spot_img
Thursday, April 2, 2026
spot_img

ಸಿ‌ಎ ಶಾಂತಾರಾಮ್ ಶೆಟ್ಟಿ ಅವರಿಗೆ ‘ದುಬೈ ಇಂಡಿಯಾ ಇಂಟರ್ ನ್ಯಾಷನಲ್ ಐಕಾನಿಕ್ ಅವಾರ್ಡ್-2025’

ಕುಂದಾಪುರ: ಏಷ್ಯಾ ನೆಟ್ ಸುವರ್ಣನ್ಯೂಸ್ ಹಾಗೂ ಕನ್ನಡಪ್ರಭ ಸಂಸ್ಥೆಯು ನೀಡುವ ‘ದುಬೈ ಇಂಡಿಯಾ ಇಂಟರ್ ನ್ಯಾಷನಲ್ ಐಕಾನಿಕ್ ಅವಾರ್ಡ್-2025′ ಪ್ರಶಸ್ತಿಗೆ ಕರಾವಳಿಯ ಹೆಸರಾಂತ ಲೆಕ್ಕ ಪರಿಶೋಧಕ ಮತ್ತು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಛೇರ್ಮನ್, ನಿಯೋಜಿತ ರೋಟರಿ ಅಸಿಸ್ಟೆಂಟ್ ಗವರ್ನರ್ ಸಿ‌ಎ ಶಾಂತಾರಾಮ್ ಶೆಟ್ಟಿ ಅವರಿಗೆ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಇವರು ಮೂಲತಃ ಕರ್ಕುಂಜೆ ಗ್ರಾಮದ ನೇರಳಕಟ್ಟೆಯವರು. ಇವರು ಪ್ರಸ್ತುತ ಮಂಗಳೂರಿನ ಬಿಜೈನಲ್ಲಿ ಚಾರ್ಟೆಡ್ ಆಕೌಂಟೆಂಟ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ದಕ್ಷಿಣ ಕನ್ನಡ ಜಿಲ್ಲಾ ಶಾಖೆಯಲ್ಲಿ ಕಳೆದ 9 ವರ್ಷಗಳಿಂದ ಜನಸಾಮಾನ್ಯರಿಗೆ ಮಾನವೀಯ ಮತ್ತು ಸಾಮಾಜಿಕ ಸೇವೆಯನ್ನು ಒದಗಿಸುವ ಮೂಲಕ ದೇಶದಲ್ಲೇ ಒಂದು ಉತ್ತಮ ಶಾಖೆಯಾಗಿ ಹೊರಹೊಮ್ಮಿದೆ. ಇವರ ಸಮಾಜಮುಖಿ ಕಾರ್ಯಗಳನ್ನು ಗಮನಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ. ಈ ಪ್ರಶಸ್ತಿ ಪ್ರದಾನವು ಮಾರ್ಚ್ ೧೮ ರಂದು ದುಬೈಯಲ್ಲಿ ನಡೆಯಲಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!