spot_img
Wednesday, April 1, 2026
spot_img

ಬಿ.ಬಿ .ಹೆಗ್ಡೆ ಕಾಲೇಜಿನಲ್ಲಿ CA, CS, CMA ಆಕಾಂಕ್ಷಿ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಮತ್ತು ವಿದ್ಯಾರ್ಥಿ ವೇತನ ಪಡೆಯುವ ಸುವರ್ಣವಕಾಶ

ಕುಂದಾಪುರ: ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಶೈಕ್ಷಣಿಕ ವರ್ಷ 2025 – 26ನೇ ಸಾಲಿನಲ್ಲಿ ಬಿ.ಕಾಂ. ಪದವಿಯ ಜೊತೆಗೆ CA,CS,CMA ಪ್ರೊಫೆಷನಲ್ ಕೋರ್ಸ್ ಗಳನ್ನು ಆಯ್ಕೆ ಮಾಡಿಕೊಳ್ಳುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಹಾಗೂ ವಿದ್ಯಾರ್ಥಿ ವೇತನ ಪಡೆಯಲು ದಿನಾಂಕ – 26.3.2025 ರಂದು ಪರೀಕ್ಷೆ ಆಯೋಜಿಸಲಾಗಿದೆ.

ಕಾಲೇಜಿನ ವಾಣಿಜ್ಯ ವಿಭಾಗ ಪ್ರತಿಷ್ಠಿತ ವಿ ರೀಚ್ ಸಂಸ್ಥೆ ಜೊತೆ ಒಡಂಬಡಿಕೆ ಮಾಡಿಕೊಂಡಿದೆ. ಬಿ.ಕಾಂ. ಪದವಿಯ ಜೊತೆ ಪ್ರೊಫೆಷನಲ್ ಕೋರ್ಸ್ ಗಳನ್ನು ಕಾಲೇಜಿನ ಕ್ಯಾಂಪಸ್ ನಲ್ಲಿ ಓದುವ ಸುವರ್ಣವಕಾಶ ವಿದ್ಯಾರ್ಥಿಗಳಿಗೆ ಲಭ್ಯವಿದೆ.

ವೀ ರೀಚ್ ಸಂಸ್ಥೆಯ ಪಠ್ಯ ಪ್ರವಚನ, ಮಧ್ಯಂತರ ಮಾದರಿ ಪರೀಕ್ಷೆ, ನುರಿತ ತರಬೇತುದಾರರಿಂದ ತರಬೇತಿ ಮತ್ತು ಮಾರ್ಗದರ್ಶನ ಪಡೆದ ವಿದ್ಯಾರ್ಥಿಗಳು ಈಗಾಗಲೇ ಉತ್ಕೃಷ್ಟ ಸಾಧನೆಗೈದಿದ್ದಾರೆ.

CA, CS ಮತ್ತು CMA ಪರೀಕ್ಷೆಗಳಲ್ಲಿ ಉತ್ತೀರ್ಣ ಹೊಂದುವುದರ ಜೊತೆಗೆ ಫೌಂಡೇಶನ್ ಹಾಗೂ ಗ್ರೂಪ್-1, ಗ್ರೂಪ್ -2 ಪರೀಕ್ಷೆಗಳಲ್ಲಿ ಅತಿ ಹೆಚ್ಚು ವಿದ್ಯಾರ್ಥಿಗಳು ತೇರ್ಗಡೆ ಹೊಂದುವ ಮೂಲಕ ಕನ್ನಡ ಕರಾವಳಿ ಭಾಗದಲ್ಲಿ ಶ್ರೇಷ್ಠ ಫಲಿತಾಂಶದ ದಾಖಲಿಸಿದ ಹೆಗ್ಗಳಿಕೆ ಕಾಲೇಜಿಗೆ ಇದೆ.

ಈಗಾಗಲೇ ಪ್ರವೇಶಾತಿ ಪ್ರಕ್ರಿಯೆ ಆರಂಭಗೊಂಡಿದ್ದು, ಮಾರ್ಚ್ 26 ಬುಧವಾರದಂದು ಕಾಲೇಜಿನಲ್ಲಿ ನಡೆಯುವ ಪರೀಕ್ಷೆ ಬರೆಯಲು ಆಸಕ್ತಿ ಇರುವ ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ 9448887390 ,9741789458, 7483450340 ಸಂಪರ್ಕಿಸಬಹುದು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಈ ಪ್ರಯೋಜನವನ್ನು ಉಪಯೋಗಿಸಿಕೊಳ್ಳಿ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಕೆ .ಉಮೇಶ ಶೆಟ್ಟಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!