spot_img
Monday, March 16, 2026
spot_img

ಶೀಘ್ರದಲ್ಲೇ ಎರಡು ಸಾವಿರ ಬೋಧಕ, ಬೋಧಕೇತರ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಪ್ರಾರಂಭ : ಎಂ.ಸಿ. ಸುಧಾಕರ್

ಜನಪ್ರತಿನಿಧಿ (ಬೆಂಗಳೂರು) : ಶೀಘ್ರದಲ್ಲೇ ಎರಡು ಸಾವಿರ ಬೋಧಕ, ಬೋಧಕೇತರ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರು ಇಂದು(ಗುರುವಾರ) ವಿಧಾನಸಭೆಗೆ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆ ಕಾಂಗ್ರೆಸ್ ಶಾಸಕ ರಾಘವೇಂದ್ರ ಹಿಟ್ನಾಳ್ ಅವರ ಪ್ರಶ್ನೆಗೆ ಉತ್ತರಿಸಿದ ಉನ್ನತ ಶಿಕ್ಷಣ ಸಚಿವರು, ರಾಜ್ಯದ ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಗಳಲ್ಲಿ ಎರಡು ಸಾವಿರ ಬೋಧಕ ಮತ್ತು ಬೋಧಕೇತರ ಹುದ್ದೆಗಳ ಭರ್ತಿಗೆ ಬಜೆಟ್​ನಲ್ಲಿ ಅವಕಾಶ ನೀಡಲಾಗಿದ್ದು, ಶೀಘ್ರದಲ್ಲೇ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದರು.

ರಾಜ್ಯದ ಹಲವು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಹುದ್ದೆಗಳ ಕೊರತೆ ಇದೆ. ಈ ಹುದ್ದೆಗಳನ್ನು ಸದ್ಯದಲ್ಲೇ ಭರ್ತಿ ಮಾಡಲಾಗುವುದು. ಈ ಬಜೆಟ್​ನಲ್ಲಿ ಕಾಲೇಜು ಶಿಕ್ಷಣ ಇಲಾಖೆ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಒಟ್ಟು 2 ಸಾವಿರ ಹುದ್ದೆಗಳ ಭರ್ತಿಗೆ ಮುಖ್ಯಮಂತ್ರಿಗಳು ಅವಕಾಶ ಕಲ್ಪಿಸಿದ್ದಾರೆ ಎಂದು ತಿಳಿಸಿದರು.

ರಾಜ್ಯದಲ್ಲಿ ಒಟ್ಟು 18 ಹೊಸ ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳು ಮಂಜೂರಾಗಿದ್ದು. ಇದರಲ್ಲಿ 16 ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳ ಕಟ್ಟಡ ಕಾಮಗಾರಿ ಪೂರ್ಣಗೊಂಡು ಶೈಕ್ಷಣಿಕ ಚಟುವಟಿಕೆ ಪ್ರಾರಂಭಗೊಂಡಿದೆ ಎಂದರು.

ಅರಸೀಕೆರೆ ಮತ್ತು ದೇವದುರ್ಗ ಎಂಜಿನಿಯರಿಂಗ್ ಕಾಲೇಜುಗಳ ಕಟ್ಟಡ ನಿರ್ಮಾಣ ಪ್ರಗತಿಯಲ್ಲಿದೆ. ಕೊಪ್ಪಳದಲ್ಲಿ ಹೊಸ ಸರ್ಕಾರಿ ಎಂಜಿನಿಯರಿಂಗ್ ಕಾಲೇಜನ್ನು ಆರಂಭಿಸುವ ಪ್ರಸ್ತಾಪ ಇಲ್ಲ. ಪ್ರಸ್ತುತ ಕೊಪ್ಪಳ ಜಿಲ್ಲೆಯ ಯಲಬುರ್ಗ ತಾಲೂಕಿನ ತಳಕಲ್ ಗ್ರಾಮ ಹಾಗೂ ಗಂಗಾವತಿಯಲ್ಲಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳು ಕಾರ್ಯನಿರ್ವಹಿಸುತ್ತಿವೆ. ತಳಕಲ್​​ನಲ್ಲಿ ವಿಟಿಯುನೊಂದಿಗೆ ಒಪ್ಪಂದ ಮಾಡಿಕೊಂಡು ದೊಡ್ಡಮಟ್ಟದ ಕೌಶಲ್ಯಾಭಿವೃದ್ಧಿ ಕೇಂದ್ರವನ್ನು ಸ್ಥಾಪಿಸಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದರು.

ಹೊಸ ಎಂಜಿನಿಯರಿಂಗ್ ಹಾಗೂ ಪಾಲಿಟೆಕ್ನಿಕ್ ಸರ್ಕಾರಿ ಕಾಲೇಜುಗಳನ್ನು ಸ್ಥಾಪಿಸಲು 2024ರ ಜುಲೈನಲ್ಲಿ ಅಧಿಕಾರಿಗಳ ಸಮಿತಿ ರಚಿಸಲಾಗಿದೆ. ಈ ಸಮಿತಿಯ ವರದಿ ಆಧರಿಸಿ ಹೊಸ ಎಂಜಿನಿಯರಿಂಗ್ ಕಾಲೇಜುಗಳ ಆರಂಭದ ಬಗ್ಗೆ ತೀರ್ಮಾನ ಮಾಡುತ್ತೇನೆ ಎಂದು ತಿಳಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!