spot_img
Wednesday, April 1, 2026
spot_img

ಸಂಸತ್ ಭವನದಲ್ಲಿ ಬಾಲಿವುಡ್ ಚಿತ್ರ ‘ಛಾವಾ’ ವಿಶೇಷ ಪ್ರದರ್ಶನ : ಮೋದಿ, ಶಾ ಸೇರಿ ಸಚಿವರು, ಸಂಸದರಿಂದ ವೀಕ್ಷಣೆ

ಜನಪ್ರತಿನಿಧಿ (ನವದೆಹಲಿ) : ವಿಕ್ಕಿ ಕೌಶಲ್, ರಶ್ಮಿಕಾ ಮಂದಣ್ಣ ಅಭಿನಯದ ಬಾಲಿವುಡ್ ಚಿತ್ರ ‘ಛಾವಾ’ ಬಿಡುಗಡೆಯಾದ ದಿನದಿಂದಲೂ ಸಾಕಷ್ಟು ಸದ್ದು ಮಾಡುತ್ತಿರುವಂತೆಯೇ, ಸಂಸತ್ ಭವನದಲ್ಲಿ ಗುರುವಾರ ವಿಶೇಷ ಪ್ರದರ್ಶನ ಆಯೋಜಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಸಚಿವರು, ಸಂಸದರು ಸಿನಿಮಾವನ್ನು ವೀಕ್ಷಿಸಲಿದ್ದಾರೆ.

ಸಂಭಾಜಿ ಮಹಾರಾಜ ಪಾತ್ರದಲ್ಲಿ ಅಭಿನಯಿಸಿರುವ ವಿಕ್ಕಿ ಕೌಶಲ್ ಸೇರಿದಂತೆ ಇಡೀ ಚಿತ್ರತಂಡ ಪ್ರದರ್ಶನ ವೇಳೆ ಹಾಜರಿರುವ ಸಾಧ್ಯತೆಯಿದೆ.

ಫೆ.14 ರಂದು ಈ ಚಿತ್ರ ದೇಶಾದ್ಯಂತ ತೆರೆ ಕಂಡಿತ್ತು. ಛತ್ರಪತಿ ಸಂಭಾಜಿ ಮಹಾರಾಜ್ ಅವರ ಜೀವನಗಾಥೆಯ ಕಥಾ ಹಂದರ ಹೊಂದಿರುವ ಚಿತ್ರದಲ್ಲಿ ವಿಕ್ಕಿ ಕೌಶಲ್ ಸಂಭಾಜಿ ಪಾತ್ರದಲ್ಲಿ ಮತ್ತು ಆತನ ಪತ್ನಿ ಯಶುಬಾಯಿ ಪಾತ್ರದಲ್ಲಿ ರಶ್ಮಿಕಾ ಮಂದಣ್ಣ ಅಭಿನಯಿಸಿದ್ದಾರೆ.

ಕಳೆದ ವರ್ಷ ಡಿಸೆಂಬರ್ ನಲ್ಲಿ ಸಂಸತ್ತಿನಲ್ಲಿ ಪ್ರದರ್ಶಿಸಲಾದ ‘ದಿ ಸಬರಮತಿ ರಿಪೋರ್ಟ್ ಚಿತ್ರವನ್ನು ಪ್ರಧಾನಿ ಮೋದಿ ಮತ್ತಿತರ ಸಚಿವರು ವೀಕ್ಷಿಸಿದ್ದರು. ಛಾವಾ’ ಚಿತ್ರ ಬಿಡುಗಡೆಯಾದಾಗಿನಿಂದ ಇಲ್ಲಿಯವರೆಗೂ ಬಾಕ್ಸ್ ಆಫೀಸ್ ನಲ್ಲಿ ರೂ.780 ಕೋಟಿ ಗಳಿಕೆ ಮಾಡಿದೆ ಎಂದು ಚಿತ್ರತಂಡ ಹೇಳಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!