spot_img
Sunday, April 5, 2026
spot_img

ಬ್ರಹ್ಮಾವರ ಸಕ್ಕರೆ ಕಾರ್ಖಾನೆ : 31ನೇ ದಿನಕ್ಕೆ ಕಾಲಿಟ್ಟ ರೈತ ಸಂಘದ ಸತ್ಯಾಗ್ರಹ 

ಜನಪ್ರತಿನಿಧಿ (ಬ್ರಹ್ಮಾವರ) :   ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ವಿಳಂಬ ನೀತಿಯನ್ನು ವಿರೋಧಿಸಿ ಉಡಪಿ ಜಿಲ್ಲಾ ರೈತ ಸಂಘ ನಡೆಸುತ್ತಿರುವ ಅನಿರ್ದಿಷ್ಟಾವಧಿ ಅಹೋರಾತ್ರಿ ಸತ್ಯಾಗ್ರಹ 31ನೇ ದಿನಕ್ಕೆ ತಲುಪಿದೆ.
ಹೆಂಗವಳ್ಳಿ ಪಂಚಾಯತ್ ರೈತ ಪರ ಮುಖಂಡರು ಇಂದು(ಸೋಮವಾರ) ರೈತ ಸಂಘದ ಹೋರಾಟಕ್ಕೆ ಬೆಂಬಲ ನೀಡಿದ್ದಾರೆ.
ಉಡುಪಿ ಜಿಲ್ಲಾ ರೈತ ಸಂಘದ ಅಧ್ಯಕ್ಷ ಪ್ರತಾಪಚಂದ್ರ ಶೆಟ್ಟಿ, ಸದಾನಂದ ಶೆಟ್ಟಿ ಕೆದೂರು, ಚೇತನ್ ರೈ ಗುಲ್ವಾಡಿ, ರಮೇಶ್ ಶೆಟ್ಟಿ ವಕ್ವಾಡಿ, ರಾಮಚಂದ್ರ ನಾವಡ, ಶರತ್ ಶೆಟ್ಟಿ ಗುಲ್ವಾಡಿ, ಸೀತಾರಾಮ್ ಶೆಟ್ಟಿ ಕೆದೂರು, ಕೃಷ್ಣ ಪೂಜಾರಿ ಅಮಾಸೆಬೈಲು ಸೇರಿ ಜಿಲ್ಲೆ ಪ್ರಮುಖ ರೈತ ಪರ ಮುಖಂಡರು ಭಾಗಿಯಾಗಿದ್ದರು.
ಹಗರಣದ ವಿರುದ್ಧ ಅಹೋರಾತ್ರಿ ಸತ್ಯಾಗ್ರಹ ನಡೆಯುತ್ತಿದ್ದರು, ಆಡಳಿತ ವ್ಯವಸ್ಥೆ ತಲೆಕೆಡಿಸಿಕೊಂಡಂತೆ ಕಾಣಿಸುತ್ತಿಲ್ಲ.  ಸ್ವತಃ ಡಿಸಿಎಂ ಡಿ.ಕೆ. ಶಿವಕುಮಾರ್ ಸತ್ಯಾಗ್ರಹ ನಡೆಯುತ್ತಿರುವ ಸ್ಥಳಕ್ಕೆ ಆಗಮಿಸಿ ಪ್ರತಾಪಚಂದ್ರ ಶೆಟ್ಟಿ ಮತ್ತು ರೈತ ಮುಖಂಡರೊಂದಿಗೆ ಚರ್ಚಿಸಿ ಪ್ರಕರಣದ ಬಗ್ಗೆ ಶೀಘ್ರ ಪೂರ್ಣಗೊಳಿಸಿ ತಪ್ಪಿತಸ್ಥರಿಗೆ ಕ್ರಮ ಆಗುವಂತೆ ಸೂಚಿಸಲಾಗುವುದೆಂದು ಭರವಸೆ ನೀಡಿ ಹೋದರೂ ಈವರೆಗೆ ಪ್ರಯೋಜನವಾಗಿಲ್ಲ. ರೈತ ಸಂಘದ ಪ್ರತಿಭಟನೆ ಮುನ್ನಡೆಯುತ್ತಲೇ ಇದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!