spot_img
Wednesday, April 1, 2026
spot_img

“ಗ್ರೇಟರ್ ಬೆಂಗಳೂರು ಮಸೂದೆಗೆ ಅಂಕಿತ ಹಾಕಬೇಡಿ” : ಬಿಜೆಪಿ ನಾಯಕರ ನಿಯೋಗದಿಂದ ರಾಜ್ಯಪಾಲರಿಗೆ ಮನವಿ

ಜನಪ್ರತಿನಿಧಿ (ಬೆಂಗಳೂರು) : ಬಿಜೆಪಿ ನಾಯಕರ ನಿಯೋಗವು ಇಂದು(ಬುಧವಾರ) ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ, “ಗ್ರೇಟರ್ ಬೆಂಗಳೂರು ಮಸೂದೆಗೆ ಅಂಕಿತ ಹಾಕಬೇಡಿ” ಎಂದು ಮನವಿ ಮಾಡಿದೆ.

ಪ್ರಸ್ತಾವಿತ ಮಸೂದೆಯು “ಅಸಂವಿಧಾನಿಕ”ವಾಗಿದ್ದು, ನಗರ ಆಡಳಿತದ ಪ್ರಜಾಪ್ರಭುತ್ವ ರಚನೆಯನ್ನು ರಕ್ಷಿಸಲು, ಬೆಂಗಳೂರಿನ ಸಾಂಸ್ಕೃತಿಕ ಗುರುತನ್ನು ಕಾಪಾಡಿಕೊಳ್ಳಲು ಮತ್ತು ದಕ್ಷ ನಗರ ಆಡಳಿತವನ್ನು ಖಚಿತಪಡಿಸಿಕೊಳ್ಳಲು ರಾಜ್ಯಪಾಲರು, ಗ್ರೇಟರ್ ಬೆಂಗಳೂರು ಮಸೂದೆ ತಿರಸ್ಕರಿಸಬೇಕು ಎಂದು ಬಿಜೆಪಿ ಕೇಳಿಕೊಂಡಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯನ್ನು ಏಳು ಮಹಾನಗರ ಪಾಲಿಕೆಗಳಾಗಿ ವಿಭಜಿಸುವ ಗ್ರೇಟರ್ ಬೆಂಗಳೂರು ಮಸೂದೆಯನ್ನು ಇತ್ತೀಚೆಗೆ ರಾಜ್ಯ ವಿಧಾನಮಂಡಲದ ಎರಡೂ ಸದನಗಳಲ್ಲಿ ಅಂಗೀಕರಿಸಿಲಾಗಿದೆ.

ವಿಧಾನಮಂಡಲದ ಎರಡೂ ಸದನಗಳಲ್ಲಿ ಮಸೂದೆ ಅಂಗೀಕಾರವಾಗಿದ್ದು, ಈಗ ಅದನ್ನು ರಾಜ್ಯಪಾಲರ ಒಪ್ಪಿಗೆಗಾಗಿ ಕಳುಹಿಸಲಾಗುತ್ತಿದೆ.

ರಾಜ್ಯಪಾಲರ ಭೇಟಿ ಬಳಿಕ ಮಾತನಾಡಿದ ಪ್ರತಿಪಕ್ಷ ನಾಯಕ ಆರ್.ಅಶೋಕ್, ನಿಯಮಾನುಸಾರವಿಲ್ಲದೆ ಅಂಗೀಕರಿಸಿರುವ ಗ್ರೇಟರ್ ಬೆಂಗಳೂರು ಮಸೂದೆ ಪರಿಷ್ಕರಿಸುವಂತೆ ಮನವಿ ಮಾಡಿದ್ದೇವೆ. ಬೆಂಗಳೂರನ್ನು ಒಡೆಯಬಾರದು. ಈ ವಿಚಾರವನ್ನು ರಾಜ್ಯಪಾಲರಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ರಾಜ್ಯಪಾಲರು ಸಹ ನಮ್ಮ ಮನವಿಗೆ ಸ್ಪಂದಿಸಿದ್ದಾರೆ. ಕೀಳು ಬುದ್ಧಿಯ ಕಾಂಗ್ರೆಸ್‌ಗೆ ಪಾಠ ಕಲಿಸುತ್ತೇವೆ ಎಂದು ಕಿಡಿಕಾರಿದರು.

ತೆರಿಗೆದಾರರ ಮೇಲೆ ಹೊರೆಯಾಗುವ ಮತ್ತು ಬೆಂಗಳೂರಿನ ಬೆಳವಣಿಗೆಗೆ ಅಡ್ಡಿಯಾಗುವ ಅನಗತ್ಯ ಮಹಾನಗರಗಳ ಮತ್ತು ಸಮಿತಿಗಳ ರಚನೆಯನ್ನು ನಿಲ್ಲಿಸುವಂತೆ ಸರ್ಕಾರವನ್ನು ವಿನಂತಿಸುತ್ತಾ, ಆಡಳಿತ ಸುಧಾರಣೆಗಳು ಕನ್ನಡಿಗ ಗುರುತು, ಸಂಪ್ರದಾಯಗಳು ಮತ್ತು ಭಾಷಾ ಪ್ರಾತಿನಿಧ್ಯವನ್ನು ದುರ್ಬಲಗೊಳಿಸದಂತೆ ಮತ್ತು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಆರ್ಥಿಕ ಕೇಂದ್ರೀಕರಣವನ್ನು ತಡೆಗಟ್ಟಿ ನಗರದ ಅಭಿವೃದ್ಧಿಗೆ ನ್ಯಾಯಯುತ ಮತ್ತು ಪಾರದರ್ಶಕ ನಿಧಿಯ ವಿತರಣೆಯನ್ನು ಖಚಿತಪಡಿಸಿಕೊಳ್ಳುವಂತೆ ರಾಜ್ಯಪಾಲರಿಗೆ ಮನವಿ ಮಾಡಿದ್ದೇವೆ ಎಂದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!