spot_img
Wednesday, April 1, 2026
spot_img

19ನೇ ದಿನದ ಅಹೋರಾತ್ರಿ ಧರಣಿ : ಪ್ರಾಂತ ರೈತ ಸಂಘದ ಬೆಂಬಲ

ಜನಪ್ರತಿನಿಧಿ (ಬ್ರಹ್ಮಾವರ) : ಬ್ರಹ್ಮಾವರ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಮತ್ತು ಅದರ ತನಿಖೆಯಲ್ಲಿ ವಿಳಂಬದ ವಿರುದ್ಧ ಉಡುಪಿ ಜಿಲ್ಲಾ ರೈತ ಸಂಘ ನಡೆಸುತ್ತಿರುವ ಅನಿರ್ದಿಷ್ಟಾವಧಿ ಅಹೋರಾತ್ರಿ ಸತ್ಯಾಗ್ರಹ 19ನೇ ದಿನಕ್ಕೆ ಕಾಲಿಟ್ಟಿದೆ.

19ನೇ ದಿನದ ಈ ಸತ್ಯಾಗ್ರಹದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘ ಉಡುಪಿ ಜಿಲ್ಲೆ ಮತ್ತು ಸಿಪಿಐಎಂ ಸಂಘಟನೆ ಬ್ರಹ್ಮಾವರ ಬೆಂಬಲ ಸೂಚಿಸಿದವು.

ಈ ಸಂದರ್ಭದಲ್ಲಿ ಪ್ರಾಂತ ರೈತ ಸಂಘದ ಮುಖಂಡರಾದ ಚಂದ್ರಶೇಖರ್‌ ವಿ. ಮಾತನಾಡಿ, ಭ್ರಷ್ಟಾಚಾರದ ವಿರುದ್ಧ ಅಧಿಕಾರಿ ವರ್ಗದವರು ಮತ್ತು ರಾಜಕಾರಣಿಗಳು ಮೌನ ವಹಿಸಿದ್ದಾರೆ. ಕಾರ್ಖಾನೆಯಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣವನ್ನು ಮಟ್ಟ ಹಾಕಲು ವ್ಯವಸ್ಥಿತವಾಗಿ ತಯಾರಿ ನಡೆಸಲಾಗುತ್ತಿದೆ. ಆದರೇ, ಉಡುಪಿ ಜಿಲ್ಲಾ ರೈತ ಸಂಘ ಸವಾಲುಗಳನ್ನು ಎದುರಿಸಿ ಹೋರಾಟ ಮಾಡಿದೆ. ಈ ಹೋರಾಟಕ್ಕೆ ಕರ್ನಾಟಕ ಪ್ರಾಂತ ರೈತ ಸಂಘ ಪೂರ್ಣ ಬೆಂಬಲ ನೀಡಲಿದೆ ಎಂದು ಅವರು ಹೇಳಿದರು.

ಕಾರ್ಮಿಕ ಮುಖಂಡರಾದ ಸುರೇಶ್‌ ಕಲ್ಲಗಾರ, ಕೆ.ಶಂಕರ, ಮಹಾಬಲ ವಡೇರಹೋಬಳಿ, ಬಾಲಕೃಷ್ಣ ಶೆಟ್ಟಿ, H ನರಸಿಂಹ, ರಾಮಚಂದ್ರ ನಾವಡ ಮಾತನಾಡಿದರು.

ಈ ಸಂದರ್ಭದಲ್ಲಿ ಪಡುಕೋಣೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ರಾಜೀವ ಪಡುಕೋಣೆ, ನಿರ್ದೇಶಕಾರದ ನಾಗರತ್ನ, ಸುನಿತ, ಶಂಕರ ಮೊಗವೀರ, ನಾಡ ಪಂಚಾಯತ್‌ ಸದಸ್ಯರಾದ ಶೋಭಾ ಭಾಗವಹಿಸಿದರು.

ಕಾರ್ಮಿಕ ಮುಖಂಡರಾದ ಕವಿರಾಜ್‌ ಉಡುಪಿ ಜಿಲ್ಲಾ ರೈತ ಸಂಘದ ಅಧ್ಯಕ್ಷ ಕೆ. ಪ್ರತಾಪಚಂದ್ರ ಶೆಟ್ಟಿ ಬಹುಕೋಟಿ ಹಗರಣ ವಿರುದ್ಧ ನಡೆದ ಹೋರಾಟವನ್ನು ವಿವರವನ್ನು ತಿಳಿಸಿದರು.

ರೈತ ಮುಖಂಡರಾದ ಸದಾನಂದ ಶೆಟ್ಟಿ ಕೆದೂರು ತನಿಖೆಯ ವಿಳಂಬ ನೀತಿಯನ್ನು ಖಂಡಿಸಿ ಮಾತನಾಡಿದರು. ರೈತ ಸಂಘದ ಪ್ರಧಾನ ಕಾರ್ಯದರ್ಶಿ ಸತ್ಯಾಗ್ರಹಕ್ಕೆ ಆಗಮಿಸಿದ ಎಲ್ಲರನ್ನೂ ಬರಮಾಡಕೊಂಡರು.

ವಂಡ್ಸೆ ಸಹಕಾರಿ ಸಂಘದ ನಿರ್ದೇಶಕ ವಂಡಬಳ್ಳಿ ಜಯರಾಮ ಶೆಟ್ಟಿ, ಅಮಾಸೆಬೈಲು  ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕ ತಿಮ್ಮಪ್ಪ ಪೂಜಾರಿ, ರೈತ ಮುಖಂಡರಾದ ಸುಧಾಕರ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!