spot_img
Tuesday, March 3, 2026
spot_img

6 ತಿಂಗಳವರೆಗೆ 18 ಬಿಜೆಪಿ ಶಾಸಕರ ಅಮಾನತುಗೊಳಿಸಿ ಸ್ಪೀಕರ್ ಯು.ಟಿ ಖಾದರ್ ಆದೇಶ

ಜನಪ್ರತಿನಿಧಿ (ಬೆಂಗಳೂರು) : ವಿಧಾನಸಭೆಯಲ್ಲಿ ಸ್ಪೀಕರ್ ಹುದ್ದೆಗೆ ಅಗೌರವ ತೋರಿದ ಬಿಜೆಪಿ ಶಾಸಕರನ್ನು ಸ್ಪೀಕರ್ ಯುಟಿ ಖಾದರ್ ಮುಂದಿನ 6 ತಿಂಗಳವರೆಗೆ ಕಲಾಪದಿಂದ ಅಮಾನತು ಮಾಡಿದ್ದಾರೆ.

ಬಿಜೆಪಿ ಶಾಸಕರಾದ ಭೈರತಿ ಬಸವರಾಜ, ಡಾ. ಶೈಲೇಂದ್ರ ಬೆಲ್ದಾಳೆ, ಮುನಿರತ್ನ, ಧೀರಜ್ ಮುನಿರತ್ನ, ಬಿಪಿ ಹರೀಶ್, ಡಾ. ಭರತ್ ಶೆಟ್ಟಿ, ಚಂದ್ರು ಲಮಾಣಿ, ಉಮಾನಾಥ ಕೋಟ್ಯಾನ್, ರಾಮಮೂರ್ತಿ, ದೊಡ್ಡನಗೌಡ ಪಾಟೀಲ್, ಡಾ. ಅಶ್ವತ್ಥ್ ನಾರಾಯಣ, ಯಶಪಾಲ್ ಸುವರ್ಣ, ಬಿ. ಸುರೇಶ್ ಗೌಡ, ಶರಣು ಸಲಗರ, ಚನ್ನಬಸಪ್ಪ, ಬಸವರಾಜ ಮತ್ತಿಮೂಡ, ಎಸ್ಆರ್ ವಿಶ್ವನಾಥ್ ಅವರನ್ನು ಮಾರ್ಷಲ್ ಗಳು ಕಲಾಪದಿಂದ ಹೊರಗೆ ತಂದು ಬಿಟ್ಟಿದ್ದಾರೆ.

ರಾಜ್ಯ ರಾಜಕಾರಣದಲ್ಲಿ ಕೋಲಾಹಲ ಎಬ್ಬಿಸಿರುವ ಹನಿಟ್ರ್ಯಾಪ್ ಹಾಗೂ ಮುಸ್ಲಿಂ ಮೀಸಲಾತಿ ವಿಚಾರಗಳು ವಿಧಾನಸಭೆ ಕಲಾಪದಲ್ಲಿ ಶುಕ್ರವಾರ ಹೈಡ್ರಾಮಾಕ್ಕೆ ಕಾರಣವಾಯಿತು. ಮುಸ್ಲಿಂ ಮೀಸಲಾತಿ ವಿಧೇಯಕದ ಕುರಿತು ಸರ್ಕಾರ ಚರ್ಚೆಗೆ ಮುಂದಾಯಿತು. ಇದೇ ವೇಳೆ ಬಿಜೆಪಿ ಶಾಸಕರು ತೀವ್ರ ವಿರೋಧ ವ್ಯಕ್ತಪಡಿಸಿದರು. ಅಲ್ಲದೆ, ವಿಧೇಯಕದ ಪ್ರತಿಗಳನ್ನು ಹರಿದು ಸ್ಪೀಕರ್ ಮೇಲೆ ಎಸೆಯುತ್ತಾ, ‘ಹನಿಟ್ರ್ಯಾಪ್ ಸರ್ಕಾರ’ ಎಂದು ಘೋಷಣೆಗಳನ್ನು ಕೂಗಿದರು. ಇದೇ ವೇಳೆ ಸ್ಪೀಕರ್ ಸಹ ಶಾಸಕರು ತಾಳ್ಮೆ ವಹಿಸುವಂತೆ, ಕಲಾಪಕ್ಕೆ ಅಡ್ಡಿಪಡಿಸದಂತೆ ಮನವಿ ಮಾಡಿದರು. ಶಾಸಕರು ಪ್ರತಿಭಟನೆಯನ್ನು ಮುಂದುವರೆಸಿದ್ದವು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!