spot_img
Friday, April 3, 2026
spot_img

ಕುಂದಾಪುರ: ಹಂಚು ಉದ್ಯಮದ ಉಳಿವಿಗಾಗಿ ಬೀದಿಗಿಳಿದ ಕಾರ್ಮಿಕರು : ಸರಕಾರದ ನೀತಿಗೆ ಆಕ್ರೋಶ

ಜನಪ್ರತಿನಿಧಿ ವಾರ್ತೆ] ಕುಂದಾಪುರ: ಹಂಚು ಕಾರ್ಖಾನೆಗಳು ರಾಜ್ಯದ ಬೆನ್ನೆಲುಬು ಮತ್ತು ಒಂದೂವರೆ ಶತಮಾನಗಳಿಂದ ರಾಜ್ಯದ ಮತ್ತು ದೇಶದ ಬೊಕ್ಕಸಕ್ಕೆ ಕೊಡುಗೆ ನೀಡಿವೆ. ಲಕ್ಷಾಂತರ ಕಾರ್ಮಿಕರಿಗೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಉದ್ಯೋಗವನ್ನು ಒದಗಿಸಿವೆ. ಈ ಸಮಸ್ಯೆಯನ್ನು ತಕ್ಷಣವೇ ಪರಿಹರಿಸದಿದ್ದರೆ, ಇದು ಉಡುಪಿ ಜಿಲ್ಲೆಯ ಸ್ಥಳೀಯ ಜೇಡಿ ಮಣ್ಣಿನ ಹಂಚು ಉದ್ಯಮವನ್ನು ಸಂಪೂರ್ಣವಾಗಿ ಮುಚ್ಚಲು ಕಾರಣವಾಗುತ್ತದೆ ಮತ್ತು ಈ ಕಾರ್ಖಾನೆಗಳಲ್ಲಿ ನೇರವಾಗಿ ಕೆಲಸ ಮಾಡುವ ಸಾವಿರಾರು ಕಾರ್ಮಿಕರು ತಮ್ಮ ಉದ್ಯೋಗವನ್ನು ಕಳೆದುಕೊಳ್ಳಲು ಕಾರಣವಾಗುತ್ತದೆ ಮತ್ತು ಬದಲಿ ಉದ್ಯೋಗದ ಅವಕಾಶಗಳು ಇಲ್ಲದ ಕಾರಣ ಕಾರ್ಮಿಕರ ಜೀವನೋಪಾಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಆದ್ದರಿಂದ ಸರಕಾರ ಕೂಡಲೇ ಪರಿಹಾರವನ್ನು ಸೂಚಿಸಬೇಕು ಎಂದು ಉಡುಪಿ ಜಿಲ್ಲಾ ಹಂಚು ಕಾರ್ಮಿಕರ ಸಂಘದ ಅಧ್ಯಕ್ಷ ವಿ ನರಸಿಂಹ ಹೇಳಿದರು.

ಅವರು ಉಡುಪಿ ಜಿಲ್ಲಾ ಹಂಚು ಕಾರ್ಮಿಕರ ಸಂಘ (ಸಿ.ಐ.ಟಿ.ಯು) ವತಿಯಿಂದ ಕುಂದಾಪುರದಲ್ಲಿ ನಡೆದ ಹಂಚು ಉದ್ಯಮದ ಉಳಿವಿಗಾಗಿ ಬೃಹತ್ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು.

ಈ ಸಮಸ್ಯೆಯನ್ನು ತಕ್ಷಣವೇ ಪರಿಹರಿಸದಿದ್ದರೆ, ಇದು ಉಡುಪಿ ಜಿಲ್ಲೆಯ ಸ್ಥಳೀಯ ಜೇಡಿ ಮಣ್ಣಿನ ಹಂಚು ಉದ್ಯಮವನ್ನು ಸಂಪೂರ್ಣವಾಗಿ ಮುಚ್ಚಲು ಕಾರಣವಾಗುತ್ತದೆ ಮತ್ತು ಈ ಕಾರ್ಖಾನೆಗಳಲ್ಲಿ ನೇರವಾಗಿ ಕೆಲಸ ಮಾಡುವ ಸಾವಿರಾರು ಕಾರ್ಮಿಕರು ತಮ್ಮ ಉದ್ಯೋಗವನ್ನು ಕಳೆದುಕೊಳ್ಳಲು ಕಾರಣವಾಗುತ್ತದೆ ಮತ್ತು ಬದಲಿ ಉದ್ಯೋಗದ ಅವಕಾಶಗಳು ಇಲ್ಲದ ಕಾರಣ ಕಾರ್ಮಿಕರ ಜೀವನೋಪಾಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದರು.

ಸಿ‌ಐಟಿಯು ಜಿಲ್ಲಾ ಅಧ್ಯಕ್ಷ ಕೆ ಶಂಕರ್ ಸಿ‌ಐಟಿಯು ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ ಮಾತನಾಡಿ ಹಂಚು ಉದ್ಯಮಕ್ಕೆ ಸಮಸ್ಯೆಯಾಗಿರುವ ಖಾಸಗಿ ಭೂಮಿಯಲ್ಲಿ ಆವೆ ಮಣ್ಣು ತಗೆಯಲು ಅನುಮತಿ ನೀಡಬೇಕು, ಸರಕಾರ ಈ ಬಗ್ಗೆ ಕೂಡಲೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ ಅವರು ಕಾರ್ಮಿಕರಿಗೆ ತೊಡಕ್ಕುಂಟು ಮಾಡುತ್ತಿರುವ ಕಾಯ್ದೆಗಳ ವಿರುದ್ಧ, ರೈತ ವಿರೋಧಿ ಸರಕಾರ ನಿಲುವನ್ನು ವಿರೋಧಿಸಿ ಮೇ ೨೦ರಂದು ದೇಶದಾದ್ಯಂತ ಕಾರ್ಮಿಕರು ಮುಷ್ಕರ ನಡೆಸಲಿದ್ದಾರೆ ಎಂದರು.

ಪ್ರತಿಭಟನೆಯಲ್ಲಿ ಪ್ರಧಾನ ಕಾರ್ಯದರ್ಶಿ ಎಚ್ ನರಸಿಂಹ, ಸಿ‌ಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ, ಉಪಾಧ್ಯಕ್ಷ ಬಾಲಕ್ರಷ್ಣ ಶೆಟ್ಟಿ, ಸಿ‌ಐಟಿಯು ತಾಲೂಕು ಸಂಚಾಲಕ ಚಂದ್ರಶೇಖರ ವಿ, ಸುರೇಂದ್ರ ಎಚ್.ಜಿ ಡಿ ಪಂಜು ಪೂಜಾರಿ, ಪ್ರಕಾಶ್ ಕೋಣಿ, ಚಂದ್ರ ಗ್ರೀನ್ ಲ್ಯಾಂಡ್ ಮೊದಲಾದವರಿದ್ದರು.

ಪ್ರತಿಭಟನಾ ಮೆರವಣಿಗೆ ಶಾಸ್ತ್ರೀ ವೃತ್ತದಿಂದ ಹೊರಟು ಕುಂದಾಪುರದ ಹೊಸ ಬಸ್ ನಿಲ್ದಾಣದಿಂದ ಮರಳಿ ಶಾಸ್ತ್ರೀ ಸರ್ಕಲ್ ಗೆ ಮರಳಿತು. ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!