spot_img
Saturday, February 14, 2026
spot_img

ಬ್ರಹ್ಮಾವರ: ಅನ್ನದಾತರ ಅಹೋರಾತ್ರಿ ಸತ್ಯಾಗ್ರಹ 21ನೇ ದಿನಕ್ಕೆ

ಜನಪ್ರತಿನಿಧಿ ವಾರ್ತೆ] ಬ್ರಹ್ಮಾವರ: ಉಡುಪಿ ಜಿಲ್ಲಾ ರೈತ ಸಂಘದ ನೇತೃತ್ವದಲ್ಲಿ ಸಕ್ಕರೆ ಕಾರ್ಖಾನೆಯ ಬಳಿ ನಡೆಯುತ್ತಿರುವ ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ ಬಹುಕೋಟಿ ವಂಚನೆಯ ಮತ್ತು ಅದರ ತನಿಖೆಯಲ್ಲಿ ವಿಳಂಬವಾಗುತ್ತಿರುವುದರ ವಿರುದ್ಧ ಅನ್ನದಾತರ ನ್ಯಾಯಾಗ್ರಹ’ 21ನೇ ದಿನಕ್ಕೆ ಕಾಲಿಟ್ಟಿದೆ. ಇಂದು (ಶುಕ್ರವಾರ) ರೈತ ಮುಖಂಡರಾದ ವಸಂತ ಹೆಗ್ಡೆ ಬೈಂದೂರು, ಶರತ್ ಶೆಟ್ಟಿ ಬಾಳಿಕೆರೆ, ಸುರೇಶ ಶೆಟ್ಟಿ ಹೈಕಾಡಿ, ದಿನೇಶ ಹೆಗ್ಡೆ ಮೊಳಹಳ್ಳಿ, ಬೈಂದೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅರವಿಂದ ಪೂಜಾರಿ ನೇತೃತ್ವದಲ್ಲಿ ಸತ್ಯಾಗ್ರಹ ನಡೆಯಿತು.

ವಿವಿಧ ವಲಯದ ರೈತ ಸಂಘದ ಪದಾಧಿಕಾರಿಗಳು ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು. ರೈತ ಮುಖಂಡ ಕೆದೂರು ಸದಾನಂದ ಶೆಟ್ಟಿ ಘಟನೆಯನ್ನು ವಿವರಿಸಿದರು. ರೈತ ಸಂಘದ ಅಧ್ಯಕ್ಷರಾದ ಕೆ.ಪ್ರತಾಪಚಂದ್ರ ಶೆಟ್ಟಿ ಸತ್ಯಾಗ್ರಹಕ್ಕೆ ಆಗಮಿಸಿದವರನ್ನು ಆತ್ಮೀಯವಾಗಿ ಬರಮಾಡಿಕೊಂಡರು.

ಚೋರಾಡಿ ಅಶೋಕ ಕುಮಾರ್ ಶೆಟ್ಟಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸತೀಶ್ ಕಿಣಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!