spot_img
Tuesday, March 3, 2026
spot_img

ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ  ಬೀಳ್ಕೊಡುಗೆ 

ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಮಾರ್ಚ್ 21 ರಂದು ಪ್ರಥಮ ಪಿಯುಸಿ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಉತ್ಕರ್ಷ ಎನ್ನುವ ಶೀರ್ಷಿಕೆ ಯಡಿಯಲ್ಲಿ ಶುಭ ವಿದಾಯ ಕಾರ್ಯಕ್ರಮವನ್ನು ಆಯೋಜಿಸಿದ್ದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ವಂಡ್ಸೆ ಆತ್ರಾಡಿಯ ವಿಜಯ ಮಕ್ಕಳ ಕೂಟ ಆಂಗ್ಲಮಾಧ್ಯಮ ಶಾಲೆಯ ಸಂಚಾಲಕರಾದ ಸುಭಾಶ್ಚಂದ್ರ್ರ ಶೆಟ್ಟಿ ಅವರು ಮಾತನಾಡಿ, ಸರಳ ಬದುಕಿನೊಂದಿಗೆ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು, ಸಮಾಜಮುಖಿ ಕಾರ್ಯಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸುವಂತಾಗಲಿ ಎಂದು ಹೇಳಿದರು.

ಅಧ್ಯಕ್ಷತೆಯನ್ನು ವಹಿಸಿದ ಶ್ರೀ ವೆಂಕಟರಮಣ ದೇವ್ ಎಜುಕೇಶನಲ್ & ಕಲ್ಚರಲ್ ಟ್ರಸ್ಟ್ ನ ಕಾರ್ಯದರ್ಶಿ ಶ್ರೀ. ಕೆ. ರಾಧಾಕೃಷ್ಣ ಶೆಣೈ ಯವರು ತಂದೆ, ತಾಯಿ, ಗುರುಗಳಿಗೆ ಗೌರವ ನೀಡಿ ಸತ್ಪಜೆ ಯಾಗಿ ಯಶಸ್ವಿ ಬದುಕನ್ನು ಸಾಗಿಸಿ ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ಶ್ರೀ ವೆಂಕಟರಮಣ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಕೃಷ್ಣ ಅಡಿಗ, ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಶ್ರೀಮತಿ ರೇಷ್ಮಾ ಡಿಸೋಜಾ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪ್ರಮೀಳಾ ಡಿಸೋಜಾ, ಹಿರಿಯ ರಸಾಯನ ಶಾಸ್ತ್ರ ಉಪನ್ಯಾಸಕರಾದ ರಮಾಕಾಂತ್ ರೇವಣ್ ಕರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಂದ ವಿವಿಧ ಮನೋರಂಜನಾ ಕಾರ್ಯಕ್ರಮಗಳು ನೆರವೇರಿತು. ವಿದ್ಯಾರ್ಥಿನಿಯರಾದ ಅದಿತಿ ಸ್ವಾಗತಿಸಿದರು. ಆಯಿಷಾ ಅಸ್ಮಿಯಾ ವಂದಿಸಿ, ಶೈನಿಶ್ ಅತಿಥಿಯನ್ನು ಪರಿಚಯಿಸಿದರು. ಶ್ರೀನಿಧಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

 

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!