spot_img
Tuesday, March 17, 2026
spot_img

ಬಸ್ರೂರು: ಖಿದ್ಮಾ ಫೌಂಡೇಶನ್ ವತಿಯಿಂದ ಸೌಹಾರ್ದ ಇಪ್ತಾರ್ ಕೂಟ

ಕುಂದಾಪುರ: ಖಿದ್ಧಾ ಫೌಂಡೇಶನ್ ಕುಂದಾಪುರ ತಾಲೂಕು ವತಿಯಿಂದ ಸೌಹಾರ್ದ ಇಫ್ತಾರ್ ಕೂಟವನ್ನು ಆನಗಳ್ಳಿ ಬಸ್ರೂರಿನ ಆದಿತ್ಯ ರೆಸಾರ್ಟ್‌ನಲ್ಲಿ ಆಯೋಜಿಸಲಾಗಿತ್ತು.

ಹೂಡೆಯ ಸಾಲಿಹಾತ್ ಸಮೂಹ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಇದ್ರೀಸ್ ಹೂಡೆ ದಿಕ್ಕೂಚಿ ಭಾಷಣ ಮಾಡಿದರು. ಮುಖ್ಯ ಅತಿಥಿಗಳಾಗಿ ಸಹಬಾಳ್ವೆ ಕುಂದಾಪುರದ ಅಧ್ಯಕ್ಷ ರಾಮಕೃಷ್ಣ ಹೇರ್ಳೆ, ರಾಜಕೀಯ ಮುಖಂಡ ದೇವಾನಂದ ಶೆಟ್ಟಿ, ಕುಂದಾಪುರ ನಗರ ಯೋಜನೆ ಪ್ರಾಧಿಕಾರದ ಅಧ್ಯಕ್ಷ ವಿನೋದ್ ಕ್ರಾಸ್ತಾ, ಬಸ್ರೂರು ಗ್ರಾ.ಪಂ ಅಧ್ಯಕ್ಷ ಬೇಳೂರು ದಿನಕರ ಶೆಟ್ಟಿ, ಬಸ್ರೂರು ನಿವೇದಿತಾ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ದಿನಕರ್ ಆರ್. ಶೆಟ್ಟಿ, ಕರ್ನಾಟಕ ದಸಂಸ ಅಂಬೇಡ್ಕರ್ ವಾದ ಕುಂದಾಪುರ ತಾಲೂಕಿನ ಸಂಚಾಲಕ ಕೆ.ಸಿ.ರಾಜು ಬೆಟ್ಟಿನಮನೆ ಮಾತನಾಡಿದರು.

ಖಿದ್ಮಾ ಫೌಂಡೇಶನ್ ತಾಲೂಕು ಕುಂದಾಪುರ ಮತ್ತು ಬೈಂದೂರು ಅಧ್ಯಕ್ಷ ಶೇಖ್ ಅಬು ಮುಹಮ್ಮದ್ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಕುಂದಾಪುರದ ಆದರ್ಶ ಆಸ್ಪತ್ರೆಯ ಡಾ.ಆದರ್ಶ ಹೆಬ್ಬಾರ್, ಖಿದ್ಮಾ ರಿಯಾದ್ ಪ್ರತಿನಿಧಿ ಶೇಖ್ ಹನೀಫ್, ಪ್ರಧಾನ ಕಾರ್ಯದರ್ಶಿ ಮಹಮ್ಮದ್ ರಫೀಕ್ ವಂಡ್ಸೆ ಮೊದಲಾದವರು ಉಪಸ್ಥಿತರಿದ್ದರು.

ಮೌಲಾನಾ ಝಮೀರ್ ಅಹ್ಮದ್ ರಶಾದಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಹ್ಮದ್ ಸವೂದ್ ಕಿರಾ‌ಅತ್ ಪಠಿಸಿದರು. ಮಾಜಿ ಅಧ್ಯಕ್ಷ ಶೇಖ್ ಅಸ್ಗರ್ ಅಲಿ ವಂದಿಸಿದರು. ಮುನೀರ್ ಅಹ್ಮದ್ ಕಂಡ್ಲೂರು ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!