spot_img
Friday, April 3, 2026
spot_img

ಬ್ರಹ್ಮಾವರ: 25ನೇ ದಿನಕ್ಕೆ ಕಾಲಿಟ್ಟ ಅನ್ನದಾತರ ಅಹೋರಾತ್ರಿ ಸತ್ಯಾಗ್ರಹ

ಜನಪ್ರತಿನಿಧಿ ವಾರ್ತೆ] ಬ್ರಹ್ಮಾವರ: ಉಡುಪಿ ಜಿಲ್ಲಾ ರೈತ ಸಂಘದ ನೇತೃತ್ವದಲ್ಲಿ ಸಕ್ಕರೆ ಕಾರ್ಖಾನೆಯ ಬಳಿ ನಡೆಯುತ್ತಿರುವ ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ ಬಹುಕೋಟಿ ವಂಚನೆಯ ಮತ್ತು ಅದರ ತನಿಖೆಯಲ್ಲಿ ವಿಳಂಬವಾಗುತ್ತಿರುವುದರ ವಿರುದ್ಧ ಅನ್ನದಾತರ ನ್ಯಾಯಾಗ್ರಹ’ 25ನೇ ದಿನಕ್ಕೆ ಕಾಲಿಟ್ಟಿದೆ.

ಈ ದಿನದ ಸತ್ಯಾಗ್ರಹದಲ್ಲಿ ಬಂಟರ ಯಾನೆ ನಾಡವರ ಸಂಘ ಮಾತೃ ಸಂಘ ಕುಂದಾಪುರ ಶಾಖೆಯ ಪ್ರತಿನಿಧಿಗಳು ಭಾಗವಹಿಸಿದ್ದರು. ಬಂಟರ ಯಾನೆ ನಾಡವರ ಮಾತೃ ಸಂಘ ಕುಂದಾಪುರ ಸಮಿತಿ ಸಂಚಾಲಕರಾದ ಸಂಪತ್ ಕುಮಾರ್ ಶೆಟ್ಟಿ ಕಾವ್ರಾಡಿ, ನಿರ್ದೇಶಕರಾದ ಚಿತ್ತರಂಜನ್ ಹೆಗ್ಡೆ, ಬುದ್ಧರಾಜ ಶೆಟ್ಟಿ ಕೋಟೇಶ್ವರ, ಅಂಪಾರು ಕಿರಣ್ ಹೆಗ್ಡೆ, ಸುಧಾಕರ ಶೆಟ್ಟಿ ಆವರ್ಸೆ, ಚಿತ್ತೂರು ಪ್ರಕಾಶ್ಚಂದ್ರ ಶೆಟ್ಟಿ, ಜಿ.ಪಂ.ಮಾಜಿ ಸದಸ್ಯೆ ರೇವತಿ ಶೆಟ್ಟಿ, ವಾಣಿ ಶೆಟ್ಟಿ ಮೊಳಹಳ್ಳಿ, ಸಂಪಿಗೇಡಿ ಸಂಜೀವ ಶೆಟ್ಟಿ, ಸೀತಾರಾಮ ಶೆಟ್ಟಿ ಕೆದೂರು, ಮಾರ್ಕೋಡು ಗೋಪಾಲಕೃಷ್ಣ ಶೆಟ್ಟಿ, ರಮೇಶ ಶೆಟ್ಟಿ ಗುಲ್ವಾಡಿ ಭಾಗವಹಿಸಿದರು.

ಈ ಸಂದರ್ಭದಲ್ಲಿ ರೈತ ಸಂಘದ ವಂಡ್ಸೆ ವಲಯಾಧ್ಯಕ್ಷ ಉದಯ ಕುಮಾರ್ ಶೆಟ್ಟಿ ಅಡಿಕೆಕೊಡ್ಲು, ತಾ.ಪಂ ಮಾಜಿ ಸದಸ್ಯ ಉದಯ ಜಿ.ಪೂಜಾರಿ, ವಂಡ್ಸೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಗೋವರ್ದನ್ ಜೋಗಿ, ವಾಸುದೇವ ಯಡಿಯಾಳ, ಸುದೇಶ ಶೆಟ್ಟಿ, ಸುರೇಶ ಶೆಟ್ಟಿ ಆರ್ಡಿ ಮೊದಲಾದವರು ಭಾಗವಹಿಸಿದ್ದರು.

ರೈತ ಸಂಘದ ಅಧ್ಯಕ್ಷರಾದ ಕೆ.ಪ್ರತಾಪಚಂದ್ರ ಶೆಟ್ಟಿ ಸತ್ಯಾಗ್ರಹಕ್ಕೆ ಆಗಮಿಸಿದವರನ್ನು ಆತ್ಮೀಯವಾಗಿ ಬರಮಾಡಿಕೊಂಡು, ಸತ್ಯಾಗ್ರಹವನ್ನು ಉದ್ದೇಶಿಸಿ ಮಾತನಾಡಿದರು.
ರೈತ ಮುಖಂಡರಾದ ಕೆದೂರು ಸದಾನಂದ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಬೆಳ್ವೆ ಸತೀಶ್ ಕಿಣಿ ವಿವರ ನೀಡಿದರು.

ಕಳೆದ ಫೆಬ್ರವರಿ ೨೨ರಂದು ಅನ್ನದಾತರ ಅಹೋರಾತ್ರಿ ಸತ್ಯಾಗ್ರಹ ಆರಂಭವಾಗಿತ್ತು. ಸರಕಾರದಿಂದ ಸೂಕ್ತ ಸ್ಪಂದನೆ ದೊರೆಯದ ಕಾರಣ ಸತ್ಯಾಗ್ರಹ ಮುಂದುವರಿಯುತ್ತಿದೆ.

 

ಕಳೆದ ಫೆಬ್ರವರಿ 22ರಂದು ಅನ್ನದಾತರ ಅಹೋರಾತ್ರಿ ಸತ್ಯಾಗ್ರಹ ಆರಂಭವಾಗಿತ್ತು. ಸರಕಾರದಿಂದ ಸೂಕ್ತ ಸ್ಪಂದನೆ ದೊರೆಯದ ಕಾರಣ ಸತ್ಯಾಗ್ರಹ ಮುಂದುವರಿಯುತ್ತಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!