spot_img
Tuesday, March 17, 2026
spot_img

ಟ್ಯಾಂಕರ್ ನೀರಿನ ಗುಣಮಟ್ಟದ ಪರೀಕ್ಷೆ ಅಗತ್ಯ-ವಿಕಾಸ್ ಹೆಗ್ಡೆ

ಕುಂದಾಪುರ: ಟ್ಯಾಂಕರ್ ಮೂಲಕ ಸರಬರಾಜು ಮಾಡುವ ಕುಡಿಯುವ ನೀರಿನ ಮೂಲ, ಅದರ ಗುಣಮಟ್ಟ ಹಾಗೂ ಟ್ಯಾಂಕರ್ ಸ್ವಚ್ಛತೆ ಬಗ್ಗೆ ಜಿಲ್ಲಾಡಳಿತ ವಿಶೇಷ ಮುತುವರ್ಜಿ ವಹಿಸಬೇಕು ಎಂದು ಕುಂದಾಪುರ ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಕೆ. ವಿಕಾಸ್ ಹೆಗ್ಡೆ ತಿಳಿಸಿದ್ದಾರೆ.

ಈಗಾಗಲೇ ಬೇಸಗೆಯ ಬಿಸಿ ಏರುತ್ತಿದೆ. ಈ ಬಾರಿ ವಾಡಿಕೆಗಿಂತ ಹೆಚ್ಚಿನ ಮಳೆಯಾದರೂ ಸಹ ಬಿಸಿಲ ಬೇಗೆ ಹೆಚ್ಚಿರುವುದರಿಂದ ನೀರಿನ ಪ್ರಮಾಣ ಗಣನೀಯವಾಗಿ ಕುಸಿಯುವ ಸಾಧ್ಯತೆಯೂ ಹೆಚ್ಚಿದೆ. ನೀರಿನ ಪ್ರಮಾಣ ಕುಸಿಯದೆ ಇದ್ದರೂ ಸಹ ಹೆಚ್ಚಿನ ಗ್ರಾಮ ಪಂಚಾಯತ್ ಗಳಲ್ಲಿ ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮಾಡುವುದು ಒಂದು ವ್ಯವಸ್ಥಿತ ವ್ಯವಹಾರವಾಗಿ ಬಿಟ್ಟಿದೆ. ಇವತ್ತು ಕಲುಷಿತ ಆಹಾರ ಹಾಗೂ ಕಲುಷಿತ ನೀರಿನಿಂದ ಮನುಷ್ಯನ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿರುವ ಈ ಕಾಲಘಟ್ಟದಲ್ಲಿ ಸ್ಥಳೀಯ ಸಂಸ್ಥೆಗಳು ಟ್ಯಾಂಕರ್ ಮೂಲಕ ಕುಡಿಯುವ ನೀರನ್ನು ಪೂರೈಸುವಾಗ ಕುಡಿಯಲು ಯೋಗ್ಯವಲ್ಲದ ನೀರನ್ನು ಹೆಚ್ಚಿನ ಕಡೆ ಸರಬರಾಜು ಮಾಡುತ್ತಿರುರುವುದು ಕಂಡು ಬರುತ್ತಿದೆ. ಈ ಬಗ್ಗೆ ಜಿಲ್ಲಾಡಳಿತ ಸೂಕ್ತ ಮುತುವರ್ಜಿ ವಹಿಸಬೇಕು, ನೀರು ಯಾವ ಮೂಲದಿಂದ ಸರಬರಾಜು ಆಗುತ್ತಿದೆ, ಅದು ಉಪಯೋಗಿಸಲು ಯೋಗ್ಯವಾದುದಾ ಅಥವಾ ಇಲ್ಲವಾ ಎಂದು ಹಾಗೂ ನೀರು ಸರಬರಾಜು ಮಾಡುವ ಟ್ಯಾಂಕರ್ ಗಳ ಗುಣಮಟ್ಟವನ್ನೂ ಸಹ ಪರೀಕ್ಷೆ ಮಾಡಬೇಕು ಎಂದು ಕುಂದಾಪುರ ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಕೆ. ವಿಕಾಸ್ ಹೆಗ್ಡೆ ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!