spot_img
Friday, April 25, 2025
spot_img

ವಿದ್ಯಾರ್ಥಿಗಳಿಗೆ ವ್ಯವಹಾರ ಜ್ಞಾನ ಅಗತ್ಯ-ವಸಂತಿ ಎಮ್.ಶೆಟ್ಟಿ

ಕುಂದಾಪುರ: ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗವು ಆಯೋಜಿಸಿರುವ “ವೀ-ಗ್ರೋ ಬ್ಯುಸಿನೆಸ್ ಡೇ” ಇದರ ಎರಡನೇ ಹಂತವಾದ ವ್ಯವಹಾರ ಮೇಳವನ್ನು ಮುಖ್ಯ ಅತಿಥಿಗಳಾದ ಮಹಿಳಾ ಉದ್ಯಮಿ ಹುಣ್ಸೆಮಕ್ಕಿ ವಸಂತಿ ಎಮ್. ಶೆಟ್ಟಿ ಉದ್ಘಾಟಿಸಿ, ಮಾತನಾಡಿ ವಿದ್ಯಾರ್ಥಿಗಳು ವ್ಯವಹಾರದ ಅರಿವು ಮಾಡಿಸಿಕೊಂಡರೆ ಭವಿಷ್ಯದ ದಿನಗಳಲ್ಲಿ ಶ್ರೇಷ್ಠ ಉದ್ಯಮಶೀಲರಾಗಬಹುದು. ಇದಕ್ಕೆ ಕಠಿಣ ಪರಿಶ್ರಮದ ಅಗತ್ಯವಿದೆಯೆಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

ಅಂತಿಮ ಲೆಕ್ಕ ಪರಿಶೋಧಕ ಪರೀಕ್ಷೆಯಲ್ಲಿ ತೇರ್ಗಡೆಯಾದ ಪ್ರಾಕ್ತನ ವಿದ್ಯಾರ್ಥಿಯಾದ ಶ್ರವಣ್ ಶೆಟ್ಟಿ ಇವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ತೀರ್ಪುಗಾರರಾದ ನಿವೃತ್ತ ವಾಣಿಜ್ಯ ತೆರಿಗೆ ಪರಿವೀಕ್ಷಣಾಧಿಕಾರಿ ಸುಬ್ರಹ್ಮಣ್ಯ ಶೆಟ್ಟಿ, ಕುಂದಾಪುರದ ಸರಕಾರಿ ಪದವಿ ಪೂರ್ವ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕರಾದ ದಿನಕರ್ ಶೆಟ್ಟಿ ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪ-ಪ್ರಾಂಶುಪಾಲ ಡಾ| ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಸಿದರು. ಕಾರ್ಯಕ್ರಮದ ಸಂಯೋಜಕರಾದ ಸುಧೀರ್ ಕುಮಾರ್ ಸ್ವಾಗತಿಸಿದರು. ವಾಣಿಜ್ಯ ವಿಭಾಗದ ಪ್ರಾಧ್ಯಾಪಕರಾದ ಮಾಲತಿ ಕುಂದರ್ ಅತಿಥಿಗಳನ್ನು ಪರಿಚಯಿಸಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥೆ ವೀಣಾ ವಿ. ಭಟ್ ವಂದಿಸಿದರು. ವಾಣಿಜ್ಯ ವಿಭಾಗದ ಪ್ರಾಧ್ಯಾಪಕ  ಸತೀಶ್ ಶೆಟ್ಟಿ ಹೆಸ್ಕತ್ತೂರು ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,300SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!