spot_img
Tuesday, March 31, 2026
spot_img

ಯತ್ನಾಳ್‌ ಉಚ್ಚಾಟನೆಗೆ ಯಡಿಯೂರಪ್ಪ ಕಾರಣ | ಲಿಂಗಾಯತ ಶಾಸಕರು ಬಿಜೆಪಿ ಬಿಟ್ಟು ಹೊರಬನ್ನಿ : ಜಯಮೃತ್ಯುಂಜಯ ಸ್ವಾಮೀಜಿ ಕರೆ

ಜನಪ್ರತಿನಿಧಿ (ಧಾರವಾಡ) : ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರನ್ನು ಬಿಜೆಪಿಯಿಂದ ಉಚ್ಛಾಟನೆ ಮಾಡಿದ ಬೆನ್ನಲ್ಲೇ ಎಲ್ಲಾ ಲಿಂಗಾಯತ ಶಾಸಕರು ಬಿಜೆಪಿ ಬಿಟ್ಟು ಹೊರಬನ್ನಿ ಎಂದು ಕೂಡಲ ಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಕರೆ ನೀಡಿದ್ದಾರೆ.

ಧಾರವಾಡದಲ್ಲಿ ಮಾತನಾಡಿದ ಅವರು, ಬಸನಗೌಡ ಪಾಟೀಲ್​ ಯತ್ನಾಳ ಉಚ್ಛಾಟನೆಗೆ ಬಿಎಸ್‌ ಯಡಿಯೂರಪ್ಪ ಮತ್ತು ಅವರ ಕುಟುಂಬವೇ ಕಾರಣ. ಇದನ್ನು ನಾನು ನೇರವಾಗಿ ಆರೋಪ ಮಾಡುತ್ತೇನೆ. ಬಿಜೆಪಿಯಲ್ಲಿರುವ ಪಂಚಮಸಾಲಿಗಳು ರಾಜೀನಾಮೆ ನೀಡಬೇಕು. ಪಕ್ಷದಲ್ಲಿರುವ ಪಂಚಮಸಾಲಿಗಳು ಹೊರಗೆ ಬರಬೇಕು. ಯತ್ನಾಳ ಉಚ್ಛಾಟನೆ ವಾಪಸ್ ಪಡೆಯಬೇಕು. ಇಲ್ಲದಿದ್ದರೆ ಪಂಚಮಸಾಲಿಗಳು ಬಿಜೆಪಿಯಿಂದ ಹೊರ ಬರಬೇಕು ಎಂದು ಕರೆ ನೀಡಿದ್ದಾರೆ.

ಯತ್ನಾಳ್‌ ಎಂದಿಗೂ ಪಕ್ಷ ವಿರೋಧಿ ಚಟುವಟಿಕೆ ನಡೆಸಿಲ್ಲ. ಕಾಣದ ಕೈಗಳು ಅವರನ್ನು ಉಚ್ಛಾಟನೆ ಮಾಡುವಂತೆ ಮಾಡಿವೆ. ಕುಟುಂಬ ರಾಜಕಾರಣ ಬೇಡ ಎನ್ನುವುದು ತಪ್ಪೇ? ಯತ್ನಾಳ್‌ ಏನೇ ಮಾತನಾಡಿದರೂ ಅವರು ಉತ್ತರ ಕರ್ನಾಟಕ, ಹಿಂದುತ್ವದ ಬಗ್ಗೆಯೇ ಮಾತನಾಡಿದ್ದಾರೆ ಎಂದರು.

ಯತ್ನಾಳ್‌ ಅವರನ್ನು ಉಚ್ಛಾಟನೆ ಮಾಡಿ ಬಿಜೆಪಿ ತನ್ನ ಕಾಲ ಮೇಲೆ ತಾನೇ ಕಲ್ಲು ಹಾಕಿಕೊಂಡಿದೆ. ಇದರಿಂದ ಬಿಜೆಪಿ ಪಕ್ಷಕ್ಕೆ ಹಿನ್ನಡೆಯಾಗಲಿದೆ. ಈಗ ಬಿಜೆಪಿಗೆ 60 ಸ್ಥಾನ ಬಂದಿವೆ. ಮುಂದೆ ಮೂವತ್ತು ಸೀಟು ಕೂಡ ಬರುವದಿಲ್ಲ. ಮೋದಿ ಹಾಗೂ ಅಮಿತ್ ಶಾ ಅವರಿಗೆ ಗೊತ್ತಿರದೇ ಇರುವ ಅಂಶಗಳು ಇಲ್ಲಿವೆ ಎಂದು ಹೇಳಿದರು.

ನಾವು ಉಗ್ರ ಹೋರಾಟ ಮಾಡುತ್ತೇವೆ. ಈ ಹೋರಾಟ ಪ್ರಧಾನಿ ಮೋದಿ, ಸಚಿವ ಅಮಿತ್​ ಶಾ ವಿರುದ್ಧ ಅಲ್ಲ. ಪಂಚಮಸಾಲಿಗಳ ನಾಯಕತ್ವ ತುಳಿದವರ ವಿರುದ್ಧ ಪ್ರತಿಭಟನೆ ಮಾಡುತ್ತೇವೆ. ಅಂದು, ಕಿತ್ತೂರು ರಾಣಿ ಚನ್ನಮ್ಮಳಿಗೆ ಮೋಸ ಮಾಡಿದ ಶಕ್ತಿಗಳೇ ಈಗ ಹೀಗೆ ಮಾಡುತ್ತಿವೆ. 21ನೇ ಶತಮಾನದಲ್ಲಿ ಅದೇ ಶಕ್ತಿಗಳು ಅಟ್ಟಹಾಸ ಮೆರೆಯುತ್ತಿವೆ. ಉಚ್ಛಾಟನೆ ವಾಪಸ್ ಪಡೆಯಲೇಬೇಕು. ಇಲ್ಲದೇ ಹೋದಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಬೆಳಗಾವಿಯಲ್ಲಿ ಸಭೆ ಕರೆಯುತ್ತೇನೆ. ಮುಂದೆ ಒಂದು ದಿನ ರಾಜ್ಯದ್ಯಂತ ಪ್ರತಿಭಟನೆ ಮಾಡುತ್ತೇವೆ. ವೀರೇಂದ್ರ ಪಾಟೀಲ, ಜೆ.ಎಚ್.ಪಟೇಲರಂತೆ ಯತ್ನಾಳರಿಗೂ ಮಾಡುತ್ತಿದ್ದಾರೆ. ಹೈಕಮಾಂಡ್ ನಮಗೆ ಕುಟುಂಬ ರಾಜಕಾರಣ ಬೇಕು ಎಂದು ನೇರವಾಗಿ ಹೇಳಲಿ. ನಾಳೆ ಎಲ್ಲವನ್ನೂ ಸಭೆಯಲ್ಲಿ ನಿರ್ಧಾರ ಮಾಡುತ್ತೇವೆ ಎಂದು ಗುಡುಗಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!