spot_img
Tuesday, March 17, 2026
spot_img

ಒಳ ಮೀಸಲಾತಿ : ನ್ಯಾ. ನಾಗಮೋಹನ್‌ ದಾಸ್‌ ಆಯೋಗದಿಂದ ಸಿಎಂಗೆ ಮಧ್ಯಂತರ ವರದಿ ಸಲ್ಲಿಕೆ

ಜನಪ್ರತಿನಿಧಿ (ಬೆಂಗಳೂರು) : ಪರಿಶಿಷ್ಠ ಜಾತಿಗಳಲ್ಲಿ ಒಳ ಮೀಸಲಾತಿ ಕಲ್ಪಿಸುವ ಬಗ್ಗೆ ನಿವೃತ್ತ ನ್ಯಾಯಮೂರ್ತಿ ಎಚ್‌. ಎನ್‌ ನಾಗಮೋಹನ್‌ ದಾಸ್‌ ಅವರು ಮಧ್ಯಂತರ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಂದು(ಗುರುವಾರ) ಸಲ್ಲಿಸಿದರು.

ವರದಿ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ʼಎರಡು ತಿಂಗಳುಗಳಿಂದ ವರದಿ ತಯಾರು ಮಾಡಿದ್ಧೇವೆ. ಸುಮಾರು ನೂರನಾಲ್ಕು ಪುಟಗಳ ವರದಿ ಕೊಟ್ಟಿದ್ದೇವೆ ಎಂದು ಅವರು ಹೇಳಿದ್ದಾರೆ.

ʼಮಧ್ಯಂತರ ವರದಿ ಕೊಡಿ ಎಂದು ಸರ್ಕಾರ ಕೇಳಿರಲಿಲ್ಲ. ಈ ವರದಿ ಮೇಲೆ ಸರ್ಕಾರ ಏನು ತೀರ್ಮಾನ ಮಾಡುತ್ತೋ ನೋಡೋಣʼ ಎಂದು ಅವರು ಹೇಳಿದ್ದಾರೆ.

ʼಉದ್ಯೋಗಕಾಂಕ್ಷಿಗಳಿಗೆ ಅನ್ಯಾಯ ಆಗಬಾರದು. ಅವರಿಗೆ ಶಾಶ್ವತವಾದ ಪರಿಹಾರ ಕೊಡಬೇಕು. ಈ ಬಗ್ಗೆ ಸರ್ಕಾರ ತೀರ್ಮಾನ ಕೈಗೊಳ್ಳುತ್ತದೆ. ವರದಿ ಬಗ್ಗೆ ಸರ್ಕಾರ ಏನೂ ಉತ್ತರ ಕೊಟ್ಟಿಲ್ಲ. ನೇಮಕಾತಿ ಬಗ್ಗೆ ನಾವು ಏನೂ ಸಲಹೆ ಕೊಟ್ಟಿಲ್ಲ ಎಂದು ಅವರು ತಿಳಿಸಿದ್ದಾರೆ.

ಸಮಾಜ ಕಲ್ಯಾಣ ಇಲಾಖೆಯ ಸಚಿವ ಎಚ್.ಸಿ ಮಹದೇವಪ್ಪ. ಆಹಾರ ಸಚಿವ ಕೆ. ಎಚ್.‌ ಮುನಿಯಪ್ಪ, ಅಬಕಾರಿ ಸಚಿವ ತಿಮ್ಮಾಪುರ, ಮಾಜಿ ಸಚಿವ ಎಚ್.‌ ಆಂಜನೇಯ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!