spot_img
Wednesday, April 1, 2026
spot_img

ಕೊಲ್ಲೂರು: ಸೇವಾ ಮನೋಭಾವ ಇಂದಿನ ಅಗತ್ಯ-ಗುರುರಾಜ ಶೆಟ್ಟಿ ಗಂಟಿಹೊಳೆ

ಕೊಲ್ಲೂರು: ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಗಳಲ್ಲಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳ ವ್ಯಕ್ತಿತ್ವ ಸಕಾರಾತ್ಮಕ ಮತ್ತು ಸಮಗ್ರವಾಗಿ ರೂಪುಗೊಳ್ಳುತ್ತದೆ. ಶಿಸ್ತುಬದ್ಧವಾದ ಜೀವನ ಮತ್ತು ಸೇವಾ ಮನೋಭಾವನೆಯು ನಾಯಕತ್ವದ ಗುಣಗಳ ಬೆಳೆವಣಿಗೆಗೆ ಕಾರಣವಾಗುತ್ತದೆ. ಅಂತಹ ವ್ಯಕ್ತಿತ್ವ ವಿಕಸನದ ಹಾದಿಯೇ ರಾಷ್ಟ್ರೀಯ ಸೇವಾ ಯೋಜನೆಯ ಗುರಿ. ಸ್ವಾರ್ಥಗುಣ ತೊಲಗಿಸಿ ಸೇವಾ ಮನೋಭಾವ ಬೆಳೆಸಿಕೊಳ್ಳಬೇಕಾದದ್ದು ಇಂದಿನ ಅಗತ್ಯ ಎಂದು ಬೈಂದೂರು ವಿಧಾನಸಭಾ ಕ್ಷೇತ್ರ ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳೆ ಹೇಳಿದರು.

ಅವರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಶಂಕರನಾರಾಯಣದ ರಾಷ್ಟ್ರೀಯ ಸೇವಾ ಯೋಜನೆ ಘಟಕ 1 ಮತ್ತು 2ರ “ವಾರ್ಷಿಕ ವಿಶೇಷ ಶಿಬಿರ “ಭಾರತಕ್ಕಾಗಿ ಯುವಕರು-ಡಿಜಿಟಲ್ ಸಾಕ್ಷರತೆಗಾಗಿ ಯುವಕರು” ವನ್ನು ಶ್ರೀ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಪರಿಸರದಲ್ಲಿ ಉದ್ಘಾಟಿಸಿ ಮಾತನಾಡುತ್ತಿದ್ದರು.

ತಾವು ವಿದ್ಯಾರ್ಥಿಯಾಗಿ ಎನ್.ಸಿ.ಸಿ ಮತ್ತು ಎನ್ನೆಸ್ಸೆಸ್ ಶಿಬಿರಗಳಲ್ಲಿ ಭಾಗವಹಿಸಿದ ದಿನಗಳನ್ನು ಶಾಸಕರು ಮೆಲುಕು ಹಾಕಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯ ನಿತ್ಯಾನಂದ ಅಡಿಗರು ವಿದ್ಯಾರ್ಥಿಗಳು ಆತ್ಮವಿಶ್ವಾಸ ಮತ್ತು ಆಧ್ಯಾತ್ಮಿಕತೆಯ ಸಾತ್ವಿಕ ಗುಣ ಹೊಂದಬೇಕೆಂದು ತಿಳಿಸಿದರು.

ಭಟ್ಕಳ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ಸಹಾಯಕ ಪ್ರಾಧ್ಯಾಪಕಿ ಮತ್ತು ಪ್ರಶಸ್ತಿ ವಿಜೇತ ಎನ್ನೆಸ್ಸೆಸ್ ಯೋಜನಾಧಿಕಾರಿ ಶ್ರೀಮತಿ ವೈಶಾಲಿ ಅವರು ದಿಕ್ಸೂಚಿ ಭಾಷಣವನ್ನು ಮಾಡಿದರು. ದೇವಳದ ಆಡಳಿತಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ ಶಿಬಿರಕ್ಕೆ ಶುಭ ಕೋರಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ.ವೆಂಕಟರಾಮ್ ಭಟ್ ಪ್ರಸ್ತಾವನೆಗೈದು ವಿದ್ಯಾರ್ಥಿಗಳು ಸದಾ ಚಟುವಟಿಕೆಗಳಿಂದ ಕೂಡಿರಬೇಕಾದರೆ ರಾಷ್ಟ್ರೀಯ ಸೇವಾ ಯೋಜನೆಯಂತಹ ಕಾರ್ಯಕ್ರಮಗಳು ಅಗತ್ಯ ಎಂದು ತಿಳಿಸಿ ಸ್ವಾಗತಿಸಿದರು.

ಘಟಕ 2ರ ಯೋಜನಾಧಿಕಾರಿ ವಾಣಿಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕಿ ಕು.ಪ್ರಜ್ಞಾ, ಸಹ ಯೋಜನಾಧಿಕಾರಿ ವಾಣಿಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ಪ್ರವೀಣಾ ಮತ್ತು ಗ್ರಂಥಪಾಲಕಿ ಪೂರ್ಣಿಮ ಉಪಸ್ಥಿತರಿದ್ದರು. ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪಕ ಸಚಿನ್ ಎಸ್ ಕಾರ್ಯಕ್ರಮವನ್ನು ನಿರೂಪಿಸಿದರು. ಕಾಲೇಜಿನ ಎನ್ನೆಸ್ಸೆಸ್ ಘಟಕ 1ರ ಯೋಜನಾಧಿಕಾರಿ ಹಾಗೂ ನಿರ್ವಹಣಾ ಶಾಸ್ತ್ರದ ಸಹಾಯಕ ಪ್ರಾಧ್ಯಾಪಕ ರಾಮಚಂದ್ರ ಜಿ.ಎಸ್ ವಂದಿಸಿದರು. ಉದ್ಘಾಟನಾ ಸಮಾರಂಭದ ಬಳಿಕ ಶಿಬಿರಾರ್ಥಿಗಳು “ಪ್ಲಾಸ್ಟಿಕ್ ವಿರೋಧಿ ಮತ್ತು ಪರಿಸರ ಜಾಗೃತಿ” ಜಾಥಾ ನಡೆಸಿದರು.

 

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!