spot_img
Wednesday, April 1, 2026
spot_img

ಬ್ರಹ್ಮಾವರ: 22ನೇ ದಿನಕ್ಕೆ ಕಾಲಿಟ್ಟ ಅನ್ನದಾತರ ಅಹೋರಾತ್ರಿ ಸತ್ಯಾಗ್ರಹ

ಜನಪ್ರತಿನಿಧಿ ವಾರ್ತೆ] ಬ್ರಹ್ಮಾವರ: ಉಡುಪಿ ಜಿಲ್ಲಾ ರೈತ ಸಂಘದ ನೇತೃತ್ವದಲ್ಲಿ ಸಕ್ಕರೆ ಕಾರ್ಖಾನೆಯ ಬಳಿ ನಡೆಯುತ್ತಿರುವ ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ ಬಹುಕೋಟಿ ವಂಚನೆಯ ಮತ್ತು ಅದರ ತನಿಖೆಯಲ್ಲಿ ವಿಳಂಬವಾಗುತ್ತಿರುವುದರ ವಿರುದ್ಧ ಅನ್ನದಾತರ ನ್ಯಾಯಾಗ್ರಹ’ 22ನೇ ದಿನಕ್ಕೆ ಕಾಲಿಟ್ಟಿದೆ.

ಈ ದಿನದ ಸತ್ಯಾಗ್ರಹದ ನೇತೃತ್ವವನ್ನು ಪ್ರಾಥಮಿಕ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕಿನ ಅಧ್ಯಕ್ಷರಾದ ಮಲ್ಯಾಡಿ ಶಿವರಾಮ ಶೆಟ್ಟಿ, ಕುಂದಾಪುರ ತಾ. ಕೃಷಿ ಉತ್ಪನ್ನ ಮಾರಾಟ ಸಂಘದ ಅಧ್ಯಕ್ಷರಾದ ಹರಿಪ್ರಸಾದ್ ಶೆಟ್ಟಿ, ಮೊಳಹಳ್ಳಿ ಗ್ರಾಮ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚಂದ್ರಶೇಖರ ಶೆಟ್ಟಿ ಮರಾತ್ತೂರು, ಜಿಲ್ಲಾ ಕೆಡಿಪಿ ಸದಸ್ಯರಾದ ಇಚ್ಚಿತಾರ್ಥ ಶೆಟ್ಟಿ, ವಕೀಲರಾದ ಉಮೇಶ ಶೆಟ್ಟಿ ಶಾನ್ಕಟ್ ಇವರ ನೇತೃತ್ವದ ತಂಡದ ವತಿಯಿಂದ ಜರಗಿತು.

ರೈತ ಮುಖಂಡರಾದ ಕೆದೂರು ಸದಾನಂದ ಶೆಟ್ಟಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಭುಜಂಗ ಶೆಟ್ಟಿ. ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷರಾದ ನಿತ್ಯಾನಂದ ಶೆಟ್ಟಿ, ರೈತ ಸಂಘದ ಸಿದ್ಧಾಪುರ ವಲಯಾಧ್ಯಕ್ಷರಾದ ಸಂಪಿಗೇಡಿ ಸಂಜೀವ ಶೆಟ್ಟಿ, ನಿವೃತ್ತ ಶಿಕ್ಷಕರಾದ ಸಂಪತ್ ಕುಮಾರ್ ಶೆಟ್ಟಿ, ಕೆಡಿಪಿ ಸದಸ್ಯರಾದ ಪ್ರಸನ್ನ ಕುಮಾರ್ ಶೆಟ್ಟಿ, ಕೃಷ್ಣದೇವ ಕಾರಂತ ಕೋಣಿ, ನಿವೃತ್ತ ಶಿಕ್ಷಕ ಸದಾರಾಮ ಶೆಟ್ಟಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ದಿನಕರ ಹೇರೂರು, , ಬಿ.ಸತೀಶ ಕಿಣಿ, ರಮೇಶ ಶೆಟ್ಟಿ, ರಾಜೀವ ಶೆಟ್ಟಿ ಶಾಡಿಗುಂಡಿ ಮೊದಲಾದವರು ಉಪಸ್ಥಿತರಿದ್ದರು.

ರೈತ ಸಂಘದ ಅಧ್ಯಕ್ಷರಾದ ಕೆ.ಪ್ರತಾಪಚಂದ್ರ ಶೆಟ್ಟಿ ಸತ್ಯಾಗ್ರಹಕ್ಕೆ ಆಗಮಿಸಿದವರನ್ನು ಆತ್ಮೀಯವಾಗಿ ಬರಮಾಡಿಕೊಂಡು, ಸತ್ಯಾಗ್ರಹವನ್ನು ಉದ್ದೇಶಿಸಿ ಮಾತನಾಡಿದರು.

ಕಳೆದ ಫೆಬ್ರವರಿ 22ರಂದು ಅನ್ನದಾತರ ಅಹೋರಾತ್ರಿ ಸತ್ಯಾಗ್ರಹ ಆರಂಭವಾಗಿತ್ತು. ಸರಕಾರದಿಂದ ಸೂಕ್ತ ಸ್ಪಂದನೆ ದೊರೆಯದ ಕಾರಣ ಸತ್ಯಾಗ್ರಹ ಮುಂದುವರಿಯುತ್ತಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!