ್ನಡದಲ್ಲಿ ತಯಾರಿಸಿ, ನಂತರ ಇಂಗ್ಲೀಷ್ ಬಗ್ಗೆ ಭಾಷಾಂತರ ಮಾಡಲು ಆಯೋಗಕ್ಕೆ ಸೂಚನೆಯನ್ನು ನೀಡಲಾಗುವುದು ಎಂದು ಅವರು ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!