spot_img
Tuesday, March 17, 2026
spot_img

‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024’ ವಿಧಾನಸಭೆಯಲ್ಲಿ ಅಂಗೀಕಾರ

ಜನಪ್ರತಿನಿಧಿ (ಬೆಂಗಳೂರು) : ಸಣ್ಣಪುಟ್ಟ ತಿದ್ದುಪಡಿಯೊಂದಿಗೆ ‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024’ ವಿಧಾನಸಭೆಯಲ್ಲಿ ಅಂಗೀಕರಿಸಲಾಯಿತು.

ಉಭಯ ಸದನಗಳಲ್ಲಿ ಅಂಗೀಕಾರ ರೂಪದಲ್ಲಿದ್ದ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024ಕ್ಕೆ ಸಣ್ಣ ತಿದ್ದುಪಡಿ ತಂದಿದ್ದು, ಅದನ್ನು ಪುನರ್ ಪರ್ಯಾಲೋಚಿಸಬೇಕೆಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ. ಕೆ ಶಿವಕುಮಾರ್ ಅವರು ವಿಧಾನಸಭೆಯಲ್ಲಿ ನಿನ್ನೆ(ಗುರುವಾರ) ಮಂಡಿಸಿದರು.

ಈ ಮಸೂದೆ ವಿಚಾರವಾಗಿ ನಡೆದ ಚರ್ಚೆಯ ವೇಳೆ ಅಶ್ವತ್ಥ್ ನಾರಾಯಣ ಅವರು ಕೈಗಾರಿಕೆಗಳ ಬಗ್ಗೆ ಪ್ರಸ್ತಾಪ ಮಾಡಿದ್ದರು. ನಾನು ಈ ವಿಚಾರವನ್ನು ಕೈಗಾರಿಕಾ ಸಚಿವರೊಂದಿಗೆ ಚರ್ಚೆ ಮಾಡಿದೆ. ಅಂತಿಮವಾಗಿ ಯೋಜನಾ ಪ್ರಾಧಿಕಾರ ಪೂರ್ವಾನುಮತಿ ಆಧಾರದ ಮೇಲೆ ಮಾಸ್ಟರ್ ಪ್ಲಾನ್ ಮಾಡಬೇಕು ಎಂದು ಸೇರಿಸಲಾಗಿದೆ.

ಇಲ್ಲಿ ಕೈಗಾರಿಕೆಗಳು ಬೆಂಗಳೂರು ನಗರದ ಒಳಗೆ ಇದ್ದರೂ ಸ್ಥಳೀಯ ಸಂಸ್ಥೆಗಳ ವಿಶ್ವಾಸದೊಂದಿಗೆ ಮಾಡಬೇಕು ಎಂದು ತಿದ್ದುಪಡಿ ಮಾಡಲಾಗಿದೆ. ಇನ್ನು ವಾರ್ಡ್ ಸಂಖ್ಯೆ ಆಧರಿಸಿ ನಾಮನಿರ್ದೇಶನ ವಿಚಾರವಾಗಿ ಏಳು ಸದಸ್ಯರನ್ನು ಲಾಟರಿ ಮೂಲಕ ಆಯ್ಕೆ ಮಾಡಲು ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದರು. ನಂತರ ವಿಧೇಯಕವನ್ನು ಅಂಗೀಕರಿಸಲಾಯಿತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!