spot_img
Sunday, May 17, 2026
spot_img

ಬ್ರಹ್ಮಾವರ: 29ನೇ ದಿನಕ್ಕೆ ಕಾಲಿಟ್ಟ ಅನ್ನದಾತರ ಅಹೋರಾತ್ರಿ ಸತ್ಯಾಗ್ರಹ

ಜನಪ್ರತಿನಿಧಿ ವಾರ್ತೆ] ಬ್ರಹ್ಮಾವರ: ಉಡುಪಿ ಜಿಲ್ಲಾ ರೈತ ಸಂಘದ ನೇತೃತ್ವದಲ್ಲಿ ಸಕ್ಕರೆ ಕಾರ್ಖಾನೆಯ ಬಳಿ ನಡೆಯುತ್ತಿರುವ ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ ಬಹುಕೋಟಿ ವಂಚನೆಯ ಮತ್ತು ಅದರ ತನಿಖೆಯಲ್ಲಿ ವಿಳಂಬವಾಗುತ್ತಿರುವುದರ ವಿರುದ್ಧ ‘ಅನ್ನದಾತರ ನ್ಯಾಯಾಗ್ರಹ’ 29ನೇ ದಿನಕ್ಕೆ ಕಾಲಿಟ್ಟಿದೆ.

ಈ ದಿನದ ಸತ್ಯಾಗ್ರಹ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಧ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ಕೆಡಿಪಿ ಸದಸ್ಯರಾದ ಪ್ರಸನ್ನ ಕುಮಾರ್ ಶೆಟ್ಟಿ ಕೆರಾಡಿ, ಚಂದ್ರಶೇಖರ ಶೆಟ್ಟಿ ಮರಾತ್ತೂರು, ಯುವ ಕಾಂಗ್ರೆಸ್ ಅಧ್ಯಕ್ಷ ಇಚ್ಚಿತಾರ್ಥ ಶೆಟ್ಟಿ, ನ್ಯಾಯವಾದಿ ಉಮೇಶ ಶೆಟ್ಟಿ ಶಾನ್ಕಟ್ಟು ನೇತೃತ್ವ ವಹಿಸಿದ್ದರು.

ಶಿರೂರು ರೈತ ಸಂಘದವರು ಸತ್ಯಾಗ್ರಹದಲ್ಲಿ ಭಾಗವಹಿಸಿದ್ದರು. ಶಿರೂರು ರೈತ ಸಂಘದ ರವೀಂದ್ರ ಶೆಟ್ಟಿ, ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಗೋಪಿನಾಥ ಭಟ್, ಆಲೂರು ಹರ್ಕೂರು ವ್ಯವಸಾಯ ಸೇವಾ ಸಂಘದ ಅಧ್ಯಕ್ಷರಾದ ಹೆಚ್.ಮಂಜಯ್ಯ ಶೆಟ್ಟಿ, ಸತೀಶ ಕಿಣಿ ಬೆಳ್ವೆ ಮೊದಲಾದವರು ಉಪಸ್ಥಿತರಿದ್ದರು.

ರೈತ ಸಂಘದ ಅಧ್ಯಕ್ಷರಾದ ಕೆ.ಪ್ರತಾಪಚಂದ್ರ ಶೆಟ್ಟಿ ಸತ್ಯಾಗ್ರಹಕ್ಕೆ ಆಗಮಿಸಿದವರನ್ನು ಆತ್ಮೀಯವಾಗಿ ಬರಮಾಡಿಕೊಂಡು, ಸತ್ಯಾಗ್ರಹವನ್ನು ಉದ್ದೇಶಿಸಿ ಮಾತನಾಡಿದರು.

ಕಳೆದ ಫೆಬ್ರವರಿ 22ರಂದು ಅನ್ನದಾತರ ಅಹೋರಾತ್ರಿ ಸತ್ಯಾಗ್ರಹ ಆರಂಭವಾಗಿತ್ತು. ಸರಕಾರದಿಂದ ಸೂಕ್ತ ಸ್ಪಂದನೆ ದೊರೆಯದ ಕಾರಣ ಸತ್ಯಾಗ್ರಹ ಮುಂದುವರಿಯುತ್ತಿದೆ.

ಜ್ಯಾಹೀರಾತು

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!