spot_img
Friday, April 25, 2025
spot_img

ಯಡ್ತಾಡಿಯಲ್ಲಿ ಮಹಿಳೆಯ ಸರಕಳವು: ಸರಗಳ್ಳನ ಬಂಧನ

ಕುಂದಾಪುರ: ಯಡ್ತಾಡಿಯಲ್ಲಿ ಗುರುವಾರ ಮಹಿಳೆಯ ಸರ ಕಳವು ಪ್ರಕರಣ ನಡೆದಿದ್ದು, ಪ್ರಕರಣವನ್ನು ಬೆನ್ನತ್ತಿದ್ದ ಪೊಲೀಸ್ ತಂಡ, ಕ್ಷಿಪ್ರ ಕಾರ್ಯಾಚರಣೆ ನಡೆಸಿ ಸರಗಳ್ಳನ್ನು ಶುಕ್ರವಾರ ಬಂಧಿಸಿದ್ದಾರೆ. ಸಂಭವಿತ್ತು. ಸರ ಕಳವು ಮಾಡುತ್ತಿದ್ದ ಆರೋಪಿ ಸಾಲಿಗ್ರಾಮ ಕಾರ್ಕಡ ಭಟ್ರಕಟ್ಟೆ ನಿವಾಸಿ ಮಂಜುನಾಥ ಮಯ್ಯ ಎಂಬ ವ್ಯಕ್ತಿಯನ್ನು ಬಂಧಿಸಿ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

ಮಾ.20ರಂದು ಯಡ್ತಾಡಿ ನಿವಾಸಿ ಸೀತಾ ಬಾಯಿ ಅವರು ಪಕ್ಕದ ಮನೆಯ ಕಾರ್ಯಕ್ರಮಕ್ಕೆಂದು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಅಲ್ತಾರು ಪಡುಮನೆ ಸಮೀಪ ಯಡ್ತಾಡಿ ಕಡೆಯಿಂದ ಬೈಕ್‌ನಲ್ಲಿ ಬಂದ ಆರೋಪಿ 28 ಗ್ರಾಂ ತೂಕದ ಚಿನ್ನದ ಕರಿಮಣಿ ಸರವನ್ನು ಕಿತ್ತುಕೊಂಡು ಮಂದಾರ್ತಿ ಕಡೆಗೆ ಪರಾರಿಯಾಗಿದ್ದ.

ಕೂಡಲೆ ಸ್ಥಳೀಯರು ಬ್ರಹ್ಮಾವರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದರು.  ವಿವಿಧ ಕಡೆಗಳ ಸಿ.ಸಿ. ಕೆಮರಾಗಳನ್ನು ಪೊಲೀಸರು ಪರಿಶೀಲಿಸಿದ್ದು, ಆಗ ಬೈಕ್ ಬಗ್ಗೆ ಮಾಹಿತಿ ದೊರೆತಿದೆ. ಅದರ ಆಧಾರದಲ್ಲಿ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಆರೋಪಿ ಮಂಜುನಾಥ ಮಯ್ಯ ಈ ಹಿಂದೆ ಬಾರ್ಕೂರು ಚೌಳಿಕೆರೆ ಸಮೀಪ ಮಹಿಳೆಯೊಬ್ಬರ ಕುತ್ತಿಗೆಯಿಂದ ಇದೇ ರೀತಿ ಚಿನ್ನವನ್ನು ಅಪಹರಿದ್ದ. ಈ ಬಗ್ಗೆಯೂ ಬ್ರಹ್ಮಾವರ ಠಾಣೆಯಲ್ಲೇ ಪ್ರಕರಣ ದಾಖಲಾಗಿತ್ತು. ಈ ಕಳವನ್ನು ಕೂಡಾ ತಾನೇ ಮಾಡಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದು, ಆ ಚಿನ್ನವನ್ನು ಸಹಕಾರಿ ಸಂಘವೊಂದರಲ್ಲಿ ಅಡವಿರಿಸಿದ್ದಾಗಿ ತಿಳಿಸಿದ್ದಾನೆ. ಪೊಲೀಸರು ಆ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

Related Articles

Stay Connected

21,961FansLike
3,912FollowersFollow
22,300SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!